AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಸಿನಿಮಾ ಸೆಟ್ ವಿಡಿಯೋ ಲೀಕ್; ಕ್ಲೈಮ್ಯಾಕ್ಸ್ ಶೂಟ್​ನಲ್ಲಿ ಭರ್ಜರಿ ಆ್ಯಕ್ಷನ್  

‘ಪುಷ್ಪ 2’ ಕ್ಲೈಮ್ಯಾಕ್ಸ್ ಶೂಟ್​ನಲ್ಲಿ ಅಲ್ಲು ಅರ್ಜುನ್ ಅವರು ಬ್ಯುಸಿ ಇರೋದು ಕಂಡು ಬಂದಿದೆ. ರಕ್ತಸಿಕ್ತವಾದ ವ್ಯಕ್ತಿ ಅಲ್ಲು ಅರ್ಜುನ್​ಗೆ ಹೊಡೆಯಲು ಮುಂದಾಗುತ್ತಿರುವ ರೀತಿಯಲ್ಲಿ ಈ ಕ್ಲೈಮ್ಯಾಕ್ಸ್​ ಶೂಟ್ ಇದೆ. ಸದ್ಯ ಈ ವಿಡಿಯೋ ಫ್ಯಾನ್​ ಪೇಜ್​ಗಳಲ್ಲಿ ವೈರಲ್ ಆಗುತ್ತಿದೆ.

‘ಪುಷ್ಪ 2’ ಸಿನಿಮಾ ಸೆಟ್ ವಿಡಿಯೋ ಲೀಕ್; ಕ್ಲೈಮ್ಯಾಕ್ಸ್ ಶೂಟ್​ನಲ್ಲಿ ಭರ್ಜರಿ ಆ್ಯಕ್ಷನ್  
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Jul 31, 2024 | 10:03 AM

Share

‘ಪುಷ್ಪ 2’ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ಶೂಟಿಂಗ್ ಅರ್ಧಕ್ಕೆ ನಿಂತಿದೆ ಎಂದೆಲ್ಲ ವರದಿ ಆಗಿತ್ತು. ಈಗ ಮತ್ತೆ ಚಿತ್ರದ ಶೂಟಿಂಗ್ ಆರಂಭ ಆಗಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ಹಂತದ ಶೂಟಿಂಗ್ ನಡೆಯುತ್ತಿದೆ. ಶಾಕಿಂಗ್ ವಿಚಾರ ಎಂದರೆ ಈ ಚಿತ್ರದ ಕ್ಲೈಮ್ಯಾಕ್ಸ್ ಶೂಟ್​ನ ವಿಡಿಯೋ ಲೀಕ್ ಆಗಿದೆ. ಇದು ಅಲ್ಲು ಅರ್ಜುನ್ ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿದೆ. ಈ ಬಗ್ಗೆ ಅನೇಕರು ಅಸಮಾಧಾನ ಹೊರಹಾಕಿದ್ದಾರೆ.

ಸುಕುಮಾರ್ ಅವರು ‘ಪುಷ್ಪ 2’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ಸೇರಿ ಅನೇಕರು ಸಿನಿಮಾದಲ್ಲಿ ಇದ್ದಾರೆ. ಈ ಚಿತ್ರದ ಶೂಟಿಂಗ್​ನಲ್ಲಿ ಫೋನ್ ಬಳಕೆ ನಿಷೇಧಿಸಲಾಗಿದೆ. ಆದಾಗ್ಯೂ ಕೆಲವರು ಮೊಬೈಲ್​ನ ಸೆಟ್​ ಒಳಗೆ ತೆಗೆದುಕೊಂಡು ಹೋಗಿದ್ದಾರೆ. ಕ್ಲೈಮ್ಯಾಕ್ಸ್ ಹಂತದ ಶೂಟಿಂಗ್​ನ ಕದ್ದು ಚಿತ್ರೀಕರಿಸಿದ್ದಾರೆ. ಸದ್ಯ ವಿಡಿಯೋ ಲೀಕ್ ಆಗಿದೆ.

ಅಲ್ಲು ಅರ್ಜುನ್ ಅವರು ಕ್ಲೈಮ್ಯಾಕ್ಸ್ ಶೂಟ್​ನಲ್ಲಿ ಬ್ಯುಸಿ ಇರೋದು ಕಂಡು ಬಂದಿದೆ. ರಕ್ತಸಿಕ್ತವಾದ ವ್ಯಕ್ತಿ ಅಲ್ಲು ಅರ್ಜುನ್​ಗೆ ಹೊಡೆಯಲು ಮುಂದಾಗುತ್ತಿರುವ ರೀತಿಯಲ್ಲಿ ಈ ವಿಡಿಯೋ ಇದೆ. ಸದ್ಯ ಈ ವಿಡಿಯೋ ಫ್ಯಾನ್​ ಪೇಜ್​ಗಳಲ್ಲಿ ವೈರಲ್ ಆಗುತ್ತಿದೆ. ಅನೇಕರು ಈ ವಿಡಿಯೋನ ತೆಗೆಯಬೇಕು ಎಂದು ಆಗ್ರಹಿಸುತ್ತಿದ್ದಾರೆ.

‘ಪುಷ್ಪ 2’ ಸಿನಿಮಾ ತಂಡ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ. ಹೀಗಾಗಿ, ಈ ವರೆಗೆ ಯಾವುದೇ ಫೋಟೋ ಹಾಗೂ ವಿಡಿಯೋಗಳು ಲೀಕ್ ಆಗಿರಲಿಲ್ಲ. ಇದೇ ಮೊದಲ ಬಾರಿಗೆ ಸೆಟ್​ನ ಫೋಟೋ ಹಾಗೂ ವಿಡಿಯೋಗಳು ಲೀಕ್ ಆಗಿವೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರಕ್ಕಾಗಿ ಇನ್ನೂ ಆರು ತಿಂಗಳು ಶೂಟ್ ಮಾಡೋಕೆ ರೆಡಿ ಇದ್ದಾರೆ ಅಲ್ಲು ಅರ್ಜುನ್

‘ಪುಷ್ಪ 2’ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ಬಿಡುಗಡೆ ದಿನಾಂಕ ಡಿಸೆಂಬರ್ 6ಕ್ಕೆ ಮುಂದೂಡಲ್ಪಟ್ಟಿದೆ. ‘ಪುಷ್ಪ’ ರಿಲೀಸ್ ಆಗಿ ಮೂರು ವರ್ಷಗಳ ಬಳಿಕ ಎರಡನೇ ಭಾಗ ರಿಲೀಸ್ ಆಗುತ್ತಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡೋ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ