‘ಪುಷ್ಪ’ ಚಿತ್ರ (Pushpa Movie) ತೆರೆಗೆ ಬಂದು 8 ತಿಂಗಳು ಪೂರ್ಣಗೊಳ್ಳುತ್ತಾ ಬಂದಿದೆ. ಆದರೆ, ಈ ವರೆಗೆ ಎರಡನೇ ಪಾರ್ಟ್ಗೆ ಶೂಟಿಂಗ್ ಆರಂಭ ಆಗಿಲ್ಲ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜುಲೈ ತಿಂಗಳಲ್ಲೇ ಈ ಸಿನಿಮಾದ ಶೂಟಿಂಗ್ ಆರಂಭಗೊಂಡಿರಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ಕೆಲಸಗಳು ಆರಂಭ ಆಗೋದು ವಿಳಂಬ ಆಯಿತು. ಈಗ ‘ಪುಷ್ಪ 2’ ಚಿತ್ರಕ್ಕೆ ಆರಂಭದಲ್ಲೇ ಕಂಟಕ ಎದುರಾಗಿದೆ. ಸಿನಿಮಾದ ಶೂಟಿಂಗ್ ಮತ್ತಷ್ಟು ವಿಳಂಬ ಆಗುವ ಸೂಚನೆ ಸಿಕ್ಕಿದೆ.
ಸದ್ಯ ಟಾಲಿವುಡ್ನಲ್ಲಿ ನಿರ್ಮಾಪಕರ ಸಂಘದವರು ಮುಷ್ಕರ ಆರಂಭಿಸಿದ್ದಾರೆ. ಕೆಲ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಆ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೆ ಶೂಟಿಂಗ್ ನಡೆಸಬಾರದು ಎಂಬ ಆದೇಶ ಹೊರಡಿಸಲಾಗಿದೆ. ಈ ಕಾರಣಕ್ಕೆ ‘ಪುಷ್ಪ 2’ ಚಿತ್ರದ ಕೆಲಸ ವಿಳಂಬ ಆಗುವ ಸೂಚನೆ ಸಿಕ್ಕಿದೆ. ಇದರಿಂದ ಸಿನಿಮಾ ರಿಲೀಸ್ ದಿನಾಂಕ ಕೂಡ ಮುಂದಕ್ಕೆ ತಳ್ಳಲ್ಪಡಲಿದೆ.
‘ಪುಷ್ಪ 2’ ಚಿತ್ರಕ್ಕೆ ಪ್ರೀ-ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿವೆ. ಆಗಸ್ಟ್ ಅಂತ್ಯಕ್ಕೆ ಈ ಮುಷ್ಕರ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಹೀಗಾಗಿ, ಸೆಪ್ಟೆಂಬರ್ನಿಂದ ಚಿತ್ರದ ಶೂಟಿಂಗ್ ಆರಂಭಗೊಳ್ಳಬಹುದು ಎನ್ನಲಾಗುತ್ತಿದೆ. 2023ರ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಸಿನಿಮಾ ರಿಲೀಸ್ ಮಾಡುವ ಆಲೋಚನೆಯಲ್ಲಿ ಚಿತ್ರತಂಡ ಇತ್ತು. ಆದರೆ, ಇದು ಸಾಧ್ಯವಾಗೋದು ಅನುಮಾನ ಎಂದೇ ಹೇಳಲಾಗುತ್ತಿದೆ.
‘ಪುಷ್ಪ’ ಚಿತ್ರದಲ್ಲಿ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಡಾಲಿ ಧನಂಜಯ, ಫಹಾದ್ ಫಾಸಿಲ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಸುಕುಮಾರ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ 300+ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಕಲೆಕ್ಷನ್ಅನ್ನು ಮೀರಿ ‘ಪುಷ್ಪ 2’ ಚಿತ್ರ ಗಳಿಕೆ ಮಾಡಲಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ‘ಪುಷ್ಪ’ ಸಂಗೀತ ನಿರ್ದೇಶಕನ ಹೊರಗಿಟ್ಟು ರವಿ ಬಸ್ರೂರ್ಗೆ ಅವಕಾಶ ನೀಡಿದ ಸಲ್ಮಾನ್ ಖಾನ್
‘ಪುಷ್ಪ 2’ ಚಿತ್ರದ ಹೈಪ್ ಹೆಚ್ಚಿದಂತೆ ಈ ಸಿನಿಮಾ ಬಗ್ಗೆ ಹುಟ್ಟಿಕೊಳ್ಳುತ್ತಿರುವ ವದಂತಿಗಳು ಕೂಡ ಹೆಚ್ಚುತ್ತಿದೆ. ಎರಡನೇ ಪಾರ್ಟ್ನಲ್ಲಿ ಕಲಾ ಬಳಗ ಮತ್ತಷ್ಟು ಹಿರಿದಾಗಲಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.