ಕರ್ನಾಟಕದಲ್ಲಿ ‘ಪುಷ್ಪ 2’ ದಾಖಲೆಯ ಕಲೆಕ್ಷನ್; ತೆಲುಗು ಸಿನಿಮಾ ನಮ್ಮಲ್ಲಿ ಇಷ್ಟೊಂದು ಗಳಿಸಿದ್ದು ಇದೇ ಮೊದಲು  

‘ಪುಷ್ಪ 2’ ಸಿನಿಮಾ ಭಾರತಾದ್ಯಂತ ಬಂಗಾರದ ಬೆಳೆ ತೆಗೆದಿದೆ. ಈ ಚಿತ್ರಕ್ಕೆ ಸಿಕ್ಕ ಹೈಪ್ ಕಾರಣಕ್ಕೆ ಸಿನಿಮಾನ ಅಭಿಮಾನಿಗಳು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. ಸಾವಿರಾರು ಚಿತ್ರಮಂದಿರಗಳಲ್ಲಿ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಈ ಚಿತ್ರಕ್ಕೆ ಕರ್ನಾಟಕದಲ್ಲೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ.

ಕರ್ನಾಟಕದಲ್ಲಿ ‘ಪುಷ್ಪ 2’ ದಾಖಲೆಯ ಕಲೆಕ್ಷನ್; ತೆಲುಗು ಸಿನಿಮಾ ನಮ್ಮಲ್ಲಿ ಇಷ್ಟೊಂದು ಗಳಿಸಿದ್ದು ಇದೇ ಮೊದಲು  
ಅಲ್ಲು ಅರ್ಜುನ್

Updated on: Dec 07, 2024 | 7:32 AM

ಡಿಸೆಂಬರ್ 5ರಂದು ರಿಲೀಸ್ ಆದ ‘ಪುಷ್ಪ 2’ ಸಿನಿಮಾ ದಾಖಲೆಯ ಗಳಿಕೆ ಮಾಡುತ್ತಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ ಗಣನೀಯವಾಗಿ ಏರಿಕೆ ಕಾಣುತ್ತಿದೆ. ಕೆಲವೇ ದಿನಗಳಲ್ಲಿ ಈ ಚಿತ್ರ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದರೂ ಅಚ್ಚರಿ ಏನಿಲ್ಲ. ಈಗ ‘ಪುಷ್ಪ 2’ ಚಿತ್ರದ ಕರ್ನಾಟಕದ ಕಲೆಕ್ಷನ್ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಬಗ್ಗೆ ‘ಪುಷ್ಪ 2’ ಸಿನಿಮಾ ತಂಡದಿಂದಲೇ ಅಧಿಕೃತ ಘೋಷಣೆ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಮಾಡಲಾಗಿದೆ.

‘ಪುಷ್ಪ 2’ ಸಿನಿಮಾ ಭಾರತಾದ್ಯಂತ ಬಂಗಾರದ ಬೆಳೆ ತೆಗೆದಿದೆ. ಈ ಚಿತ್ರಕ್ಕೆ ಸಿಕ್ಕ ಹೈಪ್ ಕಾರಣಕ್ಕೆ ಸಿನಿಮಾನ ಅಭಿಮಾನಿಗಳು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. ಸಾವಿರಾರು ಚಿತ್ರಮಂದಿರಗಳಲ್ಲಿ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಈ ಚಿತ್ರಕ್ಕೆ ಕರ್ನಾಟಕದಲ್ಲೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಸಿನಿಮಾ ಎಷ್ಟು ಕೋಟಿ ಲಾಭ ಮಾಡಬಹುದು ಎಂಬ ಕುತೂಹಲ ಅಭಿಮಾನಿಗಳಿಗೆ ಇದೆ.

ಕರ್ನಾಟಕದಲ್ಲಿ ಮೊದಲ ದಿನ ಈ ಚಿತ್ರ 23.7 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಬೇಸರದ ವಿಚಾರ ಎಂದರೆ ಇಷ್ಟು ದೊಡ್ಡ ಮೊತ್ತದಲ್ಲಿ ಕನ್ನಡ ವರ್ಷನ್​ನಿಂದ ಈ ಚಿತ್ರಕ್ಕೆ ಸಿಕ್ಕಿದ್ದು ಕೇವಲ 1 ಕೋಟಿ ರೂಪಾಯಿ ಮಾತ್ರ. ತೆಲುಗು ವರ್ಷನ್​ನಿಂದ ಈ ಚಿತ್ರಕ್ಕೆ ದೊಡ್ಡ ಮಟ್ಟದ ಗಳಿಕೆ ಆಗಿದೆ. ತೆಲುಗು ಚಿತ್ರವೊಂದು ಕರ್ನಾಟಕದಲ್ಲಿ ಮೊದಲ ದಿನ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡಿರೋದು ಇದೇ ಮೊದಲು.

ಇದನ್ನೂ ಓದಿ: ವಿಜಯ್ ದೇವರಕೊಂಡ ಕುಟುಂಬಕ್ಕೆ ‘ಪುಷ್ಪ 2’ ತೋರಿಸಿದ ರಶ್ಮಿಕಾ ಮಂದಣ್ಣ

‘ಪುಷ್ಪ 2’ ಚಿತ್ರದ ಕರ್ನಾಟಕದಲ್ಲಿ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡಲು ಒಂದು ಕಾರಣವೂ ಇದೆ. ಬೆಂಗಳೂರು ಒಂದರಲ್ಲೇ ಈ ಚಿತ್ರಕ್ಕೆ ಸಾವಿರಕ್ಕೂ ಅಧಿಕ ಶೋಗಳನ್ನು ನೀಡಲಾಗಿದೆ. ಉಳಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಸಿನಿಮಾ ಭರ್ಜರಿ ವೀಕ್ಷಣೆ ಕಾಣುತ್ತಿದೆ. ಟಿಕೆಟ್ ದರ ಕೂಡ ಹೆಚ್ಚಿಸಿರುವುದರಿಂದ ಸಹಜವಾಗಿಯೇ ಸಿನಿಮಾದ ಗಳಿಕೆ ಹೆಚ್ಚಿದೆ. ಈ ಚಿತ್ರ ಮೊದಲ ದಿನ ಭಾರತದಲ್ಲಿ 175 ಕೋಟಿ ರೂಪಾಯಿ ಗಳಿಕೆ ಮಾಡಿದೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:13 am, Sat, 7 December 24

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us