AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deep Sidhu ಪಂಜಾಬಿ ನಟ-ಕಾರ್ಯಕರ್ತ ದೀಪ್ ಸಿಧು ರಸ್ತೆ ಅಪಘಾತದಲ್ಲಿ ಸಾವು

ಗಣರಾಜ್ಯೋತ್ಸವದಂದು ಕೆಂಪು ಕೋಟೆಯಲ್ಲಿ ಸಿಖ್ ಧ್ವಜ ಹಾರಿಸುವ ಸಂಚಿನಲ್ಲಿ ಭಾಗಿಯಾದ ಆರೋಪದ ಮೇಲೆ ಸಿಧು ಅವರನ್ನು ಎರಡು ಬಾರಿ ಬಂಧಿಸಲಾಗಿತ್ತು.

Deep Sidhu ಪಂಜಾಬಿ ನಟ-ಕಾರ್ಯಕರ್ತ ದೀಪ್ ಸಿಧು ರಸ್ತೆ ಅಪಘಾತದಲ್ಲಿ ಸಾವು
ದೀಪ್ ಸಿಧು (ಸಂಗ್ರಹ ಚಿತ್ರ)
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Feb 15, 2022 | 10:55 PM

Share

ದೆಹಲಿ: ಕಳೆದ ವರ್ಷ ಗಣರಾಜ್ಯೋತ್ಸವದಂದು (Republic Day) ರೈತರ ಪ್ರತಿಭಟನೆಯ ವೇಳೆ ಕೆಂಪು ಕೋಟೆ ಹಿಂಸಾಚಾರದ ನಂತರ ಬೆಳಕಿಗೆ ಬಂದ ಪಂಜಾಬಿ ನಟ-ಕಾರ್ಯಕರ್ತ ದೀಪ್ ಸಿಧು (Deep Sidhu) ಮಂಗಳವಾರ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಗಣರಾಜ್ಯೋತ್ಸವದಂದು ಕೆಂಪು ಕೋಟೆಯಲ್ಲಿ ಸಿಖ್ ಧ್ವಜ ಹಾರಿಸುವ ಸಂಚಿನಲ್ಲಿ ಭಾಗಿಯಾದ ಆರೋಪದ ಮೇಲೆ ಸಿಧು ಅವರನ್ನು ಎರಡು ಬಾರಿ ಬಂಧಿಸಲಾಗಿತ್ತು. ದೆಹಲಿಯನ್ನು ಬೈಪಾಸ್ ಮಾಡುವ ಕುಂಡ್ಲಿ-ಮನೇಸರ್-ಪಲ್ವಾಲ್ (KMP) ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತದ ಸ್ಥಳದ ದೃಶ್ಯಗಳು ಟ್ರೈಲರ್ ಟ್ರಕ್‌ನ ಹಿಂಭಾಗದಲ್ಲಿ ಬಿಳಿ ಮಹೀಂದ್ರಾ ಸ್ಕಾರ್ಪಿಯೊ ಒಡೆದಿರುವುದನ್ನು ತೋರಿಸುತ್ತವೆ.ಎಸ್ ಯುವಿಯ ನ ಡ್ರೈವರ್ ಸೈಡ್ ಸಂಪೂರ್ಣ ಹಾನಿಗೊಳಗಾಗಿದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ಸಿಧು ಅವರು ದೆಹಲಿಯಿಂದ ಪಂಜಾಬ್‌ನ ಭಟಿಂಡಾಗೆ ಹೋಗುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ರಾತ್ರಿ 9:30 ಕ್ಕೆ ಟ್ರೈಲರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಆಸ್ಪತ್ರೆಗೆ ತರುವಾಗಲೇ ಅವರು ಮೃತಪಟ್ಟಿದ್ದರು ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.ಕಳೆದ ವರ್ಷ ಫೆಬ್ರುವರಿಯಲ್ಲಿ ದೀಪ್ ಸಿಧು ಬಂಧನದ ನಂತರ, “ಹಿಂಸಾಚಾರವನ್ನು ಸೃಷ್ಟಿಸುವುದು ಮತ್ತು ನಮ್ಮ ರಾಷ್ಟ್ರಧ್ವಜವನ್ನು ಕಡೆಗಣಿಸುವುದು” ಆತನ ಉದ್ದೇಶವಾಗಿತ್ತು ಎಂದು ಅವರು ಹೇಳಿದ್ದರು. ಸಿಧು ಅವರು ಕೆಂಪು ಕೋಟೆಯ ಘಟನೆಯ “ಮುಖ್ಯ ಗಲಭೆಕೋರ ಮತ್ತು ಪ್ರಚೋದಕ”, ಅವರು “ಜನರನ್ನು ಕೆರಳಿಸಿ ಹಿಂಸಾಚಾರವನ್ನು ಪ್ರಚೋದಿಸಿದರು”. ಅವರು ಕತ್ತಿ, ಕೋಲು ಮತ್ತು ಬಾವುಟ ಹಿಡಿದಿರುವ ವಿಡಿಯೊ ಇದೆ ಎಂದು ಪೊಲೀಸರು ದೆಹಲಿ  ನ್ಯಾಯಾಲಯದಲ್ಲಿ ಹೇಳಿದ್ದರು.

ಆದಾಗ್ಯೂ, ನ್ಯಾಯಾಲಯವು ಈ ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಿದ್ದು, ಅವರು ಜನಪ್ರಿಯರಾಗಿದ್ದರಿಂದ ಪ್ರಾಸಿಕ್ಯೂಷನ್ ಅವರನ್ನು ಉದಾಹರಣೆಯಾಗಿ ಮಾಡಲು ಪ್ರಯತ್ನಿಸಿದೆ. ಆದರೆ ಇದು “ನ್ಯಾಯದ ವೈಫಲ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ” ಮತ್ತು ಅವರ ನಿರಂತರ ಬಂಧನವು ಅವರ ಜೀವನ ಮತ್ತು ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಹೇಳಿತ್ತು.

ಕೆಲವು ಗಂಟೆಗಳ ನಂತರ, ಸ್ಮಾರಕಕ್ಕೆ ಹಾನಿ ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರ ಅಪರಾಧ ವಿಭಾಗವು ಸಿಧು ಅವರನ್ನು ಬಂಧಿಸಿತು. ಅವರ ಬಂಧನವನ್ನು ಅತೀ ಕೆಟ್ಟ ಕ್ರಮ ಎಂದು ಕರೆದ ದೆಹಲಿ ನ್ಯಾಯಾಲಯವು ಅವರಿಗೆ ಎರಡನೇ ಬಾರಿಗೆ ಜಾಮೀನು ನೀಡಿತು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಜಾತಿಗೆ ಸಂಬಂಧಿಸಿದ ಅವಹೇಳನಕಾರಿ ಪದಗಳನ್ನು ಬಳಸಿದ್ದಕ್ಕಾಗಿ ದೀಪ್ ಸಿಧು ಅವರ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: ರಾಹುಲ್ ಗಾಂಧಿ ಟ್ವೀಟ್ ವಿರುದ್ಧ ಅಸ್ಸಾಂನಲ್ಲಿ ಸಾವಿರಾರು ದೂರುಗಳು ದಾಖಲು

Published On - 10:17 pm, Tue, 15 February 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ