Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಯುಸಿಯಲ್ಲಿ ಅಪ್ಪು ಬಾಡಿಗಾರ್ಡ್ ಮಗಳ ಸಾಧನೆ, ಯಜಮಾನ್ರೆ ಓದಿಸಿದ್ದು ಎಂದ ಛಲಪತಿ

Puneeth Rajkumar: ದಿವಂಗತ ನಟ ಪುನೀತ್ ರಾಜ್​ಕುಮಾರ್ ಅವರ ಬಾಡಿಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಛಲಪತಿಯ ಪುತ್ರಿ ಅಮೂಲ್ಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ಪಾಸಾಗಿದ್ದಾರೆ. ಮಗಳ ಸಾಧನೆಗೆ ಪುನೀತ್ ರಾಜ್​ಕುಮಾರ್ ಅವರೇ ಕಾರಣ, ನನ್ನ ಮಕ್ಕಳನ್ನು ಓದಿಸಿದ್ದು ಅಪ್ಪು ಅವರೇ ಎಂದಿದ್ದಾರೆ ಛಲಪತಿ.

ಪಿಯುಸಿಯಲ್ಲಿ ಅಪ್ಪು ಬಾಡಿಗಾರ್ಡ್ ಮಗಳ ಸಾಧನೆ, ಯಜಮಾನ್ರೆ ಓದಿಸಿದ್ದು ಎಂದ ಛಲಪತಿ
Appu
Follow us
ಮಂಜುನಾಥ ಸಿ.
|

Updated on:Apr 10, 2025 | 1:08 PM

ಪುನೀತ್ ರಾಜ್​ಕುಮಾರ್ (Puneeth Rajkumar) ಅವರ ಮಾಜಿ ಬಾಡಿಗಾರ್ಡ್, ಚಾಲಕ ಎಲ್ಲವೂ ಆಗಿದ್ದ ಚಲಪತಿ ಪುತ್ರಿ ಅಮೂಲ್ಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಉತ್ತಮ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದಾಳೆ. ಅಮೂಲ್ಯ ಅವರಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 94.33% ಅಂಕಗಳು ಬಂದಿವೆ. ಸಹಜವಾಗಿಯೇ ಛಲಪತಿ ಅವರಿಗೆ ಖುಷಿಯಾಗಿದ್ದು, ಎಲ್ಲವೂ ಯಜಮಾನ್ರ (ಅಪ್ಪು) ಆಶೀರ್ವಾದ ಎಂದಿದ್ದಾರೆ. ಮಾತ್ರವಲ್ಲದೆ ತಮ್ಮ ಮಗಳನ್ನು ಓದಿಸಿದ್ದು ಅಪ್ಪು ಅವರೇ ಎಂದು ಸಹ ಹೇಳಿದ್ದಾರೆ.

ಹುಲ್ಲಹಳ್ಳಿ ಕ್ರೈಸ್ಟ್ ಅಕಾಡೆಮಿಯಲ್ಲಿ ಆಕೆ ವ್ಯಾಸಂಗ ಮಾಡುತ್ತಿದ್ದ ಛಲಪತಿ ಪುತ್ರಿ ಅಮೂಲ್ಯ ಕನ್ನಡ ಭಾಷೆಯಲ್ಲಿ 98 ಅಂಕ. ಎಕನಾಮಿಕ್ಸ್‌ನಲ್ಲಿ 97, ಇಂಗ್ಲೀಷ್ 90, ಬ್ಯುಸಿನೆಸ್ ಸ್ಟಡೀಸ್ 90, ಅಕೌಂಟೆನ್ಸಿಯಲ್ಲಿ 96 ಹಾಗೂ ಸ್ಟಾಟಿಸ್ಟಿಕ್ಸ್‌ನಲ್ಲಿ 95 ಅಂಕ ಸೇರಿ ಒಟ್ಟು 600 ಅಂಕಗಳಿಗೆ 566 ಅಂಕ ಗಳಿಸಿ ಗಮನ ಸೆಳೆದಿದ್ದಾರೆ. ಮುಂದೆ ಬಿ.ಕಾಂ ಓದಿ ಆ ಬಳಿಕ ಸಿಎ ಮಾಡುವ ಕನಸನ್ನು ಅಮೂಲ್ಯ ಹೊಂದಿದ್ದಾರೆ.

ಮಾಧ್ಯಮದ ಜೊತೆ ಮಾತಾಡಿರುವ ಛಲಪತಿ, ‘ನನ್ನ ಮಗಳ ಸಾಧನೆಗೆ ಪುನೀತ್ ರಾಜ್​ಕುಮಾರ್ ಅವರ ಆಶೀರ್ವಾದವೂ ಕಾರಣ. ಮಗಳು ಪ್ರಾಥಮಿಕ ಶಾಲೆಯಲ್ಲಿ ಇದ್ದಾಗಿನಿಂದಲೂ ಅವರೇ ಓದಿಸುತ್ತಿದ್ದರು. ನನ್ನ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಅವರೇ ಹೊತ್ತಿದ್ದರು’ ಎಂದಿದ್ದಾರೆ. ಚಲಪತಿ ಪುತ್ರಿ ಅಮೂಲ್ಯ ಮಾತನಾಡಿ, ‘ನಮ್ಮನ್ನು ಓದಿಸಿದ್ದ ಪುನೀತ್ ಅವರು, ಅವರ ಸಹಾಯಕ್ಕೆ ಓದಿನ ಮೂಲಕ ಧನ್ಯವಾದ ಹೇಳಿದ್ದೇನೆ’ ಎಂದಿದ್ದಾರೆ.

ಇದನ್ನೂ ಓದಿ: ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ

ಸುಮಾರು 11 ವರ್ಷಗಳ ಕಾಲ ಛಲಪತಿ ಅವರು ಪುನೀತ್ ರಾಜ್​ಕುಮಾರ್ ಅವರಿಗೆ ಬಾಡಿಗಾರ್ಡ್ ಆಗಿ ಕೆಲಸ ಮಾಡಿದರು. ಅವರ ಕುಟುಂಬದಲ್ಲಿ ಒಬ್ಬರಾಗಿದ್ದರು. ಪುನೀತ್ ರಾಜ್​ಕುಮಾರ್ ನಿಧನದ ಬಳಿಕ ಅವರು ಬೇರೆ ವೃತ್ತಿಯ ಕಡೆ ಗಮನ ಹರಿಸಿದ್ದಾರೆ. ಪುನೀತ್ ಅವರ ಹುಟ್ಟುಹಬ್ಬ, ಸ್ಮರಣೆ ಇದ್ದಾಗ ಸಮಾಧಿಗೆ ಭೇಟಿ ನೀಡಿ ಪೂಜೆ ಮಾಡುತ್ತಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:06 pm, Thu, 10 April 25

ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ