‘ಪುಷ್ಪ 2’ ಬಿಡುಗಡೆಗೂ ಮುನ್ನ 150 ಕೋಟಿ ರೂಪಾಯಿಗೆ ಹೆಚ್ಚಿತು ಅಲ್ಲು ಅರ್ಜುನ್​ ಸಂಬಳ

ಅಲ್ಲು ಅರ್ಜುನ್​ ಅವರು ಈಗ ದಕ್ಷಿಣ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ‘ಪುಷ್ಪ’ ಗೆಲುವಿನ ಬಳಿಕ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆದರು. ಈಗ ‘ಪುಷ್ಪ 2’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರ ತೆರೆಕಾಣುವುದಕ್ಕೂ ಮೊದಲೇ ಅವರ ಸಂಭಾವನೆ ಏರಿಕೆ ಆಗಿದೆ. ಅಲ್ಲು ಅರ್ಜುನ್​ ಅವರು 150 ಕೋಟಿ ರೂಪಾಯಿ ಡಿಮ್ಯಾಂಡ್​ ಮಾಡುತ್ತಿದ್ದಾರೆ ಎನ್ನಲಾಗಿದೆ.

‘ಪುಷ್ಪ 2’ ಬಿಡುಗಡೆಗೂ ಮುನ್ನ 150 ಕೋಟಿ ರೂಪಾಯಿಗೆ ಹೆಚ್ಚಿತು ಅಲ್ಲು ಅರ್ಜುನ್​ ಸಂಬಳ
ಅಲ್ಲು ಅರ್ಜುನ್
Follow us
ಮದನ್​ ಕುಮಾರ್​
|

Updated on: Apr 25, 2024 | 10:43 PM

ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್​ ಅವರು ‘ಪುಷ್ಪ 2’ (Pushpa 2) ಸಿನಿಮಾದ ಕೆಲಸಗಳಲ್ಲಿ ಸಂಪೂರ್ಣ ತೊಡಗಿಕೊಂಡಿದ್ದಾರೆ. ರಿಲೀಸ್​ ದಿನಾಂಕ ಹತ್ತಿರ ಆದಂತೆಲ್ಲ ಹೈಪ್​ ಹೆಚ್ಚಾಗುತ್ತಿದೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ದೊಡ್ಡ ಮ್ಯಾಜಿಕ್​ ಮಾಡುವ ಲಕ್ಷಣ ಕಾಣಿಸುತ್ತಿದೆ. ಬಿಡುಗಡೆಗೂ ಮುನ್ನವೇ ಬೇರೆ ಬೇರೆ ಮೂಲಗಳಿಂದ ಈ ಚಿತ್ರಕ್ಕೆ ನೂರಾರು ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ಇಷ್ಟೆಲ್ಲ ಕ್ರೇಜ್​ ಸೃಷ್ಟಿ ಆಗಿರುವುದರಿಂದ ಅಲ್ಲು ಅರ್ಜುನ್​ (Allu Arjun) ಅವರು ಸಂಬಳ ಜಾಸ್ತಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ವರದಿ ಆಗಿದೆ.

ಸಿನಿಮಾಗಳು ಸೂಪರ್​ ಹಿಟ್​ ಆದ ಬಳಿಕ ನಟರ ಸಂಭಾವನೆ ಜಾಸ್ತಿ ಆಗುವುದು ಸಹಜ. ಆದರೆ ಅಲ್ಲು ಅರ್ಜುನ್​ ಅವರು ‘ಪುಷ್ಪ 2’ ಬಿಡುಗಡೆಗೂ ಮುನ್ನವೇ ಬರೋಬ್ಬರಿ 150 ಕೋಟಿ ರೂಪಾಯಿಗೆ ತಮ್ಮ ಸಂಭಾವನೆ ಏರಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇಷ್ಟು ದಿನಗಳ ಕಾಲ ಅವರು 100 ಕೋಟಿ ರೂಪಾಯಿ ಪಡೆಯುತ್ತಿದ್ದರು. ಈಗ 150 ಕೋಟಿ ಡಿಮ್ಯಾಂಡ್​ ಮಾಡಲಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಪ್ರಭಾಸ್​ ಫ್ಯಾನ್​​ಗೆ ಅಲ್ಲು ಅರ್ಜುನ್​ ಅಭಿಮಾನಿಗಳಿಂದ ಥಳಿತ

ಅಲ್ಲು ಅರ್ಜುನ್​ ಅವರ ಚಾರ್ಮ್​ ಹೆಚ್ಚಲು ಬರೀ ಮಾರುಕಟ್ಟೆ ಮಾತ್ರ ಕಾರಣವಲ್ಲ. ಪ್ರತಿಭೆಯ ದೃಷ್ಟಿಯಿಂದಲೂ ಅವರ ಹವಾ ಹೆಚ್ಚಾಗಿದೆ. ‘ಪುಷ್ಪ’ ಸಿನಿಮಾದಲ್ಲಿನ ಅಭಿನಯಕ್ಕೆ ಅವರು ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ದುಬೈನ ಮೇಡಂ ಟುಸಾಡ್ಸ್​ ಮ್ಯೂಸಿಯಂನಲ್ಲಿ ಅವರ ಮೇಣದ ಪ್ರತಿಮೆ ನಿರ್ಮಾಣ ಆಗಿದೆ. ಅದರಿಂದ ಅವರಿಗೆ ಜಾಗತಿಕ ಮಟ್ಟದಲ್ಲಿ ಖ್ಯಾತಿ ಬಂದಿದೆ. ಈ ಎಲ್ಲ ಕಾರಣದಿಂದಲೂ ಅವರ ಬೇಡಿಕೆ ಡಬಲ್​ ಆಗಿದೆ. ‘ಪುಷ್ಪ 2’ ನಂತರ ಅವರು ನಟಿಸಲಿರುವ ಸಿನಿಮಾಗಳ ಬಜೆಟ್​ ಖಂಡಿತವಾಗಿ ಮುಗಿಲು ಮುಟ್ಟಲಿದೆ. ಅದರಲ್ಲಿ ಹೆಚ್ಚಿನ ಪಾಲು ಅಲ್ಲು ಅರ್ಜುನ್​ ಅವರ ಸಂಭಾವನೆಗೆ ಸೇರಲಿದೆ.

ಇದನ್ನೂ ಓದಿ: 51 ಟೇಕ್​ ತೆಗೆದುಕೊಂಡ ಅಲ್ಲು ಅರ್ಜುನ್​; ‘ಪುಷ್ಪ 2’ ಟೀಸರ್​ ಹಿಂದಿದೆ ಅಚ್ಚರಿ ವಿಷಯ

ಆಗಸ್ಟ್ 15ರಂದು ‘ಪುಷ್ಪ 2’ ತೆರೆಕಾಣಲಿದೆ. ವಿಶ್ವಾದ್ಯಂತ ಈ ಚಿತ್ರ ಬಿಡುಗಡೆ ಆಗಲಿದೆ. ಮೇ 1ರಂದು ಮೊದಲ ಹಾಡು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಸುಕುಮಾರ್​ ಅವರ ನಿರ್ದೇಶನ ಈ ಚಿತ್ರಕ್ಕಿದೆ. ಅಲ್ಲು ಅರ್ಜುನ್​ಗೆ ರಶ್ಮಿಕಾ ಮಂದಣ್ಣ ಜೋಡಿ ಆಗಿದ್ದಾರೆ. ಅವರು ನಿಭಾಯಿಸುತ್ತಿರುವ ಶ್ರೀವಲ್ಲಿ ಪಾತ್ರದ ಮೇಲೆ ಕೂಡ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಸಿನಿಮಾ ತೆರೆಕಂಡ ನಂತರ ರಶ್ಮಿಕಾ ಮಂದಣ್ಣ ಸಹ ಸಂಭಾವನೆ ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆ. ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಕಲಾವಿದರು ‘ಪುಷ್ಪ 2’ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್