ಈ ವಾರ ರಿಲೀಸ್ ಆಗಲ್ಲ ‘ಪುಷ್ಪ 2’ 3ಡಿ ವರ್ಷನ್; ಬುಕಿಂಗ್ ಸ್ಥಗಿತ

‘ಪುಷ್ಪ 2’ ಚಿತ್ರದ 3ಡಿ ವರ್ಷನ್ ರಿಲೀಸ್ ಮಾಡೋದಾಗಿ ತಂಡ ಹೇಳಿಕೊಂಡಿತ್ತು. ಆದರೆ, ಈಗ ತಂಡ ತನ್ನ ನಿಲುವು ಬದಲಿಸಿದೆ. ಕಾರಣಾಂತರಗಳಿಂದ ಈ ವಾರ ‘ಪುಷ್ಪ 2’ ಚಿತ್ರದ 3ಡಿ ವರ್ಷನ್ ರಿಲೀಸ್ ಆಗುತ್ತಿಲ್ಲ. ಈ ಬಗ್ಗೆ ಬಾಕ್ಸ್ ಆಫೀಸ್ ಪಂಡಿತ ತರಣ್ ಆದರ್ಶ್ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಈ ವಾರ ರಿಲೀಸ್ ಆಗಲ್ಲ ‘ಪುಷ್ಪ 2’ 3ಡಿ ವರ್ಷನ್; ಬುಕಿಂಗ್ ಸ್ಥಗಿತ
ಅಲ್ಲು ಅರ್ಜುನ್
Follow us
ರಾಜೇಶ್ ದುಗ್ಗುಮನೆ
|

Updated on: Dec 04, 2024 | 10:45 AM

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ವಿಶ್ವಾದ್ಯಂತ ಲಕ್ಷಾಂತರ ಟಿಕೆಟ್​ಗಳು ಮಾರಾಟ ಆಗಿವೆ. ಇದು ಸಿನಿಮಾ ಹೈಪ್​ಗೆ ಸೃಷ್ಟಿ ಆಗಿರೋ ಉದಾಹರಣೆ. ಈ ಚಿತ್ರ ಎಲ್ಲಾ ದಾಖಲೆಗಳನ್ನು ಉಡೀಸ್ ಮಾಡುವ ಸಾಧ್ಯತೆ ಇದೆ. ಈಗ ‘ಪುಷ್ಪ 2’ ಚಿತ್ರ 2ಡಿ ಜೊತೆ 3ಡಿಯಲ್ಲೂ ರಿಲೀಸ್ ಆಗಬೇಕಿತ್ತು. ಆರಂಭದಲ್ಲಿ ಇದಕ್ಕೆ ಬುಕಿಂಗ್ ಕೂಡ ಓಪನ್ ಆಗಿತ್ತು. ಆದರೆ, ಈಗ ಬುಕಿಂಗ್ ಸ್ಥಗಿತ ಮಾಡಲಾಗಿದೆ.

‘ಪುಷ್ಪ 2’ ಚಿತ್ರದ 3ಡಿ ವರ್ಷನ್ ರಿಲೀಸ್ ಮಾಡೋದಾಗಿ ತಂಡ ಹೇಳಿಕೊಂಡಿತ್ತು. ಆದರೆ, ಈಗ ತಂಡ ತನ್ನ ನಿಲುವು ಬದಲಿಸಿದೆ. ಕಾರಣಾಂತರಗಳಿಂದ ಈ ವಾರ ‘ಪುಷ್ಪ 2’ ಚಿತ್ರದ 3ಡಿ ವರ್ಷನ್ ರಿಲೀಸ್ ಆಗುತ್ತಿಲ್ಲ. ಈ ಬಗ್ಗೆ ಬಾಕ್ಸ್ ಆಫೀಸ್ ಪಂಡಿತ ತರಣ್ ಆದರ್ಶ್ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಇದು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

ಈಗಾಗಲೇ ತೆಲುಗು ಹಾಗೂ ಹಿಂದಿ 3ಡಿ ವರ್ಷನ್ ಬುಕಿಂಗ್ ಆಯ್ಕೆಯನ್ನು ‘ಬುಕ್ ಮೈ ಶೋ’ನಿಂದ ತೆಗೆದು ಹಾಕಲಾಗಿದೆ. ಮುಂದಿನ ವಾರಗಳಲ್ಲಿ 3ಡಿ ವರ್ಷನ್ ರಿಲೀಸ್ ಆಗುವ ಸಾಧ್ಯತೆ ಇದೆ. ‘ಪುಷ್ಪ’ ಚಿತ್ರ ಕೇವಲ 2ಡಿಯಲ್ಲಿ ಮಾತ್ರ ರಿಲೀಸ್ ಆಗಿತ್ತು. ಆದರೆ, ‘ಪುಷ್ಪ 2’ ಚಿತ್ರವನ್ನು ತಂಡದವರು ಹೊಸ ರೀತಿಯಲ್ಲಿ ಬಿಡುಗಡೆ ಮಾಡುವ ಸಾಹಸಕ್ಕೆ ಮುಂದಾದರು. ಆದರೆ, ಈಗ ಇದಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರದ 10 ಸಾವಿರ ಟಿಕೆಟ್ ಗಿವ್​ಅವೇ ಕೊಟ್ಟ ಎಬಿ ಡಿವಿಲಿಯರ್ಸ್

‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಸುಕುಮಾರ್ ಅವರ ನಿರ್ದೇಶನ ಇದೆ. ಮೈತ್ರಿ ಮೂವೀ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹೂಡಿದೆ. ಸಿನಿಮಾದ ಟ್ರೇಲರ್ ಹಾಗೂ ಹಾಡುಗಳು ಹವಾ ಸೃಷ್ಟಿ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
"ಇಸ್ಪೀಟ್ ಆಟ ಆಡಲೇಬೇಕಾ ಸರ್​"? ಪೊಲೀಸರಿಗೆ ಮಕ್ಕಳ ಪ್ರಶ್ನೆ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?
ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?
ವಿಜಯೇಂದ್ರ ಹೊಂದಾಣಿಕೆ ರಾಜಕಾರಣ ಮಾಡಬಾರದು: ಬಸನಗೌಡ ಯತ್ನಾಳ್
ವಿಜಯೇಂದ್ರ ಹೊಂದಾಣಿಕೆ ರಾಜಕಾರಣ ಮಾಡಬಾರದು: ಬಸನಗೌಡ ಯತ್ನಾಳ್
ದೆಹಲಿಯಲ್ಲಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿದ್ದೇನೆ: ರೇವಣ್ಣ
ದೆಹಲಿಯಲ್ಲಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿದ್ದೇನೆ: ರೇವಣ್ಣ