ರಶ್ಮಿಕಾ ಮಂದಣ್ಣ ಖುಷಿಗೆ ಸಿಕ್ತು ಇನ್ನೊಂದು ಕಾರಣ; ‘ಕಿರಿಕ್​ ಬ್ಯೂಟಿ’ಯನ್ನು ಹಿಂಬಾಲಿಸ್ತಾರೆ 2.5 ಕೋಟಿ ಜನ

ರಶ್ಮಿಕಾ ಮಂದಣ್ಣ ಖುಷಿಗೆ ಸಿಕ್ತು ಇನ್ನೊಂದು ಕಾರಣ; ‘ಕಿರಿಕ್​ ಬ್ಯೂಟಿ’ಯನ್ನು ಹಿಂಬಾಲಿಸ್ತಾರೆ 2.5 ಕೋಟಿ ಜನ
ರಶ್ಮಿಕಾ ಮಂದಣ್ಣ

Rashmika Mandanna Instagram: ಇನ್​ಸ್ಟಾಗ್ರಾಮ್​ನಲ್ಲಿ 2.5 ಕೋಟಿ ಹಿಂಬಾಲಕರನ್ನು ಪಡೆದಿರುವುದಕ್ಕೆ ರಶ್ಮಿಕಾ ಮಂದಣ್ಣ ಅವರಿಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ. ‘ಪುಷ್ಪ’ ಸಿನಿಮಾದ ಗೆಲುವಿನ ಬೆನ್ನಲ್ಲೇ ಅವರಿಗೆ ಸಂಭ್ರಮಿಸಲು ಈ ಕಾರಣ ಕೂಡ ಸಿಕ್ಕಿದೆ.

TV9kannada Web Team

| Edited By: Madan Kumar

Dec 22, 2021 | 2:56 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ‘ಪುಷ್ಪ’ ಸಿನಿಮಾದ (Pushpa Movie) ಗೆಲುವಿನಲ್ಲಿ ತೇಲುತ್ತಿದ್ದಾರೆ. ಸದ್ಯಕ್ಕಂತೂ ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ದಿನದಿಂದ ದಿನಕ್ಕೆ ಅವರ ಜನಪ್ರಿಯತೆ ಹೆಚ್ಚುತ್ತಿದೆ. ಒಂದು ವರ್ಗದ ನೆಟ್ಟಿಗರು ಈ ಕೊಡಗಿನ ಕುವರಿಯನ್ನು ಯಾವಾಗಲೂ ಟ್ರೋಲ್​ ಮಾಡುತ್ತಾರೆ. ಯಾರು ಎಷ್ಟೇ ಟ್ರೋಲ್​ ಮಾಡಿದರೂ ಅವರ ಖ್ಯಾತಿ ಕಮ್ಮಿ ಆಗಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆ ಹೆಚ್ಚುತ್ತಿದೆ. ಈಗ ಇನ್​ಸ್ಟಾಗ್ರಾಮ್​ನಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ಬರೋಬ್ಬರಿ 25 ಮಿಲಿಯನ್​ಗಿಂತಲೂ (2.5 ಕೋಟಿ) ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ. ಇದು ಅವರ ಸಂತಸಕ್ಕೆ ಕಾರಣ ಆಗಿದೆ. ಅದಕ್ಕಾಗಿ ಅವರು ಕುಣಿದು ಕುಪ್ಪಳಿಸಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಸಖತ್​ ಆ್ಯಕ್ಟೀವ್​ ಆಗಿರುತ್ತಾರೆ. ಆ ಮೂಲಕ ಅವರು ತಮ್ಮ ಅಭಿಮಾನಿಗಳಿಗೆ ಅಪ್​ಡೇಟ್​ ನೀಡುತ್ತಾ ಇರುತ್ತಾರೆ. ಆಗಾಗ ಫ್ಯಾನ್ಸ್​ ಕೇಳುವ ಪ್ರಶ್ನೆಗಳಿಗೆ ಅವರು ಉತ್ತರ ನೀಡುತ್ತಾರೆ. ಈ ಎಲ್ಲ ಕಾರಣದಿಂದ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಿಂಬಾಲಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. 2.5 ಕೋಟಿ ಜನರು ರಶ್ಮಿಕಾ ಮಂದಣ್ಣ ಅವರನ್ನು ಈಗ ಫಾಲೋ ಮಾಡುತ್ತಿದ್ದಾರೆ. ಈ ಮೈಲಿಗಲ್ಲು ಮುಟ್ಟಿರುವುದಕ್ಕೆ ಅವರು ಸಿಕ್ಕಾಪಟ್ಟೆ ಖುಷಿ ಆಗಿದ್ದಾರೆ. ಕೇಕ್​ ಕತ್ತರಿಸಿ ಸಂಭ್ರಮಿಸಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ 2.5 ಕೋಟಿ ಹಿಂಬಾಲಕರನ್ನು ಪಡೆದಿರುವುದಕ್ಕೆ ರಶ್ಮಿಕಾ ಮಂದಣ್ಣ ಅವರಿಗೆ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ. ‘ಪುಷ್ಪ’ ಸಿನಿಮಾದ ಭರ್ಜರಿ ಗೆಲುವಿನ ಬೆನ್ನಲ್ಲೇ ಅವರಿಗೆ ಸಂಭ್ರಮಿಸಲು ಈ ಕಾರಣ ಕೂಡ ಸಿಕ್ಕಿದೆ. ರಶ್ಮಿಕಾ ಎಷ್ಟೇ ಸಾಧನೆ ಮಾಡಿದರೂ, ಅವರನ್ನು ಟ್ರೋಲ್​ ಮಾಡುವ ಒಂದು ವರ್ಗ ಇದ್ದೇ ಇದೆ. ಅವರು ಓವರ್​ ಆ್ಯಕ್ಟಿಂಗ್​ ಮಾಡುತ್ತಾರೆ ಎಂದು ಇತ್ತೀಚೆಗೆ ಹಿಗ್ಗಾಮುಗ್ಗಾ ಟ್ರೋಲ್​ ಮಾಡಲಾಗಿತ್ತು.

ಟ್ರೋಲ್​ ಆಗಿದ್ದ ರಶ್ಮಿಕಾ:

ಕೆಲವೇ ದಿನಗಳ ಹಿಂದೆ ‘ಪುಷ್ಪ’ ಸಿನಿಮಾದ ಪ್ರಚಾರದಲ್ಲಿ ಪಾಲ್ಗೊಂಡಿದ್ದ ವೇಳೆ ರಶ್ಮಿಕಾ ಅವರು ಹಿಂದಿಯಲ್ಲಿ ಮಾತನಾಡಿ ಜನರನ್ನು ಸೆಳೆಯುವ ಪ್ರಯತ್ನ ಮಾಡಿದ್ದರು. ಆ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಅದನ್ನು ಕಂಡವರು ನೆಗೆಟಿವ್ ಕಮೆಂಟ್​ ಮಾಡಿದ್ದಾರೆ. ‘ಇವರ ಅದೃಷ್ಟ ಚೆನ್ನಾಗಿತ್ತು. ಅದೇ ಕಾರಣಕ್ಕೆ ಗೀತಾ ಗೋವಿಂದಂ, ಡಿಯರ್​ ಕಾಮ್ರೇಡ್​ ರೀತಿಯ ಸಿನಿಮಾಗಳಲ್ಲಿ ಕೆಲಸ ಮಾಡುವ ಅವಕಾಶ ಸಿಕ್ತು. ಇವರು ಹೇಗೆ ನ್ಯಾಷನಲ್​ ಕ್ರಶ್​ ಆಗಲು ಸಾಧ್ಯ? ಇವರಿಗಿಂತ ಚೆನ್ನಾಗಿ ಬೇರೆ ನಟಿಯರು ಇದ್ದಾರೆ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ‘ರಶ್ಮಿಕಾ ಅವರದ್ದು ಬರೀ ಓವರ್​ ಆ್ಯಕ್ಟಿಂಗ್​’ ಎಂದು ಅನೇಕರು ಕಮೆಂಟ್​ಗಳ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಇವರು ಓವರ್​ ಆ್ಯಕ್ಟಿಂಗ್​ನ ನ್ಯಾಷನಲ್​ ಕ್ರಶ್​’ ಎಂದು ಒಬ್ಬರು ಹೇಳಿದ್ದರೆ, ‘ರಶ್ಮಿಕಾ ವರ್ತನೆ ಕಿರಿಕಿರಿ ಎನಿಸುತ್ತದೆ’ ಎಂದು ಮತ್ತೊಬ್ಬರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

‘ಈ ಲವ್​ ಅಪರಿಮಿತ’; ಫೋರ್ಬ್ಸ್​ ಪಟ್ಟಿಯಲ್ಲಿ ನಂ.1 ಆಗಿದ್ದಕ್ಕೆ ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ

ಮುಂಬೈನಲ್ಲಿ ಒಟ್ಟಾಗಿ ಡಿನ್ನರ್​ ಮಾಡಿದ ವಿಜಯ್​ ದೇವರಕೊಂಡ-ರಶ್ಮಿಕಾ; ಮತ್ತೆ ಹುಟ್ಟಿತು ಅನುಮಾನ

Follow us on

Related Stories

Most Read Stories

Click on your DTH Provider to Add TV9 Kannada