‘ಇನ್ಮುಂದೆ ಇಂಥ ವಿಡಿಯೋ ಜಾಸ್ತಿ ನೋಡುತ್ತೀರಿ’; ಸ್ಫೂರ್ತಿ ನೀಡಲು ಮುಂದಾದ ರಶ್ಮಿಕಾ

ಒಂದೆಡೆ ‘ಅನಿಮಲ್’ ಸಿನಿಮಾದ ಪ್ರಮೋಷನ್​, ಇನ್ನೊಂದಡೆ ‘ಪುಷ್ಪ 2’ ಚಿತ್ರದ ಶೂಟಿಂಗ್​. ಹಾಗಾಗಿ ರಶ್ಮಿಕಾ ಮಂದಣ್ಣ ಅವರು ಫಿಟ್ನೆಸ್​ ಬಗ್ಗೆ ಗಮನ ಹರಿಸಲು ಸಾಧ್ಯವಾಗಿರಲಿಲ್ಲ. ಈಗ ಅವರು ಅಭಿಮಾನಿಗಳಿಗಾಗಿ ಹೊಸ ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಸ್ಫೂರ್ತಿ ನೀಡುವ ಸಲುವಾಗಿ ಇನ್ನುಂದೆ ಇನ್ನೂ ಹೆಚ್ಚಿನ ವಿಡಿಯೋಗಳನ್ನು ಹಂಚಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

‘ಇನ್ಮುಂದೆ ಇಂಥ ವಿಡಿಯೋ ಜಾಸ್ತಿ ನೋಡುತ್ತೀರಿ’; ಸ್ಫೂರ್ತಿ ನೀಡಲು ಮುಂದಾದ ರಶ್ಮಿಕಾ
ರಶ್ಮಿಕಾ ಮಂದಣ್ಣ
Follow us
ಮದನ್​ ಕುಮಾರ್​
|

Updated on: Mar 21, 2024 | 10:46 PM

ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾದ ರಶ್ಮಿಕಾ ಮಂದಣ್ಣ (Rashmika Mandanna) ಅವರು ಫಿಟ್ನೆಸ್​ಗೆ ಹೆಚ್ಚು ಒತ್ತು ನೀಡುತ್ತಾರೆ. ಆದರೆ ‘ಪುಷ್ಪ 2’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಆಗಿರುವ ಅವರಿಗೆ ಕಾರಣಾಂತರಗಳಿಂದ ಕಳೆದ ಕೆಲವು ತಿಂಗಳಿಂದ ಸರಿಯಾಗಿ ವರ್ಕೌಟ್​ (Workout) ಮಾಡಲು ಸಾಧ್ಯವಾಗಿರಲಿಲ್ಲ. ಈಗ ಅವರು ಮತ್ತೆ ಫಿಟ್ನೆಸ್​ ಬಗ್ಗೆ ಕಾಳಜಿ ವಹಿಸಲು ಮುಂದಾಗಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಅಭಿಮಾನಿಗಳಿಗೆ ಸ್ಫೂರ್ತಿ ನೀಡಬೇಕು ಎಂದು ಕೂಡ ಅವರು ನಿರ್ಧರಿಸಿದ್ದಾರೆ. ಹಾಗಾಗಿ ತಮ್ಮ ವರ್ಕೌಟ್​ ವಿಡಿಯೋಗಳನ್ನು (Rashmika Mandanna Workout Video) ಹೆಚ್ಚು ಶೇರ್​ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

‘ನಾನು ವರ್ಕೌಟ್​ ವಿಡಿಯೋ ಹಂಚಿಕೊಳ್ಳದೇ ಸ್ವಲ್ಪ ಸಮಯ ಆಯಿತು ಅಲ್ಲವೇ? ನಾನು ಸರಿಯಾಗಿ ವರ್ಕೌಟ್​ ಮಾಡದೇ 4-5 ತಿಂಗಳಾಗಿತ್ತು. ಆದರೆ ನಾನೀಗ ಮತ್ತೆ ಮರಳಿದ್ದೇನೆ. ನಿಮಗೆ ಸ್ಫೂರ್ತಿ ನೀಡುವ ಉದ್ದೇಶದಿಂದ ಇನ್ಮುಂದೆ ಇಂಥ ಅನೇಕ ವಿಡಿಯೋಗಳನ್ನು ಹಂಚಿಕೊಳ್ಳುತ್ತೇನೆ’ ಎಂದು ರಶ್ಮಿಕಾ ಮಂದಣ್ಣ ಅವರು ಪೋಸ್ಟ್ ಮಾಡಿದ್ದಾರೆ. ವಿಡಿಯೋ ನೋಡಿದ ಅನೇಕ ಅಭಿಮಾನಿಗಳು ‘ನೀವೇ ನಮಗೆ ಸ್ಫೂರ್ತಿ’ ಎಂದು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರದ ಶ್ರೀವಲ್ಲಿ ಲುಕ್​ ಲೀಕ್​; ರಶ್ಮಿಕಾ ನೋಡಲು ಮುಗಿಬಿದ್ದ ಫ್ಯಾನ್ಸ್​

ಪ್ಯಾನ್​ ಇಂಡಿಯಾ ನಟಿಯಾಗಿ ರಶ್ಮಿಕಾ ಮಂದಣ್ಣ ಅವರು ಮಿಂಚುತ್ತಿದ್ದಾರೆ. ಬಾಲಿವುಡ್​ ಮತ್ತು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಅವರಿಗೆ ಸಖತ್​ ಬೇಡಿಕೆ ಇದೆ. ಸಿನಿಮಾದಿಂದ ಸಿನಿಮಾಗೆ ಅವರ ಖ್ಯಾತಿ ಹೆಚ್ಚುತ್ತಲೇ ಇದೆ. ಕಳೆದ ವರ್ಷ ಬಿಡುಗಡೆ ಆದ ‘ಅನಿಮಲ್​’ ಸಿನಿಮಾದಿಂದ ಅವರು ದೊಡ್ಡ ಯಶಸ್ಸು ಕಂಡರು. ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

ರಶ್ಮಿಕಾ ಮಂದಣ್ಣ ಇನ್​ಸ್ಟಾಗ್ರಾಮ್​ ಪೋಸ್ಟ್​:

2024ರಲ್ಲಿ ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾ ಮೂಲಕ ಮಿಂಚು ಹರಿಸಲಿದ್ದಾರೆ. ಈ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಸೃಷ್ಟಿಯಾಗಿದೆ. ಬಿಗ್​ ಬಜೆಟ್​ನ ಈ ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ. ಕೆಲವೇ ದಿನಗಳ ಹಿಂದೆ ಜಪಾನ್​ಗೆ ತೆರಳಿದ್ದ ರಶ್ಮಿಕಾ ಮಂದಣ್ಣ ಅವರು ಅಲ್ಲಿಯೂ ‘ಪುಷ್ಪ 2’ ಬಗ್ಗೆ ಮಾತನಾಡಿದ್ದರು. ಈ ಸಿನಿಮಾದಲ್ಲಿ ಅವರು ಶ್ರೀವಲ್ಲಿ ಎಂಬ ಪಾತ್ರ ಮಾಡುತ್ತಿದ್ದಾರೆ. ಶೂಟಿಂಗ್​ ಸಂದರ್ಭದ ವಿಡಿಯೋ ಇತ್ತೀಚೆಗೆ ಲೀಕ್​ ಆಗಿದ್ದು, ಅದರಲ್ಲಿ ರಶ್ಮಿಕಾ ಅವರ ಲುಕ್​ ನೋಡಿ ಫ್ಯಾನ್ಸ್​ ನಿರೀಕ್ಷೆ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್