AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ರಿಲೀಸ್​ಗೆ ರೆಡಿ ಆದ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’; ಕಾರಣ ಏನು?

ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ‘ಪುಷ್ಪ 2’ ಸಿನಿಮಾ ಮುಂದಿನ ವರ್ಷ ಜನವರಿ 16ರಂದು ಜಪಾನ್‌ನಲ್ಲಿ ತೆರೆ ಕಾಣಲು ಸಜ್ಜಾಗಿದೆ. ‘ಪುಷ್ಪ’ ಚಿತ್ರದ ಯಶಸ್ಸು ಮತ್ತು ಭಾರತೀಯ ಸಿನಿಮಾಗಳಿಗೆ ಜಪಾನ್‌ನಲ್ಲಿರುವ ಬೇಡಿಕೆಯೇ ಇದಕ್ಕೆ ಕಾರಣ. ಈ ಹಿಂದೆ ‘ಬಾಹುಬಲಿ’, ‘ಕೆಜಿಎಫ್ 2’, ‘ಆರ್​ಆರ್​ಆರ್’ ಹಾಗೂ 'ಪುಷ್ಪ' ಚಿತ್ರಗಳು ಅಲ್ಲಿ ಮೆಚ್ಚುಗೆ ಗಳಿಸಿದ್ದವು. ಚಿತ್ರದ ಕಥೆಗೂ ಜಪಾನ್ ಲಿಂಕ್ ಇರುವುದರಿಂದ ಅಭಿಮಾನಿಗಳಿಗೆ ಮತ್ತಷ್ಟು ಕುತೂಹಲ ಮೂಡಿದೆ.

ಮತ್ತೆ ರಿಲೀಸ್​ಗೆ ರೆಡಿ ಆದ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’; ಕಾರಣ ಏನು?
ಅಲ್ಲು ಅರ್ಜುನ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Dec 04, 2025 | 8:59 AM

Share

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ (Pushpa 2) ಸಿನಿಮಾ ಕಳೆದ ವರ್ಷ ಡಿಸೆಂಬರ್ 4ರಂದು ರಿಲೀಸ್ ಆಯಿತು. ಅಂದರೆ ಇಂದಿಗೆ ಸರಿಯಾಗಿ ಒಂದು ವರ್ಷದ ಹಿಂದೆ ಈ ಚಿತ್ರ ತೆರೆಗೆ ಬಂದು ದಾಖಲೆಗಳ ಮೇಲೆ ದಾಖಲೆ ಬರೆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಬಾಚಿಕೊಂಡಿದ್ದು ಗೊತ್ತೇ ಇದೆ. ಈಗ ಈ ಸಿನಿಮಾ ಮತ್ತೆ ತೆರೆ ಕಾಣಲು ರೆಡಿ ಆಗಿದೆ. ಈ ವಿಷಯ ಅಭಿಮಾನಿಗಳಿಗೆ ಖುಷಿ ನೀಡಿದೆ. ಹಾಗಾದರೆ, ಈ ಚಿತ್ರ ಮತ್ತೆ ತೆರೆ ಕಾಣಲು ಕಾರಣ ಏನು? ಅಂದಹಾಗೆ ಈ ಚಿತ್ರವು ಭಾರತದಲ್ಲಿ ಬಿಡುಗಡೆ ಕಾಣುತ್ತಿಲ್ಲ. ಈ ಚಿತ್ರ ತೆರೆಗೆ ಬರುತ್ತಿರುವುದು ಜಪಾನ್​ ಅಲ್ಲಿ.

ಜಪಾನ್ ಅಲ್ಲಿ ಭಾರತದ ಸಿನಿಮಾಗಳಿಗೆ ಭಾರೀ ಬೇಡಿಕೆ ಇದೆ. ಈಗಾಗಲೇ ‘ಬಾಹುಬಲಿ’, ‘ಬಾಹುಬಲಿ 2’, ‘ಕೆಜಿಎಫ್ 2’ ‘ಆರ್​ಆರ್​ಆರ್’ ಅಂತಹ ಸಿನಿಮಾಗಳು ಜಪಾನ್ ಭಾಷೆಗೆ ಡಬ್ ಆಗಿ ಯಶಸ್ಸು ಕಂಡವು. ‘ಪುಷ್ಪ’ ಸಿನಿಮಾ ಕೂಡ ಈ ಮೊದಲು ಜಪಾನ್ ಅಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿತ್ತು. ಈಗ ‘ಪುಷ್ಪ 2’ ಚಿತ್ರದ ಸರದಿ.

ಮುಂದಿನ ವರ್ಷ ಜನವರಿ 16ರಂದು ‘ಪುಷ್ಪ 2’ ಚಿತ್ರ ಜಪಾನ್​ನಲ್ಲಿ ತೆರೆಗೆ ಬರಲಿದೆಯಂತೆ. ‘ಪುಷ್ಪ’ ಚಿತ್ರದಲ್ಲಿ ಕಥೆಗೆ ಜಪಾನ್ ಲಿಂಕ್ ಇತ್ತು. ಎರಡನೇ ಪಾರ್ಟ್ ಆರಂಭ ಆಗೋದು ಕೂಡ ಜಪಾನ್ ಕಥೆಯೊಂದಿಗೆ. ಕಥಾ ನಾಯಕ ಜಪಾನ್​ಗೆ ತೆರಳುತ್ತಾನೆ ಮತ್ತು ಅಲ್ಲಿ ಫೈಟ್ ನಡೆಯುತ್ತದೆ. ಹೀಗಾಗಿ ಜಪಾನ್ ಜನರಿಗೆ ಸಿನಿಮಾ ಮತ್ತಷ್ಟು ಇಷ್ಟ ಆಗಬಹುದು ಎಂಬ ಆಲೋಚನೆಯಲ್ಲಿ ತಂಡ ಇದೆ.

‘ಪುಷ್ಪ’ ಸಿನಿಮಾ ಜಪಾನ್ ಅಲ್ಲಿ ತೆರೆಗೆ ಬಂದು ಯಶಸ್ಸು ಕಂಡಿತ್ತು. ಈಗ ಸೀಕ್ವೆಲ್​ನ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇದೆ. ಈ ಸಿನಿಮಾ ಗ್ಲೋಬಲ್ ಮಟ್ಟದಲ್ಲಿ ಸಾಕಷ್ಟು ಯಶಸ್ಸು ಕಂಡಿದೆ. ಇದು ಚಿತ್ರಕ್ಕೆ ಸಹಕಾರಿ ಆಗಲಿದೆ.

ಇದನ್ನೂ ಓದಿ: ‘ಪುಷ್ಪ 3’ ಅಲ್ಲ, ಅಲ್ಲು ಅರ್ಜುನ್ ಬದಲು ಬೇರೊಬ್ಬ ಸ್ಟಾರ್ ಜೊತೆ ಕೈ ಜೋಡಿಸಿದ ಸುಕುಮಾರ್

ಸುಕುಮಾರ್ ಅವರು ‘ಪುಷ್ಪ 2’ ಚಿತ್ರ ನಿರ್ದೇಶನ ಮಾಡಿದ್ದಾರೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಮೂರನೇ ಪಾರ್ಟ್ ಇನ್ನಷ್ಟೇ ಬರಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ