Allu Arjun: ‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ ಲುಕ್​ ಹೀಗಿರುತ್ತಾ? ವೈರಲ್​ ಆಗಿದೆ ಹೊಸ ಫೋಟೋ

Pushpa 2 | Allu Arjun: ಅಲ್ಲು ಅರ್ಜುನ್​ ಅವರು ಈ ಹೊಸ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಇದಕ್ಕೆ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಎಲ್ಲರಿಗೂ ಈ ಫೋಟೋ ಇಷ್ಟ ಆಗಿದೆ.

Allu Arjun: ‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ ಲುಕ್​ ಹೀಗಿರುತ್ತಾ? ವೈರಲ್​ ಆಗಿದೆ ಹೊಸ ಫೋಟೋ
ಅಲ್ಲು ಅರ್ಜುನ್
Follow us
TV9 Web
| Updated By: ಮದನ್​ ಕುಮಾರ್​

Updated on:Jul 24, 2022 | 5:04 PM

ನಟ ಅಲ್ಲು ಅರ್ಜುನ್​ (Allu Arjun) ಅವರು ಪ್ಯಾನ್​ ಇಂಡಿಯಾ ಹೀರೋ ಆಗಿ ಮಿಂಚುತ್ತಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಮೊದಲೆಲ್ಲ ದಕ್ಷಿಣ ಭಾರತಕ್ಕೆ ಮಾತ್ರ ಸೀಮಿತವಾಗಿದ್ದ ಅವರ ಖ್ಯಾತಿ ‘ಪುಷ್ಪ’ (Pushpa Movie) ಚಿತ್ರದ ಯಶಸ್ಸಿನ ಬಳಿಕ ದೇಶಾದ್ಯಂತ ಹಬ್ಬಿತು. ವಿದೇಶದ ಕೆಲವು ಸೆಲೆಬ್ರಿಟಿಗಳನ್ನೂ ಈ ಸಿನಿಮಾ ಆಕರ್ಷಿಸಿದ್ದು ವಿಶೇಷ. ಈಗ ‘ಪುಷ್ಪ 2’ ಚಿತ್ರದ ಬಗ್ಗೆ ಎಲ್ಲರಿಗೂ ಕೌತುಕ ಮೂಡಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್​ ಅವರ ಲುಕ್​ ಹೇಗಿರಲಿದೆ ಎಂಬ ಪ್ರಶ್ನೆ ಎದುರಾಗಿದೆ. ಅದರ ನಡುವೆ ಅವರ ಹೊಸ ಫೋಟೋವೊಂದು ವೈರಲ್​ ಆಗಿದೆ. ಅದನ್ನು ನೋಡಿ ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ. ‘ಪುಷ್ಪ 2’ (Pushpa 2) ಸಿನಿಮಾದಲ್ಲಿ ಅಲ್ಲು ಅರ್ಜುನ್​ ಅವರು ಈ ಲುಕ್​ನಲ್ಲಿಯೇ ಕಾಣಿಸಿಕೊಳ್ಳಬಹುದು ಎಂದು ಕೆಲವರು ಊಹಿಸಿದ್ದಾರೆ. ಆದರೆ ಅದರ ಅಸಲಿಯತ್ತು ಬೇರೆ ಇದೆ.

ಅಲ್ಲು ಅರ್ಜುನ್​ ಅವರು ಸಿನಿಮಾ ಮಾತ್ರವಲ್ಲದೇ ಜಾಹೀರಾತು ಕ್ಷೇತ್ರದಲ್ಲೂ ಭಾರಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ಇತ್ತೀಚೆಗೆ ಒಂದು ಜಾಹೀರಾತಿನ ಶೂಟಿಂಗ್​ನಲ್ಲಿ ಅವರು ಭಾಗಿ ಆಗಿದ್ದರು. ಅದರಲ್ಲಿ ಅಲ್ಲು ಅರ್ಜುನ್​ ಲುಕ್​ ಈ ರೀತಿ ಇದೆ. ಆ ಫೋಟೋವನ್ನು ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಇದಕ್ಕೆ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಎಲ್ಲರಿಗೂ ಈ ಫೋಟೋ ಇಷ್ಟ ಆಗಿದೆ.

ಈ ಹೊಸ ಲುಕ್​ಗೂ ‘ಪುಷ್ಪ 2’ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ ಎನ್ನಲಾಗಿದೆ. ಆ ಸಿನಿಮಾದ ಗೆಟಪ್​ ಅನ್ನು ಸದ್ಯಕ್ಕೆ ಗೌಪ್ಯವಾಗಿ ಇಡಲಾಗಿದೆ. ಶೀಘ್ರದಲ್ಲೇ ನಿರ್ದೇಶಕ ಸುಕುಮಾರ್​ ಅವರು ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಆರಂಭಿಸಲಿದ್ದಾರೆ. ಅಲ್ಲು ಅರ್ಜುನ್​ ಅವರ ಜೊತೆ ತೆರೆ ಹಂಚಿಕೊಳ್ಳಲು ನಟಿ ರಶ್ಮಿಕಾ ಮಂದಣ್ಣ ಕಾದಿದ್ದಾರೆ. ಈ ಚಿತ್ರದಲ್ಲಿ ಫಹಾದ್​ ಫಾಸಿಲ್​, ಡಾಲಿ ಧನಂಜಯ ಮುಂತಾದವರು ನಟಿಸಲಿದ್ದಾರೆ.

ಇದನ್ನೂ ಓದಿ
Image
‘ಪುಷ್ಪ 2’ ಮಾತ್ರವಲ್ಲ ‘ಪುಷ್ಪ 3’ ಕೂಡ ಬರಲಿದೆ: ಸುದ್ದಿ ಖಚಿತಪಡಿಸಿದ ಫಹಾದ್​ ಫಾಸಿಲ್​; ಇಲ್ಲಿದೆ ವಿವರ
Image
Pushpa 2: ಫಾರಿನ್​ ಹುಡುಗಿ ಜತೆ ಅಲ್ಲು ಅರ್ಜುನ್​​ ರೊಮ್ಯಾನ್ಸ್​; ‘ಪುಷ್ಪ 2’ ಚಿತ್ರದಲ್ಲಿ ರಶ್ಮಿಕಾ ಪಾತ್ರಕ್ಕೆ ಬೀಳುತ್ತಾ ಕತ್ತರಿ?
Image
Pushpa 2 Story: ರಾಕಿ ಭಾಯ್​ ರೀತಿ ವಿದೇಶಕ್ಕೆ ಹೋಗ್ತಾನಾ ಪುಷ್ಪರಾಜ್​? ‘ಕೆಜಿಎಫ್​ 2’ ಚಿತ್ರಕ್ಕೆ ‘ಪುಷ್ಪ 2’ ಕಥೆ ಹೋಲಿಕೆ
Image
ಅಬ್ಬಬ್ಬಾ.. ‘ಪುಷ್ಪ 2’ ಸಿನಿಮಾದ ನಿರ್ದೇಶನಕ್ಕೆ ಸುಕುಮಾರ್​ ಪಡೆಯುವ ಸಂಭಾವನೆ ಇಷ್ಟೊಂದಾ?

‘ಕೆಜಿಎಫ್​ 2’ ಸಿನಿಮಾದ ಭರ್ಜರಿ ಗೆಲುವಿನ ಬಳಿಕ ‘ಪುಷ್ಪ 2’ ತಂಡದ ಮೇಲೆ ಒತ್ತಡ ಹೆಚ್ಚಿದೆ. ಹಾಗಾಗಿ ಕಥೆಯಲ್ಲಿ ಒಂದಷ್ಟು ಬದಲಾವಣೆ ಮಾಡಿಕೊಳ್ಳಲಾಗುತ್ತಿದೆ ಎಂಬ ಗುಸುಗುಸು ಕೇಳಿಬಂದಿದೆ. ಆ ಕಾರಣದಿಂದಲೇ ‘ಪುಷ್ಪ 2’ ಶೂಟಿಂಗ್​ ಆರಂಭಕ್ಕೆ ವಿಳಂಬ ಆಗುತ್ತಿದೆ ಎನ್ನಲಾಗಿದೆ.

Published On - 5:04 pm, Sun, 24 July 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ