2024ರ ಆ.15ಕ್ಕೆ ಅಜಯ್​ ದೇವಗನ್​ ವರ್ಸಸ್​ ಅಲ್ಲು ಅರ್ಜುನ್​; ‘ಪುಷ್ಪ 2’ ಚಿತ್ರಕ್ಕೆ ದೊಡ್ಡ ಪೈಪೋಟಿ

ಬಾಕ್ಸ್​ ಆಫೀಸ್​ನಲ್ಲಿ ಕ್ಲ್ಯಾಶ್​ ಆಗದಂತೆ ನೋಡಿಕೊಳ್ಳಲು ನಿರ್ಮಾಪಕರು ಸಾಕಷ್ಟು ಪ್ರಯತ್ನ ಮಾಡುತ್ತಾರೆ. ಹಾಗಿದ್ದರೂ ಕೂಡ ಕೆಲವೊಮ್ಮೆ ಈ ರೀತಿ ಪೈಪೋಟಿ ಸಂಭವಿಸುತ್ತದೆ. ‘ಪುಷ್ಪ 2’ ಮತ್ತು ‘ಸಿಂಗಂ ಅಗೇನ್​’ ಸಿನಿಮಾಗಳ ವಿಚಾರದಲ್ಲಿ ಹಾಗೆಯೇ ಆಗುತ್ತಿದೆ. ಒಂದೇ ದಿನ ಈ ಬಿಗ್​ ಬಜೆಟ್​ ಸಿನಿಮಾಗಳು ರಿಲೀಸ್​ ಆಗಲಿವೆ.

2024ರ ಆ.15ಕ್ಕೆ ಅಜಯ್​ ದೇವಗನ್​ ವರ್ಸಸ್​ ಅಲ್ಲು ಅರ್ಜುನ್​; ‘ಪುಷ್ಪ 2’ ಚಿತ್ರಕ್ಕೆ ದೊಡ್ಡ ಪೈಪೋಟಿ
ಪುಷ್ಪ 2 ಪೋಸ್ಟರ್​, ಅಜಯ್​ ದೇವಗನ್​
Follow us
ಮದನ್​ ಕುಮಾರ್​
|

Updated on: Sep 11, 2023 | 10:50 PM

ಮುಂದಿನ ವರ್ಷ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ‘ಪುಷ್ಪ 2’ ಸಿನಿಮಾ (Pushpa 2) ಬಿಡುಗಡೆ ಆಗಲಿದೆ. ಈ ಸಿನಿಮಾ ಮೇಲೆ ನಿರೀಕ್ಷೆ ಮೂಡಲು ಹತ್ತಾರು ಕಾರಣಗಳಿವೆ. 2021ರಲ್ಲಿ ರಿಲೀಸ್​ ಆಗಿ ಸೂಪರ್​ ಹಿಟ್​ ಆದ ‘ಪುಷ್ಪ’ ಚಿತ್ರಕ್ಕಾಗಿ ನಟ ಅಲ್ಲು ಅರ್ಜುನ್​ (Allu Arjun) ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಹಾಗಾಗಿ ಆ ಸಿನಿಮಾದ ಸೀಕ್ವೆಲ್​ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. 2024ರ ಆಗಸ್ಟ್​ 15ರಂದು ‘ಪುಷ್ಪ 2’ ಸಿನಿಮಾ ಬಿಡುಗಡೆ ಆಗಲಿದೆ. ಇದು ಹೈವೋಲ್ಟೇಜ್​ ಸಿನಿಮಾ ಆದ್ದರಿಂದ ಇದರ ಎದುರು ಪೈಪೋಟಿ ನೀಡಲು ಬಹುತೇಕ ಚಿತ್ರತಂಡಗಳು ಹಿಂದೇಟು ಹಾಕುತ್ತವೆ. ಆದರೆ ಬಾಲಿವುಡ್​ನ ‘ಸಿಂಗಂ ಅಗೇನ್​’ (Singham Again) ಸಿನಿಮಾ ಅಂತಹ ಸಾಹಸಕ್ಕೆ ಮುಂದಾಗಿದೆ. ಅಜಯ್​ ದೇವಗನ್ ನಟನೆಯ ಆ ಚಿತ್ರ ಕೂಡ 2024ರ ಆ.15ರಂದು ಬಿಡುಗಡೆ ಆಗಲಿದೆ.

ಬಾಕ್ಸ್​ ಆಫೀಸ್​ನಲ್ಲಿ ಕ್ಲ್ಯಾಶ್​ ಆಗದಂತೆ ನೋಡಿಕೊಳ್ಳಲು ನಿರ್ಮಾಪಕರು ಸಾಕಷ್ಟು ಪ್ರಯತ್ನ ಮಾಡುತ್ತಾರೆ. ಹಾಗಿದ್ದರೂ ಕೂಡ ಕೆಲವೊಮ್ಮೆ ಈ ರೀತಿ ಪೈಪೋಟಿ ಸಂಭವಿಸುತ್ತದೆ. ‘ಪುಷ್ಪ 2’ ಮತ್ತು ‘ಸಿಂಗಂ ಅಗೇನ್​’ ಸಿನಿಮಾಗಳ ವಿಚಾರದಲ್ಲಿ ಹಾಗೆಯೇ ಆಗುತ್ತಿದೆ. ಒಂದೇ ದಿನ ಈ ಬಿಗ್​ ಬಜೆಟ್​ ಸಿನಿಮಾಗಳು ರಿಲೀಸ್​ ಆಗಲಿವೆ. ಯಾವ ಚಿತ್ರಕ್ಕೆ ಎಷ್ಟು ಕಲೆಕ್ಷನ್​ ಆಗಲಿದೆ ಎಂಬ ಬಗ್ಗೆ ಅಭಿಮಾನಿಗಳು ಈಗಲೇ ಲೆಕ್ಕಚಾರ ಹಾಕಲು ಶುರು ಮಾಡಿದ್ದಾರೆ. ಈ ಸಿನಿಮಾಗಳ ಬಿಡುಗಡೆಗೆ ಇನ್ನೂ ಸಾಕಷ್ಟು ಸಮಯ ಇರುವುದರಿಂದ ಅಷ್ಟರಲ್ಲಿ ರಿಲೀಸ್​ ಡೇಟ್​ ಬದಲಾದರೂ ಅಚ್ಚರಿ ಏನಿಲ್ಲ.

‘ಸಿಂಗಂ ಅಗೇನ್​’ ಸಿನಿಮಾಗೆ ರೋಹಿತ್​ ಶೆಟ್ಟಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅಜಯ್​ ದೇವಗನ್​ ಮಾತ್ರವಲ್ಲದೇ ಅನೇಕ ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕರೀನಾ ಕಪೂರ್​ ಖಾನ್​, ದೀಪಿಕಾ ಪಡುಕೋಣೆ ಸಹ ಮುಖ್ಯ ಪಾತ್ರಗಳನ್ನು ಮಾಡುತ್ತಿದ್ದಾರೆ. ಇದೇ ಚಿತ್ರದಲ್ಲಿ ಟೈಗರ್​ ಶ್ರಾಫ್​ ಮತ್ತು ಅಕ್ಷಯ್​ ಕುಮಾರ್​ ಅವರು ಅತಿಥಿ ಪಾತ್ರ ಮಾಡುತ್ತಾರೆ ಎಂಬ ಮಾತು ಕೂಡ ಕೇಳಿಬರುತ್ತಿದೆ. ಹಾಗಾಗಿ ಹಿಂದಿ ಪ್ರೇಕ್ಷಕರ ವಲಯದಲ್ಲಿ ಈ ಚಿತ್ರದ ಬಗ್ಗೆ ಹೈಪ್​ ಹೆಚ್ಚುತ್ತಿದೆ. ‘ಪುಷ್ಪ 2’ ಕೂಡ ಪ್ಯಾನ್​ ಇಂಡಿಯಾ ಸಿನಿಮಾ ಆದ್ದರಿಂದ ಉತ್ತರ ಭಾರತದಲ್ಲಿ ‘ಸಿಂಗಂ ಅಗೇನ್​’ ಚಿತ್ರದ ವಿರುದ್ಧ ಪೈಪೋಟಿ ಹೆಚ್ಚಾಗಲಿದೆ.

ಪ್ರೇಕ್ಷಕರನ್ನು ಹೆದರಿಸಲು ಸಜ್ಜಾಗುತ್ತಿರುವ ನಟ ಅಜಯ್​ ದೇವಗನ್​; ‘ಭೋಲಾ’ ಸೋಲಿನ ಬಳಿಕ ಈ ನಿರ್ಧಾರ

‘ಪುಷ್ಪ 2’ ಸಿನಿಮಾದ ಹವಾ ಕಮ್ಮಿಯೇನಿಲ್ಲ. ನಿರ್ದೇಶಕ ಸುಕುಮಾರ್​ ಅವರು ಈ ಚಿತ್ರವನ್ನು ಬಹಳ ದೊಡ್ಡದಾಗಿ ಕಟ್ಟಿಕೊಡುತ್ತಿದ್ದಾರೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ಈ ಸಿನಿಮಾಗೆ ನೂರಾರು ಕೋಟಿ ರೂಪಾಯಿಯನ್ನು ಸುರಿಯುತ್ತಿದೆ. ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​, ಫಹಾದ್ ಫಾಸಿಲ್​ ಸೇರಿದಂತೆ ಅನೇಕ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದರ ಶೂಟಿಂಗ್​ ಭರದಿಂದ ಸಾಗುತ್ತಿದೆ. ರಿಲೀಸ್​ ಡೇಟ್​ ಅನೌನ್ಸ್​ ಆದ ಬಳಿಕ ‘ಪುಷ್ಪ 2’ ಸಿನಿಮಾದ ಬಗ್ಗೆ ಚರ್ಚೆ ಜೋರಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು