AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ; ಚೇತರಿಕೆ ಕಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೀತೇಜ್

‘ಪುಷ್ಪ 2’ ಚಿತ್ರದ ಪ್ರೀಮಿಯರ್​ ಸಮಯದಲ್ಲಿ ಕಾಲ್ತುಳಿತ ಉಂಟಾಗಿತ್ತು. ಗಂಭೀರವಾಗಿ ಗಾಯಗೊಂಡ ಶ್ರೀತೇಜ್ ನಾಲ್ಕು ತಿಂಗಳ ತೀವ್ರ ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಆತ ಕೋಮಾ ಸ್ಥಿತಿಯಲ್ಲಿದ್ದಾಗ ಅಲ್ಲು ಅರ್ಜುನ್ ಸೇರಿದಂತೆ ಅನೇಕರು ಆತನ ಚೇತರಿಕೆಗಾಗಿ ಪ್ರಾರ್ಥಿಸಿದ್ದರು ಮತ್ತು ಸಹಾಯ ಮಾಡಿದ್ದರು.

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ; ಚೇತರಿಕೆ ಕಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೀತೇಜ್
ಶ್ರೀತೇಜ್
ರಾಜೇಶ್ ದುಗ್ಗುಮನೆ
|

Updated on: Apr 30, 2025 | 7:05 AM

Share

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿ ಮಾಡಿತ್ತು. ಕಳೆದ ಡಿಸೆಂಬರ್​ 4ರಂದು ಈ ಘಟನೆ ನಡೆಯಿತು.‘ಪುಷ್ಪ 2’ ಚಿತ್ರದ (Pushpa 2 Movie) ಪ್ರೀಮಿಯರ್ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟರೆ ಮಗನಿಗೆ ಗಾಯಗಳು ಆದವು. ಶ್ರೀತೇಜ್ ಕೋಮಾ ಸ್ಥಿತಿಯಲ್ಲಿ ಇದ್ದ. ಆತನ ಪರಿಸ್ಥಿತಿ ತುಂಬಾನೇ ಗಂಭೀರ ಆಗಿತ್ತು. ನಾಲ್ಕು ತಿಂಗಳ ಕಾಲ ಆತನಿಗೆ ಚಿಕಿತ್ಸೆ ನೀಡಲಾಯಿತು. ಕೊನೆಗೂ ಶ್ರೀತೇಜ್  ರಿಕವರಿ ಕಂಡಿದ್ದಾನೆ. ಈ ವಿಚಾರ ಕೇಳಿ ಅನೇಕರು ನಿಟ್ಟುಸಿರು ಬಿಟ್ಟಿದ್ದಾರೆ.

‘ಪುಷ್ಪ 2’ ಪ್ರೀಮಿಯರ್ ವೇಳೆ ಚಿತ್ರ ತಂಡ ಆಗಮಿಸಿತ್ತು. ಈ ವೇಳೆ ನೂಕುನುಗ್ಗಲು ಉಂಟಾಯಿತು. ಪೊಲೀಸರು ಇದನ್ನು ನಿಯಂತ್ರಿಸಲು ಸಾಕಷ್ಟು ಪ್ರಯತ್ನಪಟ್ಟರು. ಆದರೆ, ಸಾಧ್ಯವಾಗಿಲ್ಲ. ಈ ವೇಳೆ ಪೊಲೀಸರು ಲಾಠಿ ಚಾರ್ಜ್​ ಮಾಡಿದರು. ಕಾಲ್ತುಳಿತ ಕೂಡ ಉಂಟಾಯಿತು. ಈ ವೇಳೆ ಮಹಿಳೆ ಮೃತಪಟ್ಟರು. ಅವರ ಮಗ ಶ್ರೀತೇಜ್​ಗೆ ತೀವ್ರ ಗಾಯಗಳು ಆಗಿದ್ದವು. ಹೈದರಾಬಾದ್​ನ ಕಿಮ್ಸ್ ಆಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ನೀಡಲಾಯಿತು. ಸತತ ನಾಲ್ಕು ತಿಂಗಳ ಕಾಲ ಚಿಕಿತ್ಸೆ ನೀಡಲಾಗಿದೆ.

ನಟ ಅಲ್ಲು ಅರ್ಜುನ್ ಮಾತ್ರವಲ್ಲ, ತೆಲಂಗಾಣ ಸರ್ಕಾರ, ‘ಪುಷ್ಪ 2’ ತಂಡದವರು ಆತ ರಿಕವರಿ ಆಗಲೇಬೇಕು ಎಂದು ವೈದ್ಯರ ಬಳಿ ಒತ್ತಾಯಿಸಿದ್ದರು. ಅಲ್ಲದೆ ಅಗತ್ಯ ಸಹಾಯವನ್ನು ನೀಡುವ ಭರವಸೆ ನೀಡಿದ್ದರು. ವೈದ್ಯರ ಪ್ರಯತ್ನ, ಜನರ ಕೋರಿಕೆ ಹಾಗೂ ದೇವರ ದಯೆಯಿಂದ ಶ್ರೀತೇಜ್ ಚೇತರಿಕೆ ಕಂಡು ಡಿಸ್ಚಾರ್ಜ್ ಆಗಿದ್ದಾನೆ.

ಇದನ್ನೂ ಓದಿ
Image
‘ಬಾಹುಬಲಿ 2’ ಚಿತ್ರಕ್ಕೆ 8 ವರ್ಷ; ರೀ-ರಿಲೀಸ್ ದಿನಾಂಕ ಘೋಷಣೆ
Image
ಅವನು ಗೆಳೆಯನಲ್ಲ, ಸಹೋದ್ಯೋಗಿ; ಅಕ್ಷಯ್-ಪರೇಶ್ ಮಧ್ಯೆ ಯಾವುದೂ ಸರಿ ಇಲ್ಲ?
Image
ಬಸ್ ಡ್ರೈವರ್ ಆಗಿದ್ದ ಯಶ್ ತಂದೆ ಈಗ ನಿರ್ಮಾಪಕ; ಹೊಸ ಬ್ಯಾನರ್ ಶುರು?
Image
ನಾನಿಗೆ ಕನ್ನಡ ಪಾಠ ಮಾಡಿದ ಶ್ರೀನಿಧಿ ಶೆಟ್ಟಿ; ಎಷ್ಟು ಕ್ಯೂಟ್ ನೋಡಿ

ಈಗ ಶ್ರೀತೇಜ್​ನ ಮನೆಗೆ ಕಳುಹಿಸುತ್ತಿಲ್ಲ. ಬದಲಿಗೆ ಆತನನ್ನು ಪುನರ್ವಸತಿ ಕೇಂದ್ರಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ಅಲ್ಲಿ ಕೆಲ ದಿನಗಳ ಕಾಲ ಚಿಕಿತ್ಸೆ ಇರಲಿದೆ. ಅವನ ಆರೋಗ್ಯ ಸುಸ್ಥಿತಿಯಲ್ಲಿದೆ ಎಂದು ಹೇಳಲಾಗುತ್ತಿದೆ. ಪುನರ್ವಸತಿ ಕೇಂದ್ರದ ಸಮಯದಲ್ಲಿ ಅವರ ಆರೋಗ್ಯ ಮತ್ತಷ್ಟು ಚೇತರಿಕೆ ಕಾಣುವ ನಿರೀಕ್ಷೆ ಇದೆ.

ಇದನ್ನೂ ಓದಿ: ಸಂಧ್ಯಾ ಥಿಯೇಟರ್ ಕಾಲ್ತುಳಿತ: ಮೃತ ಮಹಿಳೆ ಕುಟುಂಬಕ್ಕೆ 2 ಕೋಟಿ ಕೊಟ್ಟ ಅಲ್ಲು ಅರ್ಜುನ್

ಶ್ರೀತೇಜ್ ಅವರು ರಿಕವರಿ ಆಗಲಿ ಎಂದು ಅಲ್ಲು ಅರ್ಜುನ್ ಅವರು ಸಾಕಷ್ಟು ಪ್ರಯತ್ನಪಟ್ಟಿದ್ದರು. ಈ ಮೊದಲು ಆಸ್ಪತ್ರೆಗೆ ತೆರಳಿ ಶ್ರೀತೇಜ್​ನ ಅವರು ಭೇಟಿ ಆಗಿಯೂ ಬಂದಿದ್ದರು. ಈಗ ಅವರು ಡಿಸ್ಚಾರ್ಜ್ ಆಗಿರೋದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ