‘ಪುಷ್ಪ 2’ ಬಳಿಕ ರಾಮ್​ ಚರಣ್​ಗೆ ಸುಕುಮಾರ್​ ನಿರ್ದೇಶನ; ಇಲ್ಲಿದೆ ಸಿಹಿ ಸುದ್ದಿ

ಸ್ಟಾರ್​ ನಿರ್ದೇಶಕ ಸುಕುಮಾರ್​ ಅವರು ನಟ ರಾಮ್​ ಚರಣ್​ ಜೊತೆ ಕೈ ಜೋಡಿಸಿದ್ದಾರೆ. ಈ ಹಿಂದೆ ಅವರಿಬ್ಬರ ಕಾಂಬಿನೇಷನ್​ನಲ್ಲಿ ‘ರಂಗಸ್ಥಲಂ’ ಸಿನಿಮಾ ಮೂಡಿಬಂದಿತ್ತು. ಈಗ ಮತ್ತೆ ಅವರಿಬ್ಬರು ಒಂದಾಗುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಇದು ರಾಮ್​ ಚರಣ್​ ನಟನೆಯ 17ನೇ ಸಿನಿಮಾ ಆಗಲಿದೆ. ದೇವಿಶ್ರೀ ಪ್ರಸಾದ್​ ಸಂಗೀತ ನೀಡಲಿದ್ದಾರೆ.

‘ಪುಷ್ಪ 2’ ಬಳಿಕ ರಾಮ್​ ಚರಣ್​ಗೆ ಸುಕುಮಾರ್​ ನಿರ್ದೇಶನ; ಇಲ್ಲಿದೆ ಸಿಹಿ ಸುದ್ದಿ
ರಾಮ್​ ಚರಣ್​, ಸುಕುಮಾರ್​
Follow us
ಮದನ್​ ಕುಮಾರ್​
|

Updated on: Mar 25, 2024 | 6:50 PM

ನಟ ರಾಮ್​ ಚರಣ್​ (Ram Charan) ಅವರ ಅಭಿಮಾನಿಗಳಿಗೆ ಹೋಳಿ ಹಬ್ಬದ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ‘ಆರ್​ಆರ್​ಆರ್​’ ಸಿನಿಮಾದ ಗೆಲುವಿನ ಬಳಿಕ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಅವರನ್ನು ಪ್ರೀತಿಯಿಂದ ‘ಗ್ಲೋಬಲ್ ಸ್ಟಾರ್’ ಎಂದು ಕರೆಯುತ್ತಿದ್ದಾರೆ. ಪ್ರಸ್ತುತ ರಾಮ್​ ಚರಣ್​ ಅವರು ‘ಗೇಮ್ ಚೇಂಜರ್​’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆಯೇ ಅವರ ಮುಂದಿನ ಸಿನಿಮಾಗಳ ಬಗ್ಗೆ ಎಗ್ಸೈಟಿಂಗ್​ ಮಾಹಿತಿ ಹೊರಬಿದ್ದಿದೆ. ರಾಮ್​ ಚರಣ್​ ನಟಿಸಲಿರುವ 17ನೇ ಸಿನಿಮಾಗೆ ಸುಕುಮಾರ್​ (Sukumar) ಅವರು ನಿರ್ದೇಶನ ಮಾಡಲಿದ್ದಾರೆ.

ರಾಮ್​ ಚರಣ್​ ಅವರ 15ನೇ ಚಿತ್ರವಾಗಿ ‘ಗೇಮ್​ ಚೇಂಜರ್​’ ಮೂಡಿಬರುತ್ತಿವೆ. 16ನೇ ಸಿನಿಮಾಗೆ ‘ಉಪ್ಪೆನಾ’ ಖ್ಯಾತಿಯ ಬುಚ್ಚಿ ಬಾಬು ಸನಾ ನಿರ್ದೇಶನ ಮಾಡಲಿದ್ದು ಕೆಲವೇ ದಿನಗಳ ಹಿಂದೆ ಆ ಚಿತ್ರಕ್ಕೆ ಮುಹೂರ್ತ ನೆರವೇರಿತು. ಅದರ ಬೆನ್ನಲ್ಲೇ ರಾಮ್ ಚರಣ್​ ನಟನೆಯ 17ನೇ ಸಿನಿಮಾ ಅನೌನ್ಸ್​ ಆಗಿದೆ. ಆ ಸಿನಿಮಾಗೆ ಸುಕುಮಾರ್​ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ ಎಂಬುದು ತಿಳಿದು ಅಭಿಮಾನಿಗಳ ಖುಷಿ ಡಬಲ್​ ಆಗಿದೆ.

ಸುಕುಮಾರ್​ ಮತ್ತು ರಾಮ್​ ಚರಣ್​ ಅವರು ಜೊತೆಯಾಗಿ ‘ರಂಗಸ್ಥಲಂ’ ಸಿನಿಮಾ ಮಾಡಿದ್ದರು. ಆ ಸಿನಿಮಾ ಯಶಸ್ವಿ ಆಗಿತ್ತು. ಈಗ ಸುಕುಮಾರ್​ ಅವರು ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಆಗಸ್ಟ್​ 15ರಂದು ಬಿಡುಗಡೆ ಆಗಲಿರುವ ಆ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಗುವುದು ಖಚಿತ ಎನ್ನುತ್ತಿದ್ದಾರೆ ಅಭಿಮಾನಿಗಳು. ಆ ಬಳಿಕ ಸುಕುಮಾರ್​ ಅವರು ರಾಮ್​ ಚರಣ್​ ಜೊತೆಗಿನ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಲಿದ್ದಾರೆ.

ಇದನ್ನೂ ಓದಿ: ರಾಮ್​ ಚರಣ್ ಹೊಸ ಚಿತ್ರಕ್ಕೆ ನಡೆಯಿತು ಅದ್ದೂರಿ ಮುಹೂರ್ತ; ಇಲ್ಲಿವೆ ಫೋಟೋಸ್

ರಾಮ್​ ಚರಣ್​ ಮತ್ತು ಸುಕುಮಾರ್​ ಅವರ ಕಾಂಬಿನೇಷನ್​ನಲ್ಲಿ ಬಂದಿದ್ದ ‘ರಂಗಸ್ಥಲಂ’ ಚಿತ್ರಕ್ಕೆ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡಿತ್ತು. ಈಗ ಅವರಿಬ್ಬರ ಜೊಸ ಸಿನಿಮಾ ಕೂಡ ಇದೇ ಪ್ರೊಡಕ್ಷನ್ಸ್​ ಹೌಸ್​ ಮೂಲಕ ನಿರ್ಮಾಣ ಆಗಲಿದೆ. ‘ಮೈತ್ರಿ ಮೂವೀ ಮೇಕರ್ಸ್’ ಮತ್ತು ‘ಸುಕುಮಾರ್ ರೈಟಿಂಗ್’ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಲಿವೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಸಿದ್ಧವಾಗಲಿದೆ. ಇನ್ನು, ‘ಪುಷ್ಪ’, ‘ರಂಗಸ್ಥಲಂ’ ಮುಂತಾದ ಸಿನಿಮಾಗಳಿಗೆ ಸಂಗೀತ ನೀಡಿದ್ದ ದೇವಿಶ್ರೀ ಪ್ರಸಾದ್​ ಅವರೇ ಆರ್​ಸಿ17 ಚಿತ್ರಕ್ಕೂ ಸಂಗೀತ ನಿರ್ದೇಶನ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ