AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kissik Song: ‘ಪುಷ್ಪ 2’ ಚಿತ್ರದ ಕಿಸಿಕ್ ಹಾಡು ರಿಲೀಸ್; ಮಿಂಚಿದ ಶ್ರೀಲೀಲಾ

ಬಹುನಿರೀಕ್ಷಿತ ‘ಪುಷ್ಪ 2’ ಸಿನಿಮಾದ ಹೊಸ ಹಾಡು ಬಿಡುಗಡೆ ಆಗಿದೆ. ಚೆನ್ನೈನಲ್ಲಿ ಅದ್ದೂರಿ ಇವೆಂಟ್ ಮಾಡುವ ಮೂಲಕ ಈ ಹಾಡನ್ನು ರಿಲೀಸ್ ಮಾಡಲಾಗಿದೆ. ‘ಕಿಸಿಕ್..’ ಹಾಡಿನಲ್ಲಿ ಕನ್ನಡದ ನಟಿ ಶ್ರೀಲೀಲಾ ಮತ್ತು ಅಲ್ಲು ಅರ್ಜುನ್ ಅವರು ಹೆಜ್ಜೆ ಹಾಕಿದ್ದಾರೆ. ದೇವಿ ಶ್ರೀಪ್ರಸಾದ್ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಈ ಹಾಡು ಟ್ರೆಂಡ್ ಆಗುತ್ತಿದೆ.

Kissik Song: ‘ಪುಷ್ಪ 2’ ಚಿತ್ರದ ಕಿಸಿಕ್ ಹಾಡು ರಿಲೀಸ್; ಮಿಂಚಿದ ಶ್ರೀಲೀಲಾ
ಅಲ್ಲು ಅರ್ಜುನ್​, ಶ್ರೀಲೀಲಾ
ಮದನ್​ ಕುಮಾರ್​
|

Updated on: Nov 24, 2024 | 8:22 PM

Share

ಡಿಸೆಂಬರ್​ 5ರಂದು ‘ಪುಷ್ಪ 2’ ಸಿನಿಮಾ ತೆರೆಕಾಣಲಿದೆ. ಈಗಾಗಲೇ ಭರ್ಜರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಟ್ರೇಲರ್​ ಮೂಲಕ ಈಗಾಗಲೇ ಧೂಳೆಬ್ಬಿಸಲಾಗಿದೆ. ಅಲ್ಲದೇ, ಟೈಟಲ್​ ಸಾಂಗ್ ಕೂಡ ಅಬ್ಬರಿಸಿದೆ. ಈಗ ಇನ್ನೊಂದು ಹಾಡು ಬಿಡುಗಡೆ ಆಗಿದೆ. ಈ ಸಾಂಗ್​ನಲ್ಲಿ ಶ್ರೀಲೀಲಾ ಅವರು ಅಲ್ಲು ಅರ್ಜುನ್ ಜೊತೆ ಬಿಂದಾಸ್​ ಆಗಿ ಡ್ಯಾನ್ಸ್ ಮಾಡಿದ್ದಾರೆ. ‘ಕಿಸಿಕ್..’ ಹಾಡಿನ ಅಬ್ಬರ ಜೋರಾಗಿದೆ. ಎಲ್ಲ ಕಡೆಗಳಲ್ಲಿ ಈ ಹಾಡು ಟ್ರೆಂಡ್ ಆಗುತ್ತಿದೆ. ‘ಪುಷ್ಪ 2’ ಚಿತ್ರಕ್ಕೆ ದೇವಿ ಶ್ರೀಪ್ರಸಾದ್ ಅವರು ಸಂಗೀತ ನೀಡಿದ್ದಾರೆ. ಚೈನ್ನೈನಲ್ಲಿ ಅದ್ದೂರಿಯಾಗಿ ಸಾಂಗ್ ರಿಲೀಸ್ ಮಾಡಲಾಗಿದೆ.

ನಿರ್ದೇಶಕ ಸುಕುಮಾರ್​ ಅವರು ತಮ್ಮ ಪ್ರತಿ ಸಿನಿಮಾದಲ್ಲಿ ಹಾಡುಗಳಿಗೆ ಹೆಚ್ಚು ಮಹತ್ವ ನೀಡುತ್ತಾರೆ. ‘ಪುಷ್ಪ 2’ ಸಿನಿಮಾದಲ್ಲೂ ಅದು ಮುಂದುವರಿದಿದೆ. ‘ಕಿಸಿಕ್..’ ಹಾಡನ್ನು ಅದ್ದೂರಿಯಾಗಿ ಚಿತ್ರಿಸಲಾಗಿದೆ. ‘ಪುಷ್ಪ’ ಸಿನಿಮಾದಲ್ಲಿ ಸಮಂತಾ ರುತ್ ಪ್ರಭು ಅವರು ಐಟಂ ಡ್ಯಾನ್ಸ್ ಮಾಡಿದ್ದರು. ಈಗ ಸೀಕ್ವೆಲ್​ನಲ್ಲಿ ಶ್ರೀಲೀಲಾ ಅವರು ಹೆಜ್ಜೆ ಹಾಕಿದ್ದಾರೆ. ಹಾಡಿಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.

‘ಕಿಸಿಕ್’ ಹಾಡಿಗೆ ಖ್ಯಾತ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಅವರು ಕೊರಿಯೋಗ್ರಫಿ ಮಾಡಿದ್ದಾರೆ. ಝಗಮಗಿಸುವ ಸೆಟ್​ನಲ್ಲಿ ಈ ಹಾಡಿನ ಚಿತ್ರೀಕರಣ ಮಾಡಲಾಗಿದೆ. ಸದ್ಯಕ್ಕೆ ಬಿಡುಗಡೆ ಆಗಿರುವುದು ಲಿರಿಕಲ್ ವಿಡಿಯೋ ಮಾತ್ರ. ಚಿತ್ರಮಂದಿರದಲ್ಲಿ ಪೂರ್ತಿ ಸಾಂಗ್ ನೋಡಲು ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಹಾಡು: ವಾರಾಣಸಿಗೆ ತೆರಳಿ ಆಶೀರ್ವಾದ ಪಡೆದ ಶ್ರೀಲೀಲಾ

ಅಲ್ಲು ಅರ್ಜುನ್ ಅವರ ವೃತ್ತಿ ಜೀವನದ ಅತಿ ದೊಡ್ಡ ಸಿನಿಮಾ ಇದು. ನೂರಾರು ಕೋಟಿ ರೂಪಾಯಿ ಬಂಡವಾಳ ಹೂಡಿ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ಈ ಸಿನಿಮಾವನ್ನು ನಿರ್ಮಿಸಿದೆ. ಪ್ರಚಾರಕ್ಕಾಗಿಯೂ ದೊಡ್ಡ ಬಜೆಟ್​ ಮೀಸಲಿಡಲಾಗಿದೆ. ಡಿಸೆಂಬರ್​ 5ರಂದು ದೇಶಾದ್ಯಂತ ‘ಪುಷ್ಪ 2’ ಸಿನಿಮಾ ಅಬ್ಬರಿಸಲಿದೆ. ಬಾಕ್ಸ್​ ಆಫೀಸ್​ನಲ್ಲಿ ಸುನಾಮಿಯೇ ಏಳುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ