AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ‘ಪುಷ್ಪ 2’ ಚಿತ್ರದ ಶೂಟಿಂಗ್​ಗೆ ಬಂದ ಅಲ್ಲು ಅರ್ಜುನ್​; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ

Pushpa 2 Movie Shooting Update: ‘ಪುಷ್ಪ’ ಚಿತ್ರಕ್ಕೆ ಹೋಲಿಸಿದರೆ ‘ಪುಷ್ಪ 2’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಅವರ ಲುಕ್​ ಭಿನ್ನವಾಗಿ ಇರಲಿದೆ ಎಂಬ ಮಾತಿದೆ. ಈಗ ಅವರು ಶೂಟಿಂಗ್​ ಆರಂಭಿಸಿದ್ದಾರೆ.

Allu Arjun: ‘ಪುಷ್ಪ 2’ ಚಿತ್ರದ ಶೂಟಿಂಗ್​ಗೆ ಬಂದ ಅಲ್ಲು ಅರ್ಜುನ್​; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ
ಅಲ್ಲು ಅರ್ಜುನ್
TV9 Web
| Edited By: |

Updated on: Jan 20, 2023 | 7:26 PM

Share

ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಅವರ ವೃತ್ತಿಜೀವನದಲ್ಲಿ ಅತಿ ದೊಡ್ಡ ಬ್ಲಾಕ್​ ಬಸ್ಟರ್​ ಹಿಟ್​ ಎನಿಸಿಕೊಂಡ ‘ಪುಷ್ಪ’ ಸಿನಿಮಾವನ್ನು ಪ್ರೇಕ್ಷಕರು ಸಖತ್​ ಇಷ್ಟಪಟ್ಟರು. ಆ ಚಿತ್ರ ಎರಡು ಪಾರ್ಟ್​ನಲ್ಲಿ ಬರಲಿದೆ ಎಂದು ಮೊದಲೇ ಹೇಳಲಾಗಿತ್ತು. ಮೊದಲ ಪಾರ್ಟ್​ ಬಿಡುಗಡೆಯಾಗಿ ವರ್ಷವೇ ಉರುಳಿದರೂ ಕೂಡ 2ನೇ ಪಾರ್ಟ್​ಗೆ (Pushpa The Rule) ಚಿತ್ರೀಕರಣ ಶುರುವಾಗಲಿಲ್ಲ. ಆದರೆ ಈಗ ‘ಪುಷ್ಪ 2’ (Pushpa 2) ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಿದೆ. ನಾಯಕ ನಟ ಅಲ್ಲು ಅರ್ಜುನ್​ ಅವರು ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ಶೂಟಿಂಗ್​ ಸಲುವಾಗಿ ವಿಶಾಖಪಟ್ಟಣಕ್ಕೆ ಆಗಮಿಸಿದ ಅವರನ್ನು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಈ ವೇಳೆ ಅವರ ಹೊಸ ಲುಕ್​ ಗಮನ ಸೆಳೆದಿದೆ.

‘ಪುಷ್ಪ 2’ ಸಿನಿಮಾಗೆ ಸುಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಶೀಘ್ರದಲ್ಲೇ ‘ಪುಷ್ಪ 2’ ಶೂಟಿಂಗ್​ ಶುರುವಾಗಲಿದೆ ಎಂದು ಅವರು ಇತ್ತೀಚೆಗಷ್ಟೇ ಹೇಳಿದ್ದರು. ಈಗ ಅಲ್ಲು ಅರ್ಜುನ್​ ಅವರು ಚಿತ್ರೀಕರಣಕ್ಕಾಗಿ ವಿಶಾಖಪಟ್ಟಣಕ್ಕೆ ಆಗಮಿಸಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಆದಷ್ಟು ಬೇಗ ಈ ಚಿತ್ರದ ಶೂಟಿಂಗ್​ ಮುಗಿಯಲು ಮತ್ತು ದೊಡ್ಡ ಪರದೆಯಲ್ಲಿ ಸಿನಿಮಾವನ್ನು ಕಣ್ತುಂಬಿಕೊಳ್ಳುವ ಸಮಯ ಬರಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದನ್ನೂ ಓದಿ
Image
‘ಸೈಮಾ’ ಅವಾರ್ಡ್ಸ್​ ಪಾರ್ಟಿಯಲ್ಲಿ ಕುಣಿದು ಕುಪ್ಪಳಿಸಿದ ಅಲ್ಲು ಅರ್ಜುನ್​; ವಿಡಿಯೋ ನೋಡಿ
Image
Pushpa 2: ಮತ್ತೆ ಫೀಲ್ಡ್​ಗೆ ಇಳಿದ ಪುಷ್ಪರಾಜ್​; ಇಲ್ಲಿದೆ ರಶ್ಮಿಕಾ, ಅಲ್ಲು ಅರ್ಜುನ್​ ಅಭಿಮಾನಿಗಳಿಗೆ ಗುಡ್​ ನ್ಯೂಸ್​
Image
Allu Arjun: ‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ ಲುಕ್​ ಹೀಗಿರುತ್ತಾ? ವೈರಲ್​ ಆಗಿದೆ ಹೊಸ ಫೋಟೋ
Image
ಅಲ್ಲು ಅರ್ಜುನ್​ಗೆ ಬಾಡಿ ಶೇಮಿಂಗ್; ‘ವಡಾಪಾವ್ ಲುಕ್​’ ಎಂದು ಟೀಕಿಸಿದ ಫ್ಯಾನ್ಸ್​

ಇದನ್ನೂ ಓದಿ: Dhananjay: ‘ಪುಷ್ಪ 2’ ಚಿತ್ರದ ಶೂಟಿಂಗ್​ ಬಗ್ಗೆ ಧನಂಜಯ್ ಕೊಟ್ರು ಅಪ್​ಡೇಟ್​

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಪುಷ್ಪ’ ಚಿತ್ರ ಮೂಡಿಬಂತು. ಹಿಂದಿ ಪ್ರೇಕ್ಷಕರು ಈ ಸಿನಿಮಾವನ್ನು ಸಖತ್​ ಇಷ್ಟಪಟ್ಟರು. ಪರಿಣಾಮವಾಗಿ ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರ ನೂರು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿತು. ಆದ್ದರಿಂದ ಸೀಕ್ವೆಲ್​ ಮೇಲೆ ನಿರೀಕ್ಷೆ ಜೋರಾಗಿದೆ. ಆ ನಿರೀಕ್ಷೆಗೆ ತಕ್ಕಂತೆಯೇ ನಿರ್ದೇಶಕ ಸುಕುಮಾರ್​ ಅವರು ಸ್ಕ್ರಿಪ್ಟ್​​ನಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡಿದ್ದಾರೆ. ಆ ಕಾರಣದಿಂದಲೂ ಶೂಟಿಂಗ್ ಆರಂಭ ಆಗುವುದು ವಿಳಂಬ ಆಯ್ತು.

ಇದನ್ನೂ ಓದಿ: Mythri Movie Makers: ‘ಪುಷ್ಪ 2’ ನಿರ್ಮಾಪಕರ ಮೇಲೆ ಐಟಿ ದಾಳಿ; ಸಂಕಷ್ಟದಲ್ಲಿ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ

‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಅವರು ತುಂಬ ರಗಡ್​ ಆಗಿ ಕಾಣಿಸಿಕೊಂಡಿದ್ದರು. ಆದರೆ ಸೀಕ್ವೆಲ್​ನಲ್ಲಿ ಅವರ ಲುಕ್​ ಬದಲಾಗಲಿದೆ. ಅವರು ಸ್ಪೈಲಿಶ್​ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಚಿತ್ರದ ಕಥೆ ವಿದೇಶದಲ್ಲಿಯೂ ನಡೆಯಲಿದೆ ಎಂಬ ಮಾತು ಕೇಳಿಬಂದಿದೆ. ಇದರ ಸಲುವಾಗಿ ಅಲ್ಲು ಅರ್ಜುನ್​ ಅವರು ದೇಹದ ತೂಕ ಹೆಚ್ಚಿಸಿಕೊಂಡಿದ್ದಾರೆ. ಆ ಬದಲಾವಣೆಯನ್ನು ಫ್ಯಾನ್ಸ್​ ಗಮನಿಸಿದ್ದಾರೆ.

ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಜೊತೆ ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಘಟಾನುಘಟಿ ಕಲಾವಿದರು ನಟಿಸುತ್ತಿದ್ದಾರೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡುತ್ತಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ
ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ
ವಾಹನ ಸವಾರರೇ ಎಚ್ಚರ: ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ ಟ್ರಾಫಿಕ್ ಪೊಲೀಸ್
ವಾಹನ ಸವಾರರೇ ಎಚ್ಚರ: ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ ಟ್ರಾಫಿಕ್ ಪೊಲೀಸ್