ಬಿಹಾರದಲ್ಲಿ ನಡೆಯಲಿದೆ ‘ಪುಷ್ಪ 2’ ಸಿನಿಮಾದ ಟ್ರೇಲರ್​ ಲಾಂಚ್; ಇದು ಮಾಸ್ಟರ್ ಪ್ಲ್ಯಾನ್

ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಆಗಿರುವ ‘ಪುಷ್ಪ 2’ ಸಿನಿಮಾದ ಪ್ರಚಾರ ಕಾರ್ಯ ಕೂಡ ಅಷ್ಟೇ ಅದ್ದೂರಿಯಾಗಿ ನಡೆಯುತ್ತಿದೆ. ಡಿಸೆಂಬರ್​ 5ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಅದ್ದಕ್ಕಾಗಿ ಚಿತ್ರತಂಡದವರು ಭರ್ಜರಿಯಾದ ಪ್ರಮೋಷನ್ ಪ್ಲ್ಯಾನ್ ಮಾಡಿದ್ದಾರೆ. ‘ಪುಷ್ಪ 2’ ಸಿನಿಮಾದ ಟ್ರೇಲರ್​ ಲಾಂಚ್ ಇವೆಂಟ್​ ನಡೆಸಲು ದೊಡ್ಡ ವೇದಿಕೆ ಸಿದ್ಧವಾಗುತ್ತಿದೆ.

ಬಿಹಾರದಲ್ಲಿ ನಡೆಯಲಿದೆ ‘ಪುಷ್ಪ 2’ ಸಿನಿಮಾದ ಟ್ರೇಲರ್​ ಲಾಂಚ್; ಇದು ಮಾಸ್ಟರ್ ಪ್ಲ್ಯಾನ್
ಅಲ್ಲು ಅರ್ಜುನ್
Follow us
ಮದನ್​ ಕುಮಾರ್​
|

Updated on: Nov 14, 2024 | 10:44 PM

‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ‘ಪುಷ್ಪ 2’ ಸಿನಿಮಾವನ್ನು ನಿರ್ಮಿಸಿದೆ. ಅದ್ದೂರಿತನಕ್ಕೆ ಹೆಸರಾಗಿರುವ ಈ ಸಂಸ್ಥೆ ಈಗ ‘ಪುಷ್ಪ 2’ ಚಿತ್ರದ ಪ್ರಚಾರವನ್ನು ಕೂಡ ತುಂಬ ಅದ್ದೂರಿಯಾಗಿ ಮಾಡುತ್ತಿದೆ. ಅಲ್ಲು ಅರ್ಜುನ್ ಅವರು ಮುಖ್ಯ ಭೂಮಿಕೆ ನಿಭಾಯಿಸಿರುವ ಈ ಸಿನಿಮಾದ ಮೇಲೆ ದೇಶಾದ್ಯಂತ ನಿರೀಕ್ಷೆ ಹೆಚ್ಚಾಗಿದೆ. ರಿಲೀಸ್ ದಿನಾಂಕ ಹತ್ತಿರ ಆದಂತೆಲ್ಲ ಪ್ರಚಾರದ ತೀವ್ರತೆ ಕೂಡ ಜಾಸ್ತಿ ಆಗುತ್ತಿದೆ. ಈಗ ಟ್ರೇಲರ್​ ನೋಡುವ ಸಮಯ ಬಂದಿದೆ. ಸುಮ್ಮನೆ ಸೋಶಿಯಲ್ ಮೀಡಿಯಾದಲ್ಲಿ ಟ್ರೇಲರ್​ ಬಿಡುಗಡೆ ಮಾಡುತ್ತಿಲ್ಲ. ಬದಲಿಗೆ, ಬಿಹಾರದ ಪಾಟ್ನಾದಲ್ಲಿ ಬೃಹತ್ ವೇದಿಕೆ ನಿರ್ಮಿಸಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ನವೆಂಬರ್​ 17ರಂದು ಟ್ರೇಲರ್ ಬಿಡುಗಡೆ ಆಗಲಿದೆ.

ಅಂದಹಾಗೆ, ‘ಪುಷ್ಪ 2’ ತಂಡದವರು ಟ್ರೇಲರ್​ ಬಿಡುಗಡೆ ಮಾಡಲು ಬಿಹಾರವನ್ನು ಆಯ್ಕೆ ಮಾಡಿದ್ದು ಒಂದು ಮಾಸ್ಟರ್ ಪ್ಲ್ಯಾನ್ ಎನ್ನಬಹುದು. ಯಾಕೆಂದರೆ, ದಕ್ಷಿಣ ಭಾರತದಲ್ಲಿ ಸಹಜವಾಗಿಯೇ ಈ ಚಿತ್ರಕ್ಕೆ ಉತ್ತಮ ಕಲೆಕ್ಷನ್ ಆಗಲಿದೆ. ಅದೇ ರೀತಿ ಉತ್ತರ ಭಾರತದಲ್ಲಿ ಕೂಡ ಈ ಸಿನಿಮಾಗೆ ಉತ್ತಮ ಕಲೆಕ್ಷನ್ ಆಗಬೇಕು ಎಂದರೆ ಅಲ್ಲಿ ಪ್ರಚಾರ ಚೆನ್ನಾಗಿ ಮಾಡಬೇಕು. ಆದ್ದರಿಂದ ಬಿಹಾರವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಇದು ತೆಲುಗು ಸಿನಿಮಾ ಆಗಿದ್ದರೂ ಕೂಡ ಬೇರೆ ಬೇರೆ ಭಾಷೆಗಳಿಗೆ ಡಬ್ ಆಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆ ಕಾಣುತ್ತಿದೆ. ಹಿಂದಿ ಮಾರುಕಟ್ಟೆ ಬಹಳ ದೊಡ್ಡದು. ಹಾಗಾಗಿ ಅಲ್ಲಿನ ಪ್ರೇಕ್ಷಕರನ್ನು ಸೆಳೆಯಬೇಕಿದೆ. ‘ಪುಷ್ಪ’ ಸಿನಿಮಾ ನೋಡಿ ಉತ್ತರ ಭಾರತದ ಪ್ರೇಕ್ಷಕರು ಇಷ್ಟಪಟ್ಟಿದ್ದರು. ಈಗ ‘ಪುಷ್ಪ 2’ ಕೂಡ ಅಲ್ಲಿ ಭರ್ಜರಿಯಾಗಿ ಕಲೆಕ್ಷನ್ ಮಾಡುವ ಸೂಚನೆ ಸಿಕ್ಕಿದೆ.

ಇದನ್ನೂ ಓದಿ: ‘ಪುಷ್ಪ 2’ ಸಿನಿಮಾ ಡಬ್ಬಿಂಗ್; ಹೊಸ ಅಪ್​ಡೇಟ್​ ನೀಡಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾದಿಂದ ದೊಡ್ಡ ಯಶಸ್ಸು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿ ಪ್ರಚಾರ ಶುರು ಮಾಡಿಕೊಂಡಿದ್ದಾರೆ. ತೆರೆ ಹಿಂದಿನ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಡಾಲಿ ಧನಂಜಯ್, ಫಹಾದ್ ಫಾಸಿಲ್ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಟ್ರೇಲರ್​ ಬಿಡುಗಡೆ ಆದ ಬಳಿಕ ಸಿನಿಮಾ ಮೇಲಿನ ಹೈಪ್ ಇನ್ನಷ್ಟು ಜಾಸ್ತಿ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್