AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಸಿನಿಮಾ ಟಿಕೆಟ್ ದರದಲ್ಲಿ ಭಾರಿ ಹೆಚ್ಚಳ, ಅಭಿಮಾನಿಗಳ ಅಸಮಾಧಾನ

Pushpa 2: ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಆಂಧ್ರ-ತೆಲಂಗಾಣಗಳಲ್ಲಿ ಸಿನಿಮಾದ ಟಿಕೆಟ್ ದರ ದೊಡ್ಡ ಮಟ್ಟದಲ್ಲಿ ಹೆಚ್ಚಳ ಆಗಲಿದ್ದು, ಅಭಿಮಾನಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

‘ಪುಷ್ಪ 2’ ಸಿನಿಮಾ ಟಿಕೆಟ್ ದರದಲ್ಲಿ ಭಾರಿ ಹೆಚ್ಚಳ, ಅಭಿಮಾನಿಗಳ ಅಸಮಾಧಾನ
ಮಂಜುನಾಥ ಸಿ.
|

Updated on: Nov 21, 2024 | 10:26 AM

Share

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಬಿಡುಗಡೆಗೆ ಹದಿನೈದು ದಿನವೂ ಇಲ್ಲ. ಸಿನಿಮಾವನ್ನು ಭಾರಿ ಅದ್ಧೂರಿಯಾಗಿ ತೆರೆಗೆ ತರಲು ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ತಯಾರಾಗಿದ್ದಾರೆ. ಈ ಸಿನಿಮಾದ ಪ್ರಚಾರಕ್ಕೆಂದೇ ಸುಮಾರು 50 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಸಿನಿಮಾದ ಒಟ್ಟು ಬಜೆಟ್ 500 ಕೋಟಿಗೂ ಹೆಚ್ಚಾಗಿದೆ. ಸಿನಿಮಾಕ್ಕೆ ಹೂಡಿರುವ ಬಂಡವಾಳ ವಾಪಸ್ ಪಡೆಯಲು ಟಿಕೆಟ್ ದರಗಳನ್ನು ಹೆಚ್ಚಿಸಲು ಚಿತ್ರತಂಡ ಮುಂದಾಗಿದೆ. ಆದರೆ ಇದಕ್ಕೆ ಅಲ್ಲು ಅರ್ಜುನ್ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಸಿನಿಮಾ ಟಿಕೆಟ್ ದರಗಳ ಮೇಲೆ ನಿಯಂತ್ರಣ ಹೇರಲಾಗಿದೆ. ಒಂದೊಮ್ಮೆ ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆ ಆಗುವುದಿದ್ದರೆ ಸರ್ಕಾರದಿಂದ ಅನುಮತಿ ಪಡೆದ ಬಳಿಕವಷ್ಟೆ ಟಿಕೆಟ್ ದರಗಳನ್ನು ಹೆಚ್ಚಿಸಿಕೊಳ್ಳಬೇಕಾಗುತ್ತದೆ. ಟಿಕೆಟ್ ದರ ಎಷ್ಟು ಹೆಚ್ಚಿಸಬೇಕು, ಎಷ್ಟು ದಿನಗಳ ಕಾಲ ಟಿಕೆಟ್ ದರ ಹೆಚ್ಚಿಗೆ ಇರಬೇಕು ಎಂಬಿತ್ಯಾದಿಯನ್ನು ಸರ್ಕಾರವೇ ಸೂಚಿಸುತ್ತದೆ. ಇದೀಗ ‘ಪುಷ್ಪ 2’ ಸಿನಿಮಾದ ಟಿಕೆಟ್ ದರ ಹೆಚ್ಚಳ ಹಾಗೂ ಹೆಚ್ಚುವರಿ ಶೋ ಪ್ರದರ್ಶಿಸಲು ಚಿತ್ರತಂಡ ಸರ್ಕಾರದ ಅನುಮತಿ ಕೋರಲು ಮುಂದಾಗಿದೆ.

ಈ ಹಿಂದೆ ‘ಆರ್​ಆರ್​ಆರ್’, ‘ಕಲ್ಕಿ 2898 ಎಡಿ’ ಸಿನಿಮಾಗಳಿಗೆಲ್ಲ ಆಂಧ್ರ, ತೆಲಂಗಾಣಗಳಲ್ಲಿ ಮಲ್ಟಿಪ್ಲೆಕ್ಸ್ ಟಿಕೆಟ್ ದರಗಳು ಭಾರಿ ಮೊತ್ತದಲ್ಲಿ ಹೆಚ್ಚಾಗಿದ್ದವು. ಮಲ್ಟಿಪ್ಲೆಕ್ಸ್​ನಲ್ಲಿ ನಿಗದಿತ ದರ 150 ರೂಪಾಯಿಗಳಿದ್ದು, ‘ಕಲ್ಕಿ’, ‘ಆರ್​ಆರ್​ಆರ್’ ಇನ್ನು ಕೆಲ ಸಿನಿಮಾಗಳಿಗೆ ಈ ಬೆಲೆ 450 ರೂಪಾಯಿ ವರೆಗೆ ಏರಿತ್ತು. ಆದರೆ ‘ಪುಷ್ಪ 2’ ಸಿನಿಮಾಕ್ಕೆ ಟಿಕೆಟ್ ಬೆಲೆ ಇನ್ನಷ್ಟು ಏರಿಕೆ ಆಗಲಿದೆ ಎಂದು ಊಹಿಸಲಾಗಿದೆ.

‘ಪುಷ್ಪ 2’ ಸಿನಿಮಾದ ಟಿಕೆಟ್ ಬೆಲೆ ಆಂಧ್ರ-ತೆಲಂಗಾಣದ ಮಲ್ಟಿಪ್ಲೆಕ್ಸ್​ಗಳಲ್ಲಿ 700 ರೂಪಾಯಿ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸುಮಾರು 350 ರಿಂದ 450 ರೂಪಾಯಿ ವರೆಗೆ ಇರಲಿದೆಯಂತೆ. ಈ ಬೆಲೆ ಎಷ್ಟು ವಾರಗಳ ವರೆಗೆ ಇರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:‘ಪುಷ್ಪ 2’ ಬಿಡುಗಡೆಗೂ ಮುನ್ನ ಮತ್ತೊಮ್ಮೆ ರಿಲೀಸ್ ಆಗಲಿದೆ ‘ಪುಷ್ಪ’ ಸಿನಿಮಾ

ಇನ್ನು ಬೆಂಗಳೂರಿನಲ್ಲಂತೂ ಯಾವುದೇ ಪರ ಭಾಷೆಯ ದೊಡ್ಡ ಸಿನಿಮಾ ಬಿಡುಗಡೆ ಆದಾಗಲೂ ಟಿಕೆಟ್ ಬೆಲೆ ಏರಿಕೆ ಎಂಬುದು ಸಾಮಾನ್ಯ ಎಂಬಂತಾಗಿದೆ. ಬೆಂಗಳೂರಿನಲ್ಲಿ ‘ಪುಷ್ಪ 2’ ಸಿನಿಮಾದ ಟಿಕೆಟ್ ಬೆಲೆ 1000 ರೂಪಾಯಿಗೆ ಮಾರಾಟವಾಗುವ ಸಾಧ್ಯತೆ ದಟ್ಟವಾಗಿದೆ. ಇನ್ನು ಕೆಲವು ಹೈಕೆಟ್ ಮಲ್ಟಿಪ್ಲೆಕ್ಸ್​ಗಳಲ್ಲಿ 2000 ದಾಟಲಿದೆ ಟಿಕೆಟ್ ಬೆಲೆ.

ಕರ್ನಾಟಕದ ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್​ಗಳ ಟಿಕೆಟ್ ಬೆಲೆ ಮೇಲೆ ಸರ್ಕಾರ ನಿಯಂತ್ರಣ ಹೇರಬೇಕೆಂದು ಚಲನಚಿತ್ರ ವಾಣಿಜ್ಯ ಮಂಡಳಿ ಇತ್ತೀಚೆಗಷ್ಟೆ ಸಿಎಂ ಅವರನ್ನು ಭೇಟಿಯಾಗಿ ಮನವಿ ನೀಡಿದೆ. ‘ಪುಷ್ಪ 2’ ಸಿನಿಮಾದ ಮೂಲಕವೇ ಈ ನಿಯಮ ಜಾರಿಗೆ ಬರಬೇಕು, ಅನವಶ್ಯಕವಾಗಿ ಸಿನಿಮಾ ಟಿಕೆಟ್ ಏರಿಕೆ ಮಾಡಬಾರದು ಎಂದು ಒತ್ತಾಯಿಸಿದ್ದಾರೆ. ‘ಪುಷ್ಪ 2’ ಸಿನಿಮಾದ ಕರ್ನಾಟಕ ವಿತರಣೆ ಹಕ್ಕು ಪಡೆದಿರುವವರು ನಾವು ‘ಕೆಜಿಎಫ್’ ದಾಖಲೆ ಮುರಿಯುತ್ತೇವೆ ಎಂದು ಈಗಾಗಲೇ ಸವಾಲು ಹಾಕಿದ್ದಾರೆ. ಹೀಗಾಗಿ ‘ಪುಷ್ಪ 2’ ಸಿನಿಮಾದ ಬೆಂಗಳೂರು ಬಿಡುಗಡೆ ಹೇಗಿರಲಿದೆ ಎಂಬುದು ಕುತೂಹಲ ಕೆರಳಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್