AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa 2: 60 ಕೋಟಿ ರೂಪಾಯಿಗೆ ‘ಪುಷ್ಪ 2’ ಸಿನಿಮಾ ಆಡಿಯೋ ಹಕ್ಕು ಮಾರಾಟ?

‘ಪುಷ್ಪ 2’ ಸಿನಿಮಾಗೆ ದೇವಿ ಶ್ರೀ ಪ್ರಸಾದ್​ ಅವರು ಸಂಗೀತ ನೀಡುತ್ತಿದ್ದಾರೆ. 2021ರಲ್ಲಿ ತೆರೆಕಂಡ ‘ಪುಷ್ಪ 1’ ಸಿನಿಮಾದ ಎಲ್ಲ ಸಾಂಗ್ಸ್​ ಸೂಪರ್​ ಹಿಟ್​ ಆಗಿದ್ದವು. ಆದ್ದರಿಂದ ಈಗ ‘ಪುಷ್ಪ 2’ ಸಿನಿಮಾದ ಹಾಡುಗಳ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಸೃಷ್ಟಿಯಾಗಿದೆ. ಅದರ ಪರಿಣಾಮವಾಗಿ, ಇಷ್ಟು ದೊಡ್ಡ ಮೊತ್ತಕ್ಕೆ ಡೀಲ್​ ಮಾಡಲಾಗಿದೆ.

Pushpa 2: 60 ಕೋಟಿ ರೂಪಾಯಿಗೆ ‘ಪುಷ್ಪ 2’ ಸಿನಿಮಾ ಆಡಿಯೋ ಹಕ್ಕು ಮಾರಾಟ?
ರಶ್ಮಿಕಾ ಮಂದಣ್ಣ, ಅಲ್ಲು ಅರ್ಜನ್​
ಮದನ್​ ಕುಮಾರ್​
|

Updated on: Apr 12, 2024 | 8:51 PM

Share

ಅಲ್ಲು ಅರ್ಜುನ್​ (Allu Arjun) ನಟನೆಯ ‘ಪುಷ್ಪ 2’ ಸಿನಿಮಾದ ಬಿಡುಗಡೆಗೆ ಇನ್ನು ನಾಲ್ಕು ತಿಂಗಳು ಮಾತ್ರ ಬಾಕಿ ಇದೆ. ಈ ಚಿತ್ರಕ್ಕಾಗಿ ಅವರ ಅಭಿಮಾನಿಗಳು ಕಾದಿದ್ದಾರೆ. ಈಗಾಗಲೇ ಪ್ರಚಾರಕಾರ್ಯ ಜೋರಾಗಿದೆ. ಪುಷ್ಪ 2’ (Pushpa 2) ಬಗ್ಗೆ ಕೇಳಿಬರುತ್ತಿರುವ ಪ್ರತಿ ಮಾಹಿತಿ ಕೂಡ ಅಭಿಮಾನಿಗಳಿಗೆ ಥ್ರಿಲ್​ ನೀಡುತ್ತದೆ. ಆ ಮೂಲಕ ನಿರೀಕ್ಷೆ ಹೆಚ್ಚಿಸಲಾಗುತ್ತಿದೆ. ಈಗ ಚಿತ್ರದ ಆಡಿಯೋ ಹಕ್ಕುಗಳು ಭರ್ಜರಿ ಮೊತ್ತಕ್ಕೆ ಮಾರಾಟ ಆಗಿರುವ ಬಗ್ಗೆ ಸುದ್ದಿ ಪ್ರಕಟ ಆಗಿದೆ. ಬರೋಬ್ಬರಿ 60 ಕೋಟಿ ರೂಪಾಯಿಗೆ ‘ಪುಷ್ಪ 2’ ಸಿನಿಮಾದ ಆಡಿಯೋ (Pushpa 2 Songs) ರೈಟ್ಸ್​ ಸೇಲ್​ ಆಗಿದೆ ಎನ್ನಲಾಗಿದೆ.

ಟೀ-ಸಿರೀಸ್​ ಸಂಸ್ಥೆಯ ಭೂಷಣ್​ ಕುಮಾರ್​ ಅವರು ಈ ಡೀಲ್​ ಕುದುರಿಸಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಪುಷ್ಪ 2’ ಸಿನಿಮಾ ಮೂಡಿಬರುತ್ತಿದೆ. ಅಂದರೆ ತೆಲುಗಿನ ಜೊತೆ ಕನ್ನಡ, ತಮಿಳು, ಹಿಂದಿ ಮುಂತಾದ ಭಾಷೆಗಳಲ್ಲೂ ಹಾಡುಗಳು ಸಿದ್ಧವಾಗುತ್ತಿವೆ. ಎಲ್ಲ ಭಾಷೆಯ ಆಡಿಯೋ ಹಕ್ಕುಗಳನ್ನು ಟಿ-ಸಿರೀಸ್​ ಸಂಸ್ಥೆ ಪಡೆದುಕೊಂಡಿದೆ. ಅದಕ್ಕಾಗಿ 60 ಕೋಟಿ ರೂಪಾಯಿ ನೀಡಲಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ನಿರ್ಮಾಪಕರ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: ಒಂದೇ ದೃಶ್ಯಕ್ಕೆ 50 ಕೋಟಿ ರೂಪಾಯಿ ಖರ್ಚು ಮಾಡಿದ ‘ಪುಷ್ಪ 2’ ಸಿನಿಮಾ ತಂಡ

ದೇವಿ ಶ್ರೀ ಪ್ರಸಾದ್​ ಅವರು ‘ಪುಷ್ಪ 2’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 2021ರಲ್ಲಿ ಬಿಡುಗಡೆ ಆದ ‘ಪುಷ್ಪ 1’ ಸಿನಿಮಾದ ಎಲ್ಲ ಹಾಡುಗಳು ಸೂಪರ್​ ಹಿಟ್​ ಆಗಿದ್ದವು. ಅದರಲ್ಲೂ ‘ಶ್ರೀವಲ್ಲಿ..’, ‘ಉ ಅಂಟಾವ ಮಾವ..’ ಹಾಡುಗಳು ಹೊಸ ಕ್ರೇಜ್​ ಸೃಷ್ಟಿ ಮಾಡಿದ್ದವು. ಈಗ ‘ಪುಷ್ಪ 2’ ಚಿತ್ರದ ಹಾಡುಗಳ ಮೇಲೆ ವಿಪರೀತ ನಿರೀಕ್ಷೆ ಇದೆ. ಹಾಗಾಗಿಯೇ ಇಷ್ಟು ದೊಡ್ಡ ಮೊತ್ತಕ್ಕೆ ಡೀಲ್​ ಮಾಡಲಾಗಿದೆ. ಅಲ್ಲು ಅರ್ಜುನ್​ ಅವರ ವೃತ್ತಿಜೀವನದಲ್ಲಿ 60 ಕೋಟಿ ರೂಪಾಯಿಗೆ ಆಡಿಯೋ ಸೇಲ್​ ಆಗಿದ್ದು ಇದೇ ಮೊದಲು.

ಇದನ್ನೂ ಓದಿ: ‘ಪುಷ್ಪ 2’ ಎದುರು ಬರಲ್ಲ ‘ಸಿಂಗಂ ಅಗೇನ್​’; ರಿಲೀಸ್​ ಮುಂದೂಡಿಕೊಂಡ ರೋಹಿತ್​ ಶೆಟ್ಟಿ​?

ಸುಕುಮಾರ್​ ಅವರು ‘ಪುಷ್ಪ 2’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದು ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​, ಫಹಾದ್​ ಫಾಸಿಲ್ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಟೀಸರ್​ ಬಿಡುಗಡೆಯಾಗಿ ಹೊಸ ಕ್ರೇಜ್​ ಸೃಷ್ಟಿ ಮಾಡಿದೆ. ಟೀಸರ್​ನಲ್ಲಿ ಕಾಣಿಸಿಕೊಂಡ ಜಾತ್ರೆ ದೃಶ್ಯಕ್ಕಾಗಿ ಬರೋಬ್ಬರಿ 50 ಕೋಟಿ ರೂಪಾಯಿ ಖರ್ಚಾಗಿದೆಯಂತೆ. ರಶ್ಮಿಕಾ ಮಂದಣ್ಣ ಅವರ ಫಸ್ಟ್​ ಲುಕ್​ ಪೋಸ್ಟರ್​​ ಕೂಡ ವೈರಲ್​ ಆಗಿದೆ. ಆಗಸ್ಟ್​ 15ರಂದು ‘ಪುಷ್ಪ 2’ ಸಿನಿಮಾ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ