ಸಾವಿರ ಕೋಟಿ ರೂಪಾಯಿ ಸನಿಹದಲ್ಲಿ ‘ಪುಷ್ಪ 2’ ಕಲೆಕ್ಷನ್​; ವಿಶ್ವಾದ್ಯಂತ ಹೌಸ್​ಪುಲ್

ನಿರೀಕ್ಷಿಸಿದ ರೀತಿಯಲ್ಲೇ ‘ಪುಷ್ಪ 2’ ಸಿನಿಮಾ ಅಬ್ಬರಿಸುತ್ತಿದೆ. ವಿಶ್ವದೆಲ್ಲೆಡೆ ಈ ಚಿತ್ರಕ್ಕೆ ಅತ್ಯುತ್ತಮವಾಗಿ ಕಲೆಕ್ಷನ್ ಆಗುತ್ತಿದೆ. ಅಲ್ಲು ಅರ್ಜುನ್ ಅವರ ಅಭಿಮಾನಿಗಳಿಗೆ ‘ಪುಷ್ಪ 2’ ಸಿನಿಮಾ ಸಖತ್ ಇಷ್ಟ ಆಗಿದೆ. ವೀಕೆಂಡ್ ಮಾತ್ರವಲ್ಲದೇ ಇನ್ನುಳಿದ ದಿನಗಳಲ್ಲಿ ಕೂಡ ಪ್ರೇಕ್ಷಕರು ಮುಗಿಬಿದ್ದು ಈ ಚಿತ್ರವನ್ನು ನೋಡುತ್ತಿದ್ದಾರೆ.

ಸಾವಿರ ಕೋಟಿ ರೂಪಾಯಿ ಸನಿಹದಲ್ಲಿ ‘ಪುಷ್ಪ 2’ ಕಲೆಕ್ಷನ್​; ವಿಶ್ವಾದ್ಯಂತ ಹೌಸ್​ಪುಲ್
ಅಲ್ಲು ಅರ್ಜುನ್

Updated on: Dec 10, 2024 | 9:55 PM

ಎಲ್ಲೆಲ್ಲೂ ‘ಪುಷ್ಪ 2’ ಸಿನಿಮಾದ ಜಯಘೋಷ ಕೇಳಿಬರುತ್ತಿದೆ. ನಿರ್ಮಾಪಕರು ಈ ಸಿನಿಮಾದಿಂದ ಭರ್ಜರಿ ಲಾಭ ಕಂಡಿದ್ದಾರೆ. ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್, ಫಹಾದ್ ಫಾಸಿಲ್ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಭಾರಿ ಜನಮೆಚ್ಚುಗೆ ಸಿಕ್ಕಿದೆ. ಅದ್ದೂರಿತನ ಈ ಸಿನಿಮಾದ ಪ್ರತಿ ಫ್ರೇಮ್​ನಲ್ಲೂ ಕಾಣಿಸಿದೆ. ನಿರ್ದೇಶಕ ಸುಕುಮಾರ್​ ಅವರ ಕೆಲಸವನ್ನು ಪ್ರೇಕ್ಷಕರು ಹೊಗಳುತ್ತಿದ್ದಾರೆ. ಅಲ್ಲು ಅರ್ಜುನ್ ಅವರ ನಟನೆ ಕೂಡ ಪ್ರಶಂಸೆ ಪಡೆಯುತ್ತಿದೆ. ಇದೆಲ್ಲದರ ಪರಿಣಾಮವಾಗಿ ‘ಪುಷ್ಪ 2’ ಸಿನಿಮಾದ ಕಲೆಕ್ಷನ್​ ಈಗ ಸಾವಿರ ಕೋಟಿ ರೂಪಾಯಿ ಸನಿಹದಲ್ಲಿದೆ.

ಬಿಡುಗಡೆಗೂ ಮುನ್ನವೇ ‘ಪುಷ್ಪ 2’ ಸಿನಿಮಾದ ಬಗ್ಗೆ ಹೈಪ್ ಸೃಷ್ಟಿ ಆಗಿತ್ತು. ಭಾರತದಲ್ಲಿ ಮಾತ್ರವಲ್ಲದೇ ಬೇರೆ ಬೇರೆ ದೇಶಗಳಲ್ಲಿ ಕೂಡ ಈ ಚಿತ್ರದ ಬಗ್ಗೆ ಪ್ರಚಾರ ಮಾಡಲಾಗಿತ್ತು. ಡಿಸೆಂಬರ್​ 5ರಂದು ವಿಶ್ವಾದ್ಯಂತ ‘ಪುಷ್ಪ 2’ ಬಿಡುಗಡೆ ಆಯಿತು. ಎಲ್ಲ ಕಡೆಗಳಿಂದ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಇದರಿಂದ ಚಿತ್ರತಂಡದವರ ಮೊಗದಲ್ಲಿ ಗೆಲುವಿನ ನಗು ಮೂಡಿದೆ.

‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯ ಮೂಲಕ ‘ಪುಷ್ಪ 2’ ಸಿನಿಮಾ ನಿರ್ಮಾಣ ಆಗಿದೆ. ಈ ಸಿನಿಮಾದ ಪ್ರತಿ ದಿನದ ಕಲೆಕ್ಷನ್ ಬಗ್ಗೆ ಈ ಸಂಸ್ಥೆಯ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಲಾಗುತ್ತಿದೆ. 5 ದಿನಕ್ಕೆ ವಿಶ್ವಾದ್ಯಂತ ಎಷ್ಟು ಕಲೆಕ್ಷನ್ ಆಗಿದೆ ಎಂಬುದನ್ನು ತಿಳಿಸಲು ಹೊಸ ಪೋಸ್ಟರ್​ ಹಂಚಿಕೊಳ್ಳಲಾಗಿದೆ. ಅದನ್ನು ಕಂಡು ಸಿನಿಪ್ರಿಯರು ಕಣ್ಣರಳಿಸಿದ್ದಾರೆ.

ಮಲ್ಲಿಗೆ ಮುಡಿದು ನಲಿದಾಡಿದ ರಶ್ಮಿಕಾ ಮಂದಣ್ಣ

ನಿರ್ಮಾಪಕರು ಹಂಚಿಕೊಂಡಿರುವ ಮಾಹಿತಿ ಪ್ರಕಾರ, ‘ಪುಷ್ಪ 2’ ಸಿನಿಮಾ ಒಟ್ಟು 5 ದಿನಗಳಲ್ಲಿ ಬರೋಬ್ಬರಿ 922 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಲು ಇನ್ನು 78 ಕೋಟಿ ರೂಪಾಯಿ ಮಾತ್ರ ಬಾಕಿ ಇದೆ. ಅನಾಯಾಸವಾಗಿ ಈ ಚಿತ್ರ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಲಿದೆ. ತೆಲುಗಿನ ಈ ಸಿನಿಮಾ ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಗಳಿಗೆ ಡಬ್ ಆಗಿ ಬಿಡುಗಡೆ ಆಗಿದೆ. ಹಿಂದಿ ಪ್ರೇಕ್ಷಕರಿಗೆ ಈ ಸಿನಿಮಾ ತುಂಬಾ ಇಷ್ಟ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us