ದಾಖಲೆಯ 12 ಸಾವಿರ ಸ್ಕ್ರೀನ್​ಗಳಲ್ಲಿ ಬಿಡುಗಡೆ ಆಗಲಿದೆ ‘ಪುಷ್ಪ 2’

Pushpa 2: ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಡಿಸೆಂಬರ್ 5 ಕ್ಕೆ ತೆರೆಗೆ ಬರಲಿದ್ದು, ವಿಶ್ವದಾದ್ಯಂತ 12 ಸಾವಿರಕ್ಕೂ ಹೆಚ್ಚು ಸ್ಕ್ರೀನ್​ಗಳಲ್ಲಿ ಈ ಸಿನಿಮಾ ತೆರೆಗೆ ಬರಲಿದೆ.

ದಾಖಲೆಯ 12 ಸಾವಿರ ಸ್ಕ್ರೀನ್​ಗಳಲ್ಲಿ ಬಿಡುಗಡೆ ಆಗಲಿದೆ ‘ಪುಷ್ಪ 2’
Pushpa 2
Follow us
ಮಂಜುನಾಥ ಸಿ.
|

Updated on:Nov 29, 2024 | 5:17 PM

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಇನ್ನೊಂದು ವಾರದಲ್ಲಿ ಬಿಡುಗಡೆ ಆಗಲಿದೆ. ಭಾರತದ ಅತಿ ಹೆಚ್ಚು ನಿರೀಕ್ಷಿತ ಸಿನಿಮಾ ಇದಾಗಿದೆ. ಬಿಡುಗಡೆಗೆ ಮುಂಚೆಯೇ ಹಲವು ದಾಖಲೆಗಳನ್ನು ಈ ಸಿನಿಮಾ ಮುರಿದಿದೆ. ಬಿಡುಗಡೆ ಆದ ಬಳಿಕ ಇನ್ನಷ್ಟು ದಾಖಲೆಗಳು ಪುಡಿಯಾಗುವುದು ಪಕ್ಕಾ ಎನ್ನಲಾಗುತ್ತಿದೆ. ಈ ಹಿಂದಿನ ಯಾವುದೇ ಬಿಗ್​ಬಜೆಟ್ ಸಿನಿಮಾಗಳನ್ನೂ ಸಹ ಬಿಡುಗಡೆ ಮಾಡದ ರೀತಿ ಭಾರಿ ಅದ್ಧೂರಿಯಾಗಿ ‘ಪುಷ್ಪ 2’ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.

ಇಂದು (ನವೆಂಬರ್ 29) ಮುಂಬೈನಲ್ಲಿ ಸಿನಿಮಾದ ಪತ್ರಿಕಾಗೋಷ್ಠಿ ನಡೆದಿದ್ದು, ಕಾರ್ಯಕ್ರಮದಲ್ಲಿ ಮಾತನಾಡಿದ ಸಿನಿಮಾದ ನಿರ್ಮಾಪಕರು, ‘ಪುಷ್ಪ 2’ ಸಿನಿಮಾವನ್ನು ವಿಶ್ವದಾದ್ಯಂತ ಏಕಕಾಲಕ್ಕೆ ಬರೋಬ್ಬರಿ 12 ಸಾವಿರ ಸ್ಕ್ರೀನ್​ಗಳಲ್ಲಿ ಒಂದೇ ದಿನ ಬಿಡುಗಡೆ ಮಾಡಲಿದ್ದಾರಂತೆ. ಇಷ್ಟು ದೊಡ್ಡ ಸಂಖ್ಯೆಯ ಸ್ಕ್ರೀನ್​ಗಳಲ್ಲಿ ಬಿಡುಗಡೆ ಆದ ಭಾರತದ ಇನ್ನೊಂದು ಸಿನಿಮಾ ಇಲ್ಲ. ಬಾಲಿವುಡ್​ ಖಾನ್​ ತ್ರಯರ ಸಿನಿಮಾಗಳಿಗೂ ಸಹ ಇಷ್ಟು ದೊಡ್ಡ ಸಂಖ್ಯೆಯ ಸ್ಕ್ರೀನ್ ಸಿಕ್ಕಿರಲಿಲ್ಲ ಎನ್ನಲಾಗುತ್ತಿದೆ.

ಭಾರತದಲ್ಲಿ ಮಾತ್ರವೇ ಸುಮಾರು 8 ಸಾವಿರ ಸ್ಕ್ರೀನ್​ಗಳಲ್ಲಿ ಈ ಸಿನಿಮಾ ಡಿಸೆಂಬರ್ 05 ರಂದು ಬಿಡುಗಡೆ ಆಗಲಿದೆ. ವಿದೇಶಗಳಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಸ್ಕ್ರೀನ್​ಗಳಲ್ಲಿ ಬಿಡುಗಡೆ ಕಾಣುತ್ತಿದೆ. ಐಮ್ಯಾಕ್ಸ್​ನಲ್ಲಿ ಈ ವರೆಗೆ ಇನ್ಯಾವುದೇ ಸಿನಿಮಾಕ್ಕೂ ಸಿಗದಷ್ಟು ಸ್ಕ್ರೀನ್​ಗಳು ‘ಪುಷ್ಪ 2’ ಸಿನಿಮಾಕ್ಕೆ ಸಿಕ್ಕಿವೆ ಎಂದು ಮುಂಬೈ ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕರು ಹೇಳಿದ್ದಾರೆ.

ಇದನ್ನೂ ಓದಿ:Pushpa 2: ‘ಪುಷ್ಪ 2’ಗೆ ಸಿಕ್ತು ಯು/ಎ ಸರ್ಟಿಫಿಕೇಟ್, ಅವಧಿ ಇಷ್ಟೋಂದಾ?

ಉತ್ತರ ಭಾರತದಲ್ಲಿ ಸಹ ಭಾರಿ ಸಂಖ್ಯೆಯ ಸ್ಕ್ರೀನ್​ಗಳಲ್ಲಿ ‘ಪುಷ್ಪ 2’ ಸಿನಿಮಾ ಬಿಡುಗಡೆ ಆಗಲಿದೆ. ಅನಿಲ್ ತಂಡಾನಿ, ಉತ್ತರ ಭಾರತದಲ್ಲಿ ‘ಪುಷ್ಪ 2’ ಸಿನಿಮಾವನ್ನು ವಿತರಣೆ ಮಾಡುತ್ತಿದ್ದಾರೆ. ‘ಪುಷ್ಪ’ ಸಿನಿಮಾವನ್ನು ಸಹ ಅವರೇ ಉತ್ತರ ಭಾರತದಲ್ಲಿ ಬಿಡುಗಡೆ ಮಾಡಿದ್ದರು. ದಕ್ಷಿಣ ಭಾರತದ ಸಿನಿಮಾಗಳಿಗೆ ಉತ್ತರ ಮಾರುಕಟ್ಟೆಯ ಆಳ-ಅಗಲ ತಿಳಿಸಿಕೊಟ್ಟ ವಿತರಕ ಅವರು.

‘ಪುಷ್ಪ 2’ ಸಿನಿಮಾ ಡಿಸೆಂಬರ್ 05 ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಜೊತೆಗೆ ಕನ್ನಡಿಗರಾದ ಡಾಲಿ ಧನಂಜಯ್, ತಾರಕ್ ಪೊನ್ನಪ್ಪ ಸಹ ನಟಿಸಿದ್ದಾರೆ. ವಿಶೇಷ ಹಾಡಿನಲ್ಲಿ ಕನ್ನಡತಿ ಶ್ರೀಲೀಲಾ ಸಹ ಇದ್ದಾರೆ. ಇವರ ಜೊತೆಗೆ ಸ್ಟಾರ್ ನಟ ಫಹಾದ್ ಫಾಸಿಲ್, ಜಗಪತಿ ಬಾಬು, ಸುನಿಲ್ ಇನ್ನೂ ಕೆಲವು ಹಿರಿಯ ನಟರು ಸಿನಿಮಾದಲ್ಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:16 pm, Fri, 29 November 24

ಮನೆಯಲ್ಲಿ ಬ್ರಹ್ಮ ಕಮಲ ಗಿಡ ಇದ್ದರೆ ಇದೆ ಅನೇಕ ಪ್ರಯೋಜನ!
ಮನೆಯಲ್ಲಿ ಬ್ರಹ್ಮ ಕಮಲ ಗಿಡ ಇದ್ದರೆ ಇದೆ ಅನೇಕ ಪ್ರಯೋಜನ!
Daily Horoscope: ಈ ರಾಶಿಯವರಿಗಿಂದು 5 ರಾಶಿಗಳ ಶುಭ ಫಲ
Daily Horoscope: ಈ ರಾಶಿಯವರಿಗಿಂದು 5 ರಾಶಿಗಳ ಶುಭ ಫಲ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ