AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರದಿಂದ ಬಿಡುಗಡೆ ಆಗಲಿದೆ ಕಪಲ್ ಸಾಂಗ್; ಹಾಡಿನ ವಿಶೇಷತೆಗಳೇನು?

‘ಪುಷ್ಪ’ ಚಿತ್ರ ತೆಲುಗಿನ ಜೊತೆಗೆ ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳಿನಲ್ಲಿ ರಿಲೀಸ್ ಆಗಿತ್ತು. ‘ಪುಷ್ಪ 2’ ಚಿತ್ರ ಈ ಐದು ಭಾಷೆಗಳ ಜೊತೆಗೆ ಬೆಂಗಾಲಿ ಭಾಷೆಯಲ್ಲೂ ಬಿಡುಗಡೆ ಆಗಲಿದೆ. ಈ ಚಿತ್ರದ ರಿಲೀಸ್​ಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಈಗ ಸಿನಿಮಾದ ಎರಡನೇ ಹಾಡು ರಿಲೀಸ್ ಆಗಲಿದೆ.

‘ಪುಷ್ಪ 2’ ಚಿತ್ರದಿಂದ ಬಿಡುಗಡೆ ಆಗಲಿದೆ ಕಪಲ್ ಸಾಂಗ್; ಹಾಡಿನ ವಿಶೇಷತೆಗಳೇನು?
ಅಲ್ಲು ಅರ್ಜುನ್-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: May 28, 2024 | 2:25 PM

Share

‘ಪುಷ್ಪ 2’ ಚಿತ್ರದ (Pushpa 2 Movie) ‘ಪುಷ್ಪ ಪುಷ್ಪ..’ ಹಾಡು ಇತ್ತೀಚೆಗೆ ರಿಲೀಸ್ ಆಗಿತ್ತು. ಈ ಹಾಡು ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಕೆಲವರು ಈ ಹಾಡನ್ನು ಟ್ರೋಲ್ ಮಾಡಿದ್ದಾರೆ. ಮನಸ್ಸಿಗೆ ಬಂದಂತೆ ಈ ಹಾಡಿನ ಸಾಲುಗಳನ್ನು ಬರೆಯಲಾಗಿದೆ ಎನ್ನುವ ಆರೋಪ ಕೇಳಿ ಬಂತು. ಅಲ್ಲು ಅರ್ಜುನ್ ಹಾಕಿದ ಸ್ಟೆಪ್ ಕೂಡ ಟ್ರೋಲ್ ಆಗಿದೆ. ಈ ಟ್ರೋಲ್​​ಗಳಿಂದ ಆದ ಹಾನಿಯನ್ನು ಮುಚ್ಚಲು ತಂಡ ಮತ್ತೊಂದು ಹಾಡನ್ನು ರಿಲೀಸ್ ಮಾಡುತ್ತಿದೆ. ತೆಲುಗಿನಲ್ಲಿ ‘ಸೂಸೆಕಿ..’ ಎಂದಿದ್ದು, ಕನ್ನಡದಲ್ಲಿ ‘ನೋಡೋಕ..’ ಟೈಟಲ್ ಕೊಡಲಾಗಿದೆ.

‘ಪುಷ್ಪ’ ಚಿತ್ರ ತೆಲುಗಿನ ಜೊತೆಗೆ ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳಿನಲ್ಲಿ ರಿಲೀಸ್ ಆಗಿತ್ತು. ‘ಪುಷ್ಪ 2’ ಚಿತ್ರ ಈ ಐದು ಭಾಷೆಗಳ ಜೊತೆಗೆ ಬೆಂಗಾಲಿ ಭಾಷೆಯಲ್ಲೂ ಬಿಡುಗಡೆ ಆಗಲಿದೆ. ಈ ಚಿತ್ರದ ರಿಲೀಸ್​ಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಈ ಸಂದರ್ಭದಲ್ಲಿ ಒಂದೊಂದಾಗಿ ಹಾಡುಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ‘ನೋಡೋಕ..’ ಹಾಡು ಯಾವ ರೀತಿಯಲ್ಲಿ ಮ್ಯಾಜಿಕ್ ಮಾಡಲಿದೆ ಎನ್ನುವ ಕುತೂಹಲ ಮೂಡಿದೆ.

‘ನೋಡೋಕ’ ಹಾಡಿಗೆ ರಾಕ್​ಸ್ಟಾರ್ ದೇವಿಶ್ರೀ ಪ್ರಸಾದ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡನ್ನು ಶ್ರೇಯಾ ಘೋಷಾಲ್ ಅವರು ಹಾಡಿದ್ದಾರೆ. ಈ ಹಾಡನ್ನು ಚಿತ್ರತಂಡ ‘ದಿ ಕಪಲ್ ಸಾಂಗ್’ ಎಂದು ಕರೆದಿದೆ. ಈ ಹಾಡಿನ ಪೋಸ್ಟರ್ ಗಮನ ಸೆಳೆದಿದೆ. ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಒಟ್ಟಾಗಿ ನಿಂತಿದ್ದಾರೆ. ರಶ್ಮಿಕಾ ಮೊಗದಲ್ಲಿರೋ ನಗು ಗಮನ ಸೆಳೆದಿದೆ.

ಇದನ್ನೂ ಓದಿ: ‘ಎರಡೆರಡು ಕ್ಲೈಮ್ಯಾಕ್ಸ್ ಶೂಟ್ ಮಾಡಲಿದೆ ಪುಷ್ಪ ತಂಡ; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ

‘ಪುಷ್ಪ 2’ ಚಿತ್ರಕ್ಕೆ ಸುಕುಮಾರ್ ನಿರ್ದೇಶನ ಇದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಈ ಚಿತ್ರವನ್ನು ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ