Sign In

By signing in or creating an account, you agree with Associated Broadcasting Company's Terms & Conditions and Privacy Policy.

Gandhada Gudi Trailer: ವಾವ್ಹ್​…ಬಹುನಿರೀಕ್ಷಿತ ‘ಗಂಧದಗುಡಿ’ ಟ್ರೈಲರ್ ರಿಲೀಸ್..!

Gandhada Gudi Trailer: 2021ರ ಅಕ್ಟೋಬರ್ 29ರಂದು ಅಪ್ಪು ನಿಧನ ಹೊಂದಿದರು. ಈ ಕಾರಣಕ್ಕೆ ಈ ವರ್ಷ ಅಕ್ಟೋಬರ್ 28ರಂದು ‘ಗಂಧದ ಗುಡಿ’ಯನ್ನು ರಿಲೀಸ್ ಮಾಡಲಾಗುತ್ತಿದೆ.

Gandhada Gudi Trailer: ವಾವ್ಹ್​...ಬಹುನಿರೀಕ್ಷಿತ 'ಗಂಧದಗುಡಿ' ಟ್ರೈಲರ್ ರಿಲೀಸ್..!
puneeth rajkumar
Follow us
TV9 Web
| Updated By: ಝಾಹಿರ್ ಯೂಸುಫ್

Updated on:Oct 09, 2022 | 10:36 AM

Gandhada Gudi Trailer: ಕರುನಾಡ ರತ್ನ ಪವರ್​ಸ್ಟಾರ್ ಪುನೀತ್ ರಾಜ್​ಕುಮಾರ್ (Puneeth Rajkumar) ಅವರ ಕನಸಿನ ಕೂಸು ಗಂಧದ ಗುಡಿ (Gandhada Gudi) ಸಾಕ್ಷ್ಯಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. “ಕರ್ನಾಟಕದ ಕಾಡು ಉಳಿಸಿ” ಎಂಬ ಡಾ. ರಾಜ್ ಸಂದೇಶದ ಮರುಜನ್ಮವೇ ಹೊಸ ಗಂಧದ ಗುಡಿ ಸಾರಾಂಶ. ವಿಶೇಷ ಎಂದರೆ ಇಲ್ಲಿ ನೀವು ಪವರ್​ಸ್ಟಾರ್ ಅವರನ್ನು ಕಾಣುವುದಿಲ್ಲ. ಬದಲಾಗಿ ಪುನೀತ್ ರಾಜ್​​ಕುಮಾರ್ ಅವರು ಸಾಮಾನ್ಯ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಈ ಸಾಕ್ಷ್ಯ ಚಿತ್ರವನ್ನು ನಿರ್ದೇಶಿಸಿರುವುದು ವೈಲ್ಡ್ ಕರ್ನಾಟಕ ಖ್ಯಾತಿಯ ನಿರ್ದೇಶಕ ಅಮೋಘವರ್ಷ. ವಿಶೇಷ ಎಂದರೆ ಇದಕ್ಕೆ ಗಂಧದ ಗುಡಿ ಎಂಬ ಹೆಸರಿದ್ದರೂ, ಕೇವಲ ಕಾಡುಗಳನ್ನು ಮಾತ್ರ ತೋರಿಸಲಾಗಿಲ್ಲ. ನದಿ, ಬೆಟ್ಟ ಗುಡ್ಡಗಳು ಸೇರಿದಂತೆ ಇನ್ನೂ ಹಲವು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಹಾಗೆಯೇ ಹೊಸ ಗಂಧದ ಗುಡಿಯ ಮತ್ತೊಂದು ವಿಶೇಷ ಎಂದರೆ ಟ್ರೈಲರ್ ನೋಡುತ್ತಿದ್ದಂತೆ ನೀವು ಕೂಡ ಅದೇ ಜಾಗದಲ್ಲಿ ಪ್ರಯಾಣಿಸುತ್ತಿರುವ ಅನುಭವ ನೀಡುತ್ತದೆ. ಅಂತಹ ಅತ್ಯಾದ್ಭುತ ಛಾಯಾಗ್ರಹಣವನ್ನು ನೀವು ಕಾಣಬಹುದು. ಒಟ್ಟಿನಲ್ಲಿ ಈ ಹಿಂದೆ ಇದ್ದ ನಿರೀಕ್ಷೆಯನ್ನು ಇಮ್ಮಡಿಗೊಳಿಸುವಂತೆ ಗಂಧದ ಗುಡಿ ಟ್ರೈಲರ್ ಬಿಡುಗಡೆಯಾಗಿದೆ.

ಪುನೀತ್ ರಾಜ್​ಕುಮಾರ್ ಅವರು ಕನ್ನಡ ಚಿತ್ರರಂಗದ ಬಗ್ಗೆ ಸಾಕಷ್ಟು ಕನಸುಗಳನ್ನು ಕಂಡಿದ್ದರು. ಹೊಸ ಹೊಸ ಆಲೋಚನೆಗಳೊಂದಿಗೆ ಪ್ರೇಕ್ಷಕರ ಎದುರು ಬರುವ ಉದ್ದೇಶ ಇಟ್ಟುಕೊಂಡಿದ್ದರು. ‘ಪಿಆರ್​ಕೆ ಪ್ರೊಡಕ್ಷನ್ಸ್​’ ಸ್ಥಾಪಿಸಿ ಹೊಸಬರಿಗೆ ಅವಕಾಶ ನೀಡುವ ಕೆಲಸವೂ ನಡೆಯುತ್ತಿತ್ತು. ಇದೇ ನಿರ್ಮಾಣ ಸಂಸ್ಥೆ ಅಡಿಯಲ್ಲಿ ‘ಗಂಧದ ಗುಡಿ’ ಸಾಕ್ಷ್ಯ ಚಿತ್ರ ನಿರ್ಮಾಣ ಆಗುತ್ತಿತ್ತು. ಇದರ ಕೆಲಸಗಳು ಬಾಕಿ ಇರುವಾಗಲೇ ಅವರು ಇಹಲೋಕ ತ್ಯಜಿಸಿದರು. ಈಗ ಈ ಡಾಕ್ಯುಮೆಂಟರಿ ರಿಲೀಸ್​ಗೆ ರೆಡಿ ಇದೆ. ಗಣೇಶ ಚತುರ್ಥಿ ಅಂಗವಾಗಿ ‘ಗಂಧದ ಗುಡಿ’ಯ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಪುನೀತ್ ಅವರು ಆನೆಯ ಜತೆ ನಿಂತಿದ್ದಾರೆ. ‘ಸರ್ವರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಈ ಹಬ್ಬದ ಸಂದರ್ಭದಲ್ಲಿ, ಭಗವಂತನು ನಿಮಗೆಲ್ಲರಿಗೂ ಸುಖ ಸಮೃದ್ಧಿ, ಉತ್ತಮ ಆರೋಗ್ಯ ಹಾಗೂ ಶಾಂತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ’ ಎಂದು ಈ ಪೋಸ್ಟರ್​ಗೆ ಕ್ಯಾಪ್ಶನ್ ನೀಡಲಾಗಿತ್ತು. ಇದೀಗ ಟೀಸರ್ ಬಿಡುಗಡೆ ಮಾಡುವ ಮೂಲಕ ಸಾಕ್ಷ್ಯಚಿತ್ರದ ಮತ್ತೊಂದು ಝಲಕ್ ತೋರಿಸಲಾಗಿದೆ.

2021ರ ಅಕ್ಟೋಬರ್ 29ರಂದು ಅಪ್ಪು ನಿಧನ ಹೊಂದಿದರು. ಈ ಕಾರಣಕ್ಕೆ ಈ ವರ್ಷ ಅಕ್ಟೋಬರ್ 28ರಂದು ‘ಗಂಧದ ಗುಡಿ’ಯನ್ನು ರಿಲೀಸ್ ಮಾಡಲಾಗುತ್ತಿದೆ. ಸಾಮಾನ್ಯವಾಗಿ ಡಾಕ್ಯುಮೆಂಟರಿಗಳು ಒಟಿಟಿ ಹಾಗೂ ಯೂಟ್ಯೂಬ್​ಗೆ ಮಾತ್ರ ಸೀಮಿತವಾಗಿರುತ್ತದೆ. ಆದರೆ, ‘ಗಂಧದ ಗುಡಿ’ಯನ್ನು ಪುನೀತ್ ಅವರ ಆಸೆಯಂತೆ ಚಿತ್ರಮಂದಿರದಲ್ಲೇ ಬಿಡುಗಡೆ ಮಾಡಲಾಗುತ್ತಿದೆ. ಇದಕ್ಕೆ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳಿಂದ ಉತ್ತಮ ಬೆಂಬಲ ಸಿಗುವ ನಿರೀಕ್ಷೆ ಇದೆ.

Published On - 10:30 am, Sun, 9 October 22

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !