AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡೋಕೆ ಏನೂ ಕೆಲಸ ಇಲ್ಲದಿದ್ದರೆ ರಶ್ಮಿಕಾ ಮಂದಣ್ಣ ಏನು ಮಾಡ್ತಾರೆ? ಫೋಟೋ ಸಹಿತ ಸಿಕ್ತು ಉತ್ತರ

ರಶ್ಮಿಕಾ ಮಂದಣ್ಣ ಸದ್ಯ ಬಹುಭಾಷಾ ನಟಿ. ಸದಾ ಕಾಲ ಶೂಟಿಂಗ್​, ಡಬ್ಬಿಂಗ್​ನಲ್ಲಿ ಅವರು ತೊಡಗಿಕೊಂಡಿರುತ್ತಾರೆ. ಒಂದು ವೇಳೆ ಶೂಟಿಂಗ್​ ನಡುವೆ ಬಿಡುವು ಸಿಕ್ಕರೆ, ತಮಗಿಷ್ಟವಾಗುವ ಚಟುವಟಿಕೆಯಲ್ಲಿ ಮಗ್ನರಾಗುತ್ತಾರೆ. ಏನದು?

ಮಾಡೋಕೆ ಏನೂ ಕೆಲಸ ಇಲ್ಲದಿದ್ದರೆ ರಶ್ಮಿಕಾ ಮಂದಣ್ಣ ಏನು ಮಾಡ್ತಾರೆ? ಫೋಟೋ ಸಹಿತ ಸಿಕ್ತು ಉತ್ತರ
ರಶ್ಮಿಕಾ ಮಂದಣ್ಣ
TV9 Web
| Updated By: ಮದನ್​ ಕುಮಾರ್​|

Updated on: Aug 17, 2021 | 8:04 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ಕೈ ತುಂಬ ಆಫರ್​ ಇಟ್ಟುಕೊಂಡಿದ್ದಾರೆ. ಅವರ ಕಾಲ್​ಶೀಟ್​ಗಾಗಿ ನಿರ್ಮಾಪಕರು-ನಿರ್ದೇಶಕರು ಸಾಲುಗಟ್ಟಿ ನಿಂತಿದ್ದಾರೆ. ದೊಡ್ಡ ದೊಡ್ಡ ಸ್ಟಾರ್​ ನಟರ ಸಿನಿಮಾಗಳಿಗೆಲ್ಲ ಈ ಕೊಡಗಿನ ಕುವರಿಯೇ ನಾಯಕಿಯಾಗಬೇಕು ಎಂಬಷ್ಟು ಬೇಡಿಕೆ ನಿರ್ಮಾಣ ಆಗಿದೆ. ಇಷ್ಟೆಲ್ಲ ಬ್ಯುಸಿ ಆಗಿರುವ ರಶ್ಮಿಕಾ ಮಂದಣ್ಣ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಸದಾ ಕಾಲ ಸೋಶಿಯಲ್​ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ಏನಾದರೊಂದು ಪೋಸ್ಟ್​ ಮಾಡುತ್ತ ಫ್ಯಾನ್ಸ್​ಗೆ ಖುಷಿ ನೀಡುತ್ತಾರೆ. ಇತ್ತೀಚೆಗೆ ಅವರೊಂದು ಫೋಟೋ ಹಂಚಿಕೊಂಡು ಗಮನ ಸೆಳೆದರು.

ರಶ್ಮಿಕಾ ಸದ್ಯ ಬಹುಭಾಷಾ ನಟಿ. ಸದಾ ಕಾಲ ಶೂಟಿಂಗ್​, ಡಬ್ಬಿಂಗ್​ನಲ್ಲಿ ಅವರು ತೊಡಗಿಕೊಂಡಿರುತ್ತಾರೆ. ಒಂದು ವೇಳೆ ಶೂಟಿಂಗ್​ ನಡುವೆ ಬಿಡುವು ಸಿಕ್ಕರೆ, ತಮಗಿಷ್ಟವಾಗುವ ಚಟುವಟಿಕೆಗಳಲ್ಲಿ ಮಗ್ನರಾಗುತ್ತಾರೆ. ಆ ಬಗ್ಗೆ ಅಭಿಮಾನಿಗಳಿಗೆ ತಿಳಿಸುವ ಸಲುವಾಗಿಯೇ ಅವರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದಕ್ಕೆ ಅವರು ನೀಡಿರುವ ಕ್ಯಾಪ್ಷನ್​ ಹೆಚ್ಚು ಹೈಲೈಟ್​ ಆಗಿದೆ. ‘ಶೂಟಿಂಗ್​ ಬಿಡುವಿನಲ್ಲಿ ನನಗೆ ಕೆಲಸ ಇಲ್ಲದೆ ಇರುವಾಗ ನಾನು ಇದನ್ನೇ ಮಾಡೋದು’ ಎಂದು ಬರೆದುಕೊಂಡಿದ್ದಾರೆ.

ಅಷ್ಟಕ್ಕೂ ರಶ್ಮಿಕಾ ಮಾಡಿದ್ದೇನೆ? ಒಂದು ಮಲ್ಲಿಗೆ ಹೂವಿನ ಹಾರವನ್ನು ತಲೆ ಮೇಲೆ ಇಟ್ಟುಕೊಂಡು ಸಂಭ್ರಮಿಸಿದ್ದಾರೆ. ಬಗೆಬಗೆಯ ರೀತಿಯಲ್ಲಿ ಪೋಸ್​ ನೀಡುತ್ತ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಅವುಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಅಪ್​ಲೋಡ್​ ಮಾಡಿ, ‘ಇವುಗಳಲ್ಲಿ ನಿಮಗೆ ಯಾವುದು ಇಷ್ಟ ಅಂತ ಆಯ್ಕೆ ಮಾಡಿ’ ಎಂದು ಅಭಿಮಾನಿಗಳಿಗೆ ಟಾಸ್ಕ್​ ನೀಡಿದ್ದಾರೆ. ಕೆಲವೇ ಗಂಟೆಗಳಲ್ಲಿ 22 ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋಗಳನ್ನು ಲೈಕ್​ ಮಾಡಿದ್ದಾರೆ. 25 ಸಾವಿರಕ್ಕೂ ಹೆಚ್ಚು ಕಮೆಂಟ್​ಗಳು ಬಂದಿವೆ.

ಇನ್​ಸ್ಟಾಗ್ರಾಮ್​ನಲ್ಲಿ ರಶ್ಮಿಕಾ ಇತ್ತೀಚೆಗೆ 20 ಮಿಲಿಯನ್​ (2 ಕೋಟಿ) ಫಾಲೋವರ್ಸ್​ ಗಳಿಸಿದ್ದಾರೆ. ಆ ಖುಷಿಯನ್ನು ಅವರು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು. ತಮ್ಮ ಬದುಕಿನ 20 ಬಹುಮುಖ್ಯ ಘಟನೆಗಳ ಬಗ್ಗೆ ಮಾಹಿತಿ ತಿಳಿಸಿದ್ದರು. ಕಾಜಲ್​ ಅಗರ್​ವಾಲ್​ ಅವರಿಗೆ 1.93 ಕೋಟಿ ಫಾಲೋವರ್ಸ್​ ಇದ್ದಾರೆ. ಸಮಂತಾ ಅಕ್ಕಿನೇನಿ ಅವರನ್ನು 1.8 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ. ಕಿಯಾರಾ ಅಡ್ವಾಣಿ 1.83 ಕೋಟಿ ಹಾಗೂ ರಾಕುಲ್​ ಪ್ರೀತ್​ ಸಿಂಗ್​ ಅವರು 1.73 ಕೋಟಿ ಫಾಲೋವರ್ಸ್​ ಹೊಂದಿದ್ದಾರೆ. ಅವರೆಲ್ಲರನ್ನೂ ಮೀರಿಸಿದ ರಶ್ಮಿಕಾ ಮಂದಣ್ಣ ಬರೋಬ್ಬರಿ 2 ಕೋಟಿ ಫಾಲೋವರ್ಸ್​ ಗಳಿಸಿಕೊಂಡಿದ್ದಾರೆ.

ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ನಟಿಸಿರುವ ‘ಪುಷ್ಪ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ವರ್ಷ ಡಿಸೆಂಬರ್​ನಲ್ಲಿ ಆ ಚಿತ್ರ ತೆರೆಕಂಡ ಬಳಿಕ ಅವರ ಹವಾ ಇನ್ನಷ್ಟು ಹೆಚ್ಚುವುದು ಗ್ಯಾರಂಟಿ. ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ ಬೈ’ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಸ್ಟಾರ್​ ನಟ ಸಿದ್ಧಾರ್ಥ್​ ಮಲ್ಹೋತ್ರಾ ಅಭಿನಯಿಸುತ್ತಿರುವ ‘ಮಿಷನ್​ ಮಜ್ನು’ ಚಿತ್ರಕ್ಕೂ ಅವರು ನಾಯಕಿ. ಇನ್ನೂ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ಇದನ್ನೂ ಓದಿ:

Rashmika Mandanna: ‘ಈಗ ನಾನು ಕಲ್ಲಾಗಿದ್ದೇನೆ’; ಟ್ರೋಲ್​ ಮಾಡುವವರಿಗೆ ತಿರುಗೇಟು ಕೊಟ್ಟ ನಟಿ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಬಗ್ಗೆ ಅಪ್ಸೆಟ್​ ಆದ ಕುಟುಂಬದವರು; ಸಂದರ್ಶನದಲ್ಲಿ ಅಳಲು ತೋಡಿಕೊಂಡ ನಟಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!