AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಾ ಕಿರಿಕಿರಿ ಮಾಡಿದ್ರೆ ರಶ್ಮಿಕಾ ಹೀಗೆ ಒದಿತಾರೆ; ವಿಡಿಯೋ ಸಮೇತ ವಿವರಿಸಿದ ನಟಿ

Rashmika Mandanna: ಸಿನಿಮಾಗಳಲ್ಲಿ ಗ್ಲಾಮರ್​ ಗೊಂಬೆಯಂತೆ ಕಾಣುವ ನಟಿ ರಶ್ಮಿಕಾ ಮಂದಣ್ಣ ಅವರು ಹೊಡೆದಾಟಕ್ಕೂ ಸೈ ಎಂಬ ರೀತಿಯಲ್ಲಿ ಸಜ್ಜಾಗುತ್ತಿದ್ದಾರೆ. ಅದಕ್ಕೆ ಈ ವಿಡಿಯೋ ಸಾಕ್ಷಿ ಒದಗಿಸುತ್ತಿದೆ.

ತುಂಬಾ ಕಿರಿಕಿರಿ ಮಾಡಿದ್ರೆ ರಶ್ಮಿಕಾ ಹೀಗೆ ಒದಿತಾರೆ; ವಿಡಿಯೋ ಸಮೇತ ವಿವರಿಸಿದ ನಟಿ
ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Oct 23, 2021 | 2:16 PM

Share

ಬಹುಬೇಡಿಕೆಯ ನಟಿಯರ ಸಾಲಿನಲ್ಲಿ ರಶ್ಮಿಕಾ ಮಂದಣ್ಣ ಹೆಸರು ಮುಂಚೂಣಿಯಲ್ಲಿದೆ. ತಮಿಳು, ತೆಲುಗು, ಹಿಂದಿ ಭಾಷೆಯ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ತಾವು ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ತಮ್ಮ ಅಭಿಮಾನಿಗಳಿಗಾಗಿ ಸೋಶಿಯಲ್​ ಮೀಡಿಯಾ ಮೂಲಕ ಏನಾದರೂ ಅಪ್​ಡೇಟ್​ ನೀಡುವಲ್ಲಿ ರಶ್ಮಿಕಾ ಮಂದಣ್ಣ ಹಿಂದೆ ಬೀಳುವುದಿಲ್ಲ. ಈಗ ಅವರೊಂದು ಹೊಸ ವೀಡಿಯೋ ಹಂಚಿಕೊಂಡಿದ್ದಾರೆ. ಭರ್ಜರಿ ಆ್ಯಕ್ಷನ್​ ಸನ್ನಿವೇಶಕ್ಕಾಗಿ ತರಬೇತಿ ಪಡೆಯುತ್ತಿರುವ ದೃಶ್ಯ ಇದರಲ್ಲಿದೆ. ಆದರೆ ಅದಕ್ಕೆ ಈ ಕೊಡಗಿನ ಕುವರಿ ನೀಡಿರುವ ಕ್ಯಾಪ್ಷನ್​ ಎಲ್ಲರ ಗಮನ ಸೆಳೆಯುತ್ತಿದೆ.

ಈ ವಿಡಿಯೋದಲ್ಲಿ ಪಂಚಿಂಗ್​ ಬ್ಯಾಗ್​ಗೆ ರಶ್ಮಿಕಾ ಮಂದಣ್ಣ ಜಾಡಿಸಿ ಒದೆಯುತ್ತಿದ್ದಾರೆ. ಗಂಟೆಗಟ್ಟಲೆ ತರಬೇತಿ ಪಡೆಯುತ್ತ ಬೆವರು ಹರಿಸುತ್ತಿರುವುದಕ್ಕೆ ಈ ವಿಡಿಯೋ ಸಾಕ್ಷಿ ಒದಗಿಸುತ್ತಿದೆ. ‘ನನಗೆ ತುಂಬ ಕಿರಿಕಿರಿ ಆದಾದ ನಾನು ಹೀಗೆ ಮಾಡುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ. ಇದೇ ಪೋಸ್ಟ್​ ಅನ್ನು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲೂ ಹಂಚಿಕೊಂಡು, ‘ಎಲ್ಲ ನೆಗೆಟಿವ್​ ವಿಚಾರಗಳಿಗೆ ಹೀಗೆ ಒದೆಯಬೇಕು’ ಎಂದು ಅವರು ಬರೆದುಕೊಂಡಿದ್ದಾರೆ.

ರಶ್ಮಿಕಾ ಪಡೆಯುತ್ತಿರುವ ಕಠಿಣ ಟ್ರೇನಿಂಗ್​ ಕಂಡು ಅಭಿಮಾನಿಗಳು ಹುಬ್ಬೇರಿಸಿದ್ದಾರೆ. ಗ್ಲಾಮರ್​ ಗೊಂಬೆಯಂತೆ ಕಾಣುವ ಅವರು ಹೊಡೆದಾಟಕ್ಕೂ ಸೈ ಎಂಬ ರೀತಿಯಲ್ಲಿ ಸಜ್ಜಾಗುತ್ತಿದ್ದಾರೆ. ‘ಈ ವಿಡಿಯೋ ನೋಡಿದ ಬಳಿಕ ಯಾವುದೇ ನಿರ್ದೇಶಕರು ನಿಮ್ಮಿಂದ ರೀ-ಟೇಕ್​ ಬೇಕು ಅಂತ ಕೇಳುವುದೇ ಇಲ್ಲ’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಯಾವ ಚಿತ್ರಕ್ಕಾಗಿ ಈ ತಯಾರಿ ನಡೆಯುತ್ತಿದೆ ಎಂಬುದನ್ನು ರಶ್ಮಿಕಾ ಬಿಟ್ಟುಕೊಟ್ಟಿಲ್ಲ.

ರಶ್ಮಿಕಾ ನಟಿಸಿರುವ ‘ಪುಷ್ಪ’ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಡಿ.17ರಂದು ಈ ಸಿನಿಮಾ ಅದ್ದೂರಿಯಾಗಿ ತೆರೆಕಾಣಲಿದೆ. ಈ ಚಿತ್ರದಲ್ಲಿ ಶ್ರೀವಲ್ಲಿ ಎಂಬ ಪಾತ್ರಕ್ಕೆ ಅವರು ಬಣ್ಣ ಹಚ್ಚಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ ಮತ್ತು ಹಾಡಿನ ಮೂಲಕ ಅವರ ಪಾತ್ರದ ಬಗ್ಗೆ ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿದೆ. ಅಲ್ಲು ಅರ್ಜುನ್​ಗೆ ಜೋಡಿಯಾಗಿ ರಶ್ಮಿಕಾ ನಟಿಸಿದ್ದು, ಈ ಸಿನಿಮಾದಿಂದ ಅವರಿಗೆ ಭರ್ಜರಿ ಗೆಲುವು ಸಿಗುವ ಸಾಧ್ಯತೆ ಇದೆ. ಇದಲ್ಲದೇ, ಬಾಲಿವುಡ್​ನಲ್ಲಿಯೂ ರಶ್ಮಿಕಾ ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಸದ್ಯ ‘ಮಿಷನ್​ ಮಜ್ನು’ ಮತ್ತು ‘ಗುಡ್​ಬೈ’ ಚಿತ್ರಗಳು ಅವರ ಕೈಯಲ್ಲಿವೆ.

ಇದನ್ನೂ ಓದಿ:

ಯಶ್​, ಪ್ರಭಾಸ್​, ಸಮಂತಾರನ್ನೂ ಹಿಂದಿಕ್ಕಿ ರಶ್ಮಿಕಾ ನಂ.1, ದೇವರಕೊಂಡ ನಂ.2: ಇಲ್ಲಿದೆ ಫೋರ್ಬ್ಸ್​ ಪಟ್ಟಿ

Rashmika Mandanna: ಒಂದೇ ಒಂದು ಮಾತಿನಿಂದ ಟ್ರೋಲಿಗನ ಕಮೆಂಟ್​ ಡಿಲೀಟ್​ ಮಾಡಿಸಿದ ರಶ್ಮಿಕಾ; ಅದರಲ್ಲಿ ಅಂಥದ್ದೇನಿತ್ತು?

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ