2024ರ ಆಗಸ್ಟ್​ 15ಕ್ಕೆ ರಿಲೀಸ್​ ಆಗಲಿದೆ ‘ಪುಷ್ಪ 2’; ಬ್ರೇಕಿಂಗ್​ ನ್ಯೂಸ್​ ನೀಡಿದ ಅಲ್ಲು ಅರ್ಜುನ್​

‘ದಿನಾಂಕ ಗುರುತು ಮಾಡಿಕೊಳ್ಳಿ. ವಿಶ್ವಾದ್ಯಂತ 2024ರ ಆಗಸ್ಟ್​ 15ರಂದು ‘ಪುಷ್ಪ 2’ ಸಿನಿಮಾ ರಿಲೀಸ್​ ಆಗಲಿದೆ. ಗಲ್ಲಾಪೆಟ್ಟಿಗೆಯನ್ನು ವಶಪಡಿಸಿಕೊಳ್ಳಲು ಪುಷ್ಪರಾಜ್​ ಮತ್ತೆ ಬರುತ್ತಿದ್ದಾನೆ’ ಎಂಬ ಕ್ಯಾಪ್ಷನ್​ ಜೊತೆಗೆ ಹೊಸ ಪೋಸ್ಟರ್​ ಹಂಚಿಕೊಳ್ಳಲಾಗಿದೆ. ಆ ಮೂಲಕ ‘ಪುಷ್ಪ 2’ ಸಿನಿಮಾದ ರಿಲೀಸ್​ ದಿನಾಂಕವನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

2024ರ ಆಗಸ್ಟ್​ 15ಕ್ಕೆ ರಿಲೀಸ್​ ಆಗಲಿದೆ ‘ಪುಷ್ಪ 2’; ಬ್ರೇಕಿಂಗ್​ ನ್ಯೂಸ್​ ನೀಡಿದ ಅಲ್ಲು ಅರ್ಜುನ್​
‘ಪುಷ್ಪ 2’ ಸಿನಿಮಾ ಪೋಸ್ಟರ್​

Updated on: Sep 11, 2023 | 4:44 PM

ನಟ ಅಲ್ಲು ಅರ್ಜುನ್​ (Allu Arjun) ಅವರು ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಭರದಿಂದ ಶೂಟಿಂಗ್​ ನಡೆಯುತ್ತಿದೆ. ರಿಲೀಸ್​ ದಿನಾಂಕ ತಿಳಿಯಲು ಫ್ಯಾನ್ಸ್​ ಕಾತರದಿಂದ ಕಾದಿದ್ದರು. ‘ಪುಷ್ಪ 2’ ಸಿನಿಮಾ (Pushpa 2) ಯಾವಾಗ ರಿಲೀಸ್​ ಆಗಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.. 2024ರ ಆಗಸ್ಟ್ 15ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ರಿಲೀಸ್​ ಡೇಟ್​ (Pushpa 2 Release Date) ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಿದೆ. ಹೊಸ ಪೋಸ್ಟರ್​ ಹಂಚಿಕೊಳ್ಳುವ ಮೂಲಕ ನಿರ್ಮಾಣ ಸಂಸ್ಥೆಯಾದ ‘ಮೈತ್ರಿ ಮೂವೀ ಮೇಕರ್ಸ್​’ ಸಿಹಿ ಸುದ್ದಿ ನೀಡಿದೆ. ಅಲ್ಲು ಅರ್ಜುನ್​ ಕೂಡ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಿನಿಮಾಗೆ ಸುಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ನಾಯಕಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿದ್ದಾರೆ.

‘ದಿನಾಂಕವನ್ನು ಗುರುತು ಮಾಡಿಕೊಳ್ಳಿ. ವಿಶ್ವಾದ್ಯಂತ 2024ರ ಆಗಸ್ಟ್​ 15ರಂದು ‘ಪುಷ್ಪ 2’ ಸಿನಿಮಾ ರಿಲೀಸ್​ ಆಗಲಿದೆ. ಗಲ್ಲಾಪೆಟ್ಟಿಗೆಯನ್ನು ವಶಪಡಿಸಿಕೊಳ್ಳಲು ಪುಷ್ಪರಾಜ್​ ಮತ್ತೆ ಬರುತ್ತಿದ್ದಾನೆ’ ಎಂಬ ಕ್ಯಾಪ್ಷನ್​ ಜೊತೆಗೆ ಹೊಸ ಪೋಸ್ಟ್​ ಹಂಚಿಕೊಳ್ಳಲಾಗಿದೆ. ಆ ಮೂಲಕ ‘ಪುಷ್ಪ 2’ ಸಿನಿಮಾದ ರಿಲೀಸ್​ ದಿನಾಂಕವನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಕಲಾವಿದರು ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

‘ಮೈತ್ರಿ ಮೂವೀ ಮೇಕರ್ಸ್​’ ಪೋಸ್ಟ್​:

2021ರ ಡಿಸೆಂಬರ್​ 17ರಂದು ‘ಪುಷ್ಪ’ ಸಿನಿಮಾ ತೆರೆಕಂಡು ಸೂಪರ್ ಹಿಟ್​ ಆಯಿತು. ಅದರ ಸೀಕ್ವೆಲ್​ ಆಗಿ ಮೂಡಿಬರುತ್ತಿರುವ ‘ಪುಷ್ಪ 2’ ಸಿನಿಮಾದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಆ ನಿರೀಕ್ಷೆಗೆ ತಕ್ಕಂತೆಯೇ ಸಿನಿಮಾ ಮೂಡಿಬರಬೇಕು ಎಂಬ ಕಾರಣದಿಂದ ಸುಕುಮಾರ್​ ಅವರು ಬಹಳ ಕಾಳಜಿ ವಹಿಸಿ ಶೂಟಿಂಗ್ ಮಾಡುತ್ತಿದ್ದಾರೆ. ಆದ್ದರಿಂದ ಈ ಸಿನಿಮಾದ ಕೆಲಸಗಳಿಗೆ ಸಮಯ ಹಿಡಿಯುತ್ತಿದೆ. ಈ ಮೊದಲೇ ಬಿಡುಗಡೆ ಆಗಿರುವ ಫಸ್ಟ್​ ಲುಕ್​ ಪೋಸ್ಟರ್​ ಮತ್ತು ಫಸ್ಟ್​ ಗ್ಲಿಂಪ್ಸ್​ ವಿಡಿಯೋ ಸಖತ್​ ಕ್ರೇಜ್​ ಸೃಷ್ಟಿ ಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.