AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಲವ್​ ಅಪರಿಮಿತ’; ಫೋರ್ಬ್ಸ್​ ಪಟ್ಟಿಯಲ್ಲಿ ನಂ.1 ಆಗಿದ್ದಕ್ಕೆ ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ

Rashmika Mandanna: ಕನ್ನಡದ ಕಿರಿಕ್​ ಪಾರ್ಟಿ ಸಿನಿಮಾದಲ್ಲಿ ನಟಿಸಿದ ಬಳಿಕ ರಶ್ಮಿಕಾ ಮಂದಣ್ಣ ಅವರು ಹಿಂದಿರುಗಿ ನೋಡಿಲ್ಲ. ಪ್ರತಿ ಚಿತ್ರದಲ್ಲಿಯೂ ಅವರ ಚಾರ್ಮ್​ ಹೆಚ್ಚುತ್ತಿದೆ. ಈಗ ಅವರು ಬಾಲಿವುಡ್​ ಬಾಗಿಲು ತಟ್ಟಿದ್ದಾರೆ.

‘ಈ ಲವ್​ ಅಪರಿಮಿತ’; ಫೋರ್ಬ್ಸ್​ ಪಟ್ಟಿಯಲ್ಲಿ ನಂ.1 ಆಗಿದ್ದಕ್ಕೆ ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ
ರಶ್ಮಿಕಾ ಮಂದಣ್ಣ
TV9 Web
| Edited By: |

Updated on:Dec 17, 2021 | 2:16 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರಿಗೆ ಒಳ್ಳೊಳ್ಳೆಯ ಅವಕಾಶಗಳು ಸಿಗುತ್ತಿವೆ. ಭಾಷೆಯ ಗಡಿ ಮೀರಿ ಅವರು ಬೆಳೆದಿದ್ದಾರೆ. ದಕ್ಷಿಣ ಭಾರತದಲ್ಲಿ ಮಿಂಚಿದ ಬಳಿಕ ಅವರು ಬಾಲಿವುಡ್​ನಲ್ಲೂ ಸ್ಟಾರ್​ ಕಲಾವಿದರ ಜತೆ ತೆರೆಹಂಚಿಕೊಳ್ಳುವ ಚಾನ್ಸ್​ ಪಡೆದುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲೂ ಅವರ ಹವಾ ಹೆಚ್ಚಿದೆ. ಸಿನಿಮಾ ಮಾತ್ರವಲ್ಲದೇ ಜಾಹೀರಾತು ಕ್ಷೇತ್ರದಿಂದ ಕೂಡ ರಶ್ಮಿಕಾ ಮಂದಣ್ಣ ಅವರು ಕೋಟ್ಯಂತರ ರೂಪಾಯಿ ಹಣ ಗಳಿಸುತ್ತಾರೆ. ಹಾಗಾಗಿ ಫೋರ್ಬ್ಸ್​ ಪಟ್ಟಿಯಲ್ಲಿ (Forbes List) ಸ್ಥಾನ ಪಡೆದ ದಕ್ಷಿಣ ಭಾರತದ ಸೆಲೆಬ್ರಿಟಿಗಳು ಪೈಕಿ ರಶ್ಮಿಕಾ ಕೂಡ ಗಮನ ಸೆಳೆದಿದ್ದರು. ಈ ವರ್ಷ ದಕ್ಷಿಣ ಭಾರತದ ಅತಿ ಹೆಚ್ಚು ಪ್ರಭಾವಿ ಸೆಲೆಬ್ರಿಟಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ರಶ್ಮಿಕಾ ನಂ.1 ಆಗಿದ್ದರು. ಆ ಬಗ್ಗೆ ಅವರೀಗ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

‘ಜನರಿಂದ ಸಿಗುತ್ತಿರುವ ಪ್ರೀತಿಗೆ ಧನ್ಯವಾದಗಳು. ಇದಕ್ಕಾಗಿಯೇ ನಾನು ಕೆಲಸ ಮಾಡುತ್ತಿರುವುದು. ಈ ಲವ್​ ಅಪರಿಮಿತವಾದದ್ದು. ವಿನಮ್ರವಾಗಿ ಇರಲು ಪ್ರಯತ್ನಿಸುತ್ತಿದ್ದೇನೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ. ಕನ್ನಡದ ‘ಕಿರಿಕ್​ ಪಾರ್ಟಿ’ ಸಿನಿಮಾದಲ್ಲಿ ನಟಿಸಿದ ಬಳಿಕ ಅವರು ಹಿಂದಿರುಗಿ ನೋಡಿಲ್ಲ. ಪ್ರತಿ ಚಿತ್ರದಲ್ಲಿಯೂ ಅವರ ಚಾರ್ಮ್​ ಹೆಚ್ಚುತ್ತಿದೆ. ಈಗ ಅವರು ಬಾಲಿವುಡ್​ ಬಾಗಿಲು ತಟ್ಟಿದ್ದಾರೆ.

ಸಿದ್ದಾರ್ಥ್​ ಮಲ್ಹೋತ್ರ ಜತೆ ರಶ್ಮಿಕಾ ಮಂದಣ್ಣ ನಟಿಸಿದ ‘ಮಿಷನ್​ ಮಜ್ನು’ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇದೆ. ಅಮಿತಾಭ್​ ಬಚ್ಚನ್​ ಜತೆ ಅವರು ‘ಗುಡ್​ಬೈ’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ನಡುವೆ ಅಲ್ಲು ಅರ್ಜುನ್​ ಜತೆ ರಶ್ಮಿಕಾ ನಟಿಸಿದ ‘ಪುಷ್ಪ’ ಸಿನಿಮಾ ಹಿಂದಿ ಭಾಷೆಗೂ ಡಬ್​ ಆಗಿ ಧೂಳೆಬ್ಬಿಸುತ್ತಿದೆ.

ಕರ್ನಾಟಕದಲ್ಲೂ ‘ಪುಷ್ಪ’ ಚಿತ್ರ ಗ್ರ್ಯಾಂಡ್​ ಆಗಿ ರಿಲೀಸ್​ ಆಗಿದೆ. ಆದರೆ ಕನ್ನಡ ಅವತರಣಿಕೆಯನ್ನು ಕಡೆಗಣಿಸಲಾಗಿದೆ. ಬೆಂಗಳೂರಿನಲ್ಲಿ ಮೊದಲ ದಿನ ತೆಲುಗು ವರ್ಷನ್​ಗೆ 670ಕ್ಕೂ ಅಧಿಕ ಶೋ ಸಿಕ್ಕಿದೆ. ಕನ್ನಡದಲ್ಲಿ ಕೇವಲ ಮೂರು ಶೋ ನಿಗದಿ ಆಗಿತ್ತು. ಕೊನೇ ಗಳಿಗೆಯಲ್ಲೂ ಅದನ್ನೂ ಕ್ಯಾನ್ಸಲ್​ ಮಾಡಿ ತೆಲುಗು ವರ್ಷನ್​ ಪ್ರದರ್ಶನ ಮಾಡಲಾಗಿದೆ. ಕನ್ನಡ ಅವತರಣಿಕೆ ಪ್ರದರ್ಶನ ಮಾಡಿ ಎಂದು ಕೇಳಿದ ಪ್ರೇಕ್ಷಕರ ಮೇಲೆ ಚಿತ್ರಮಂದಿರದವರು ಅವಾಜ್​ ಹಾಕಿದ ಘಟನೆಯೂ ನಡೆದಿದೆ. ಈ ಕ್ರಮದ ವಿರುದ್ಧ ಸೋಶಿಯಲ್​ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ:

Pushpa Twitter Review: ಅಲ್ಲು ಅರ್ಜುನ್​, ರಶ್ಮಿಕಾ ಚಿತ್ರ ಹಲವರಿಗೆ ಇಷ್ಟವಾಯ್ತು, ಕೆಲವರಿಗೆ ಕಷ್ಟವಾಯ್ತು

Rashmika Mandanna: ‘ಪುಷ್ಪ’ ಚಿತ್ರಕ್ಕೆ ಕನ್ನಡದಲ್ಲಿ ಡಬ್​ ಮಾಡೋಕೆ ಟೈಮ್​ ಇರಲಿಲ್ಲ; ರಶ್ಮಿಕಾ ಮಂದಣ್ಣ

Published On - 2:10 pm, Fri, 17 December 21

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?