AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಹುಬಲಿ 2’ ದಾಖಲೆ ಮುರಿಯಲು ರೆಡಿ ಆದ ‘ಪುಷ್ಪ 2’ ಸಿನಿಮಾ

Pushpa 2: ಪುಷ್ಪ 2 ಸಿನಿಮಾ ಬಾಕ್ಸ್ ಆಫೀಸ್ ದೋಚುತ್ತಿದೆ. ಬಿಡುಗಡೆ ಆದ ನಾಲ್ಕೇ ದಿನಕ್ಕೆ ಸಾವಿರ ಕೋಟಿ ಕಲೆಕ್ಷನ್ ಮಾಡಿದ್ದ ‘ಪುಷ್ಪ 2’ ಸಿನಿಮಾ, ಈಗ ‘ಬಾಹುಬಲಿ’ ಸಿನಿಮಾದ ದಾಖಲೆಯನ್ನು ಮುರಿಯಲು ಸಜ್ಜಾಗಿ ನಿಂತಿದೆ. ‘ಬಾಹುಬಲಿ’ ಮಾತ್ರವೇ ಅಲ್ಲದೆ, ‘ಆರ್​ಆರ್​ಆರ್’, ‘ಕೆಜಿಎಫ್ 2’ ಸಿನಿಮಾದ ಬಾಕ್ಸ್ ಆಫೀಸ್​ ದಾಖಲೆಗಳನ್ನು ಮುರಿಯಲಿದೆ ‘ಪುಷ್ಪ 2’.

‘ಬಾಹುಬಲಿ 2’ ದಾಖಲೆ ಮುರಿಯಲು ರೆಡಿ ಆದ ‘ಪುಷ್ಪ 2’ ಸಿನಿಮಾ
Pushpa 2 Bahubali 2
ಮಂಜುನಾಥ ಸಿ.
|

Updated on: Dec 28, 2024 | 4:52 PM

Share

ಚಿತ್ರರಂಗದ ರೂಪುರೇಷೆ ಬದಲಾಗುತ್ತಿದೆ. ಈಗ ಇಂಡಸ್ಟ್ರಿಯಲ್ಲಿರುವ ಎಲ್ಲಾ ಚಿತ್ರಗಳು ಪ್ಯಾನ್ ಇಂಡಿಯಾ ಸಿನಿಮಾಗಳಾಗಿ ಬಿಡುಗಡೆಯಾಗುತ್ತಿವೆ. ಮೊದಲು 100 ಕೋಟಿ ರೂಪಾಯಿ ಗಳಿಸಿದರೆ ಹೆಚ್ಚು ಎಂಬ ಕಾಲ ಇತ್ತು. ಆದರೆ, ಈಗಿನ ಸಿನಿಮಾಗಳು ಸಾವಿರ ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿ ಹೊಸ ದಾಖಲೆ ಸೃಷ್ಟಿಸುತ್ತಿವೆ. ಆದರೆ ಈಗ ಪುಷ್ಪ 2 ಚಿತ್ರ ಎಲ್ಲಾ ದಾಖಲೆಗಳನ್ನು ಮುರಿಯಲಿದೆ.

ಆಮಿರ್ ಖಾನ್ ನಟನೆಯ ‘ದಂಗಲ್’ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ. ಈ ಸಿನಿಮಾ ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿ ದಾಖಲೆ ಸೃಷ್ಟಿಸಿದೆ. ನಿತೀಶ್ ತಿವಾರಿ ನಿರ್ದೇಶನದ ಈ ಚಿತ್ರ ವಿಶ್ವದಾದ್ಯಂತ ರೂ. 2024.6 ಕೋಟಿ ಸಂಗ್ರಹಿಸಿದೆ. ಈ ದಾಖಲೆಯನ್ನು ಯಾವ ಸಿನಿಮಾದಿಂದ ಈವರೆಗೆ ಮುರಿಯಲಾಗಿಲ್ಲ.

‘ಬಾಹುಬಲಿ 2’ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರಗಳ ಪೈಕಿ ಎರಡನೇ ಸ್ಥಾನದಲ್ಲಿದೆ. ರಾಜಮೌಳಿ ನಿರ್ದೇಶನದ ಬಾಹುಬಲಿ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆಯಾಗಿತ್ತು. ‘ಬಾಹುಬಲಿ 2’ ಚಿತ್ರ ವಿಶ್ವದಾದ್ಯಂತ ರೂ. 1742.3 ಕೋಟಿ ಗಳಿಸಿದೆ. ಈ ಮೂಲಕ ದಾಖಲೆ ಬರೆದಿತ್ತು. ಇದನ್ನು ‘ಪುಷ್ಪ 2’ ಮುರಿಯಲು ರೆಡಿ ಆಗಿದೆ.

ಇದನ್ನೂ ಓದಿ:‘ಪುಷ್ಪ 2’ ಹಾಡಿಗೆ ಅದ್ವಿತಿ ಶೆಟ್ಟಿ ಮಸ್ತ್ ಡ್ಯಾನ್ಸ್

‘ಪುಷ್ಪ 2’ ಈಗ ಮೂರನೇ ಸ್ಥಾನದಲ್ಲಿದೆ. ಡಿಸೆಂಬರ್ 5 ರಂದು ಬಿಡುಗಡೆಯಾದ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2’ ಭರ್ಜರಿ ಕಮಾಯಿ ಮಾಡುತ್ತಿದೆ. ಚಿತ್ರಮಂದಿರಗಳಲ್ಲಿ ಇಂದಿಗೂ ಮಿಂಚುತ್ತಿದೆ. ಈ ಚಿತ್ರ ಈಗಾಗಲೇ ರೂ. 1719.5 ಕೋಟಿ ಸಂಗ್ರಹಿಸಿದೆ. ಶೀಘ್ರದಲ್ಲೇ ‘ಪುಷ್ಪ 2’ ಚಿತ್ರವು ‘ಬಾಹುಬಲಿ 2’ ದಾಖಲೆಯನ್ನು ಮುರಿಯಲಿದೆ.

ನಾಲ್ಕನೇ ಸ್ಥಾನದಲ್ಲಿ ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್‌’ ಸಿನಿಮಾ ಇದೆ. ರಾಮ್ ಚರಣ್ ಮತ್ತು ಎನ್ಟಿಆರ್ ಅಭಿನಯದ RRR ಚಿತ್ರ ವಿಶ್ವಾದ್ಯಂತ ರೂ. 1250.9 ಕೋಟಿ ಸಂಗ್ರಹಿಸಲಾಗಿದೆ. ಈ ಸಿನಿಮಾದ ನಂತರ ಯಶ್ ‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದಿತ್ತು. ಈ ಚಿತ್ರ ರೂ. 1176.5 ಕೋಟಿ ಸಂಗ್ರಹಿಸಿದೆ. ಈಗ ಎಲ್ಲ ದಾಖಲೆಗಳನ್ನು ‘ಪುಷ್ಪ 2’ ಉಡೀಸ್ ಮಾಡುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ