ವಿಜಯ್​ ದೇವರಕೊಂಡ ಭೇಟಿ ಮಾಡಲು ಅಮೆರಿಕದ ವಿಮಾನ ಹತ್ತಿದ್ರಾ ನಟಿ ರಶ್ಮಿಕಾ ಮಂದಣ್ಣ?

Rashmika Mandanna: ಭಾರತದಿಂದ ಹೊರಡುವುದಕ್ಕೂ ಮುನ್ನ ರಶ್ಮಿಕಾ ಮಂದಣ್ಣ ಅವರು ವಿಮಾನದಲ್ಲಿ ಕುಳಿತು ಸೆಲ್ಫಿ ಪೋಸ್ಟ್​ ಮಾಡಿಕೊಂಡಿದ್ದರು. ಅಮೆರಿಕಕ್ಕೆ ಹೋಗಿ ಅಲ್ಲಿ ವಿಜಯ್​ ದೇವರಕೊಂಡ ಮತ್ತು ‘ಲೈಗರ್​’ ತಂಡವನ್ನು ಅವರು ಭೇಟಿ ಮಾಡಿದ್ದಾರೆ ಎಂಬ ಗಾಸಿಪ್​ ಹಬ್ಬಿದೆ.

ವಿಜಯ್​ ದೇವರಕೊಂಡ ಭೇಟಿ ಮಾಡಲು ಅಮೆರಿಕದ ವಿಮಾನ ಹತ್ತಿದ್ರಾ ನಟಿ ರಶ್ಮಿಕಾ ಮಂದಣ್ಣ?
ವಿಜಯ್​ ದೇವರಕೊಂಡ, ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on: Nov 26, 2021 | 9:03 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕೈಯಲ್ಲಿ ಹಲವು ಸಿನಿಮಾಗಳಿವೆ. ಅಲ್ಲು ಅರ್ಜುನ್​ ಜೊತೆ ನಟಿಸಿರುವ ‘ಪುಷ್ಪ’ ಚಿತ್ರ (Pushpa Movie) ಡಿಸೆಂಬರ್​ 17ರಂದು ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಅವರು ಶ್ರೀವಲ್ಲಿ ಎಂಬ ಪಾತ್ರ ಮಾಡಿದ್ದಾರೆ. ಇತ್ತೀಚೆಗೆ ಶ್ರೀವಲ್ಲಿ ಪಾತ್ರದ ಪೋಸ್ಟರ್​ ಮತ್ತು ಸಾಂಗ್​ ಬಿಡುಗಡೆ ಆಗಿತ್ತು. ‘ಪುಷ್ಪ’ ಚಿತ್ರದಿಂದ ರಶ್ಮಿಕಾ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್​ ಸಿಗುವ ನಿರೀಕ್ಷೆ ಇದೆ. ಅತ್ತ ಬಾಲಿವುಡ್​ನಲ್ಲಿ ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ಬೈ’ ಹಾಗೂ ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ‘ಮಿಷನ್​ ಮಜ್ನು’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಇಷ್ಟೆಲ್ಲ ಕೆಲಸಗಳ ನಡುವೆ ಅವರು ಈಗ ಏಕಾಏಕಿ ಅಮೆರಿಕಕ್ಕೆ ತೆರಳಿದ್ದಾರೆ. ಅವರು ಅಲ್ಲಿಗೆ ಹೋಗಿರುವುದು ವಿಜಯ್​ ದೇವರಕೊಂಡ (Vijay Deverakonda) ಭೇಟಿ ಮಾಡುವ ಉದ್ದೇಶದಿಂದ ಎಂಬ ಸುದ್ದಿ ಹರಡಿದೆ. ಅಮೆರಿಕದಲ್ಲಿ ವಿಜಯ್​ ದೇವರಕೊಂಡ ‘ಲೈಗರ್​’ ಸಿನಿಮಾ (Liger Movie) ಶೂಟಿಂಗ್​ ಮಾಡುತ್ತಿದ್ದು, ಅವರನ್ನು ಭೇಟಿ ಮಾಡಲು ರಶ್ಮಿಕಾ ತೆರಳಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ.

ಸದ್ಯ ಹರಿದಾಡುತ್ತಿರುವ ಗಾಸಿಪ್​ ಬಗ್ಗೆ ರಶ್ಮಿಕಾ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಭಾರತದಿಂದ ಹೊರಡುವುದಕ್ಕೂ ಮುನ್ನ ಅವರು ವಿಮಾನದಲ್ಲಿ ಕುಳಿತು ಸೆಲ್ಫಿ ಪೋಸ್ಟ್​ ಮಾಡಿಕೊಂಡಿದ್ದರು. ನಂತರ ಪ್ಯಾರಿಸ್​ಗೆ ತೆರಳಿ ಅಲ್ಲಿನ ಕೆಲವು ಫೋಟೋಗಳನ್ನು ಹಂಚಿಕೊಂಡರು. ಆ ಬಳಿಕ ರಶ್ಮಿಕಾ ಅಮೆರಿಕಕ್ಕೆ ಹೋಗಿ ಅಲ್ಲಿ ವಿಜಯ್​ ದೇವರಕೊಂಡ ಮತ್ತು ‘ಲೈಗರ್​’ ತಂಡವನ್ನು ಭೇಟಿ ಮಾಡಿದ್ದಾರೆ ಎಂಬ ಗಾಸಿಪ್​ ಹಬ್ಬಿದೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್​ ದೇವರಕೊಂಡ ನಡುವೆ ಎಂಥ ಆಪ್ತತೆ ಇದೆ ಎಂಬುದನ್ನು ಹೊಸದಾಗಿ ಹೇಳಬೇಕಾದ ಅನಿವಾರ್ಯತೆ ಇಲ್ಲ. ‘ಗೀತಾ ಗೋವಿಂದಂ’ ಮತ್ತು ‘ಡಿಯರ್​ ಕಾಮ್ರೇಡ್’ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ ಬಳಿಕ ಇಬ್ಬರ ನಡುವಿನ ಒಡನಾಟ ಜೋರಾಯಿತು. ಚಿತ್ರರಂಗದಲ್ಲಿ ಒಬ್ಬರಿಗೊಬ್ಬರು ಪರಸ್ಪರ ಪ್ರೋತ್ಸಾಹ ನೀಡುತ್ತಾ ಅವರು ಮುಂದುವರಿಯುತ್ತಿದ್ದಾರೆ. ಇಬ್ಬರಿಗೂ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ.

ಸಿನಿಮಾ ಮಾತ್ರವಲ್ಲದೇ ಜಾಹೀರಾತು ಕ್ಷೇತ್ರದಲ್ಲಿ ಡಿಮ್ಯಾಂಡ್​ ಹೆಚ್ಚಿದೆ. ಜಾಗತಿಕ ಮಟ್ಟದಲ್ಲಿ ಖ್ಯಾತಿ ಹೊಂದಿರುವ ಜನಪ್ರಿಯ ಬ್ರ್ಯಾಂಡ್​ಗಳಿಗೆ ರಶ್ಮಿಕಾ ಮಂದಣ್ಣ ರಾಯಭಾರಿ ಆಗುತ್ತಿದ್ದಾರೆ. ಅವುಗಳ ಜಾಹೀರಾತಿನಲ್ಲಿ ಕೊಡಗಿನ ಕುವರಿ ಮಿಂಚುತ್ತಿದ್ದಾರೆ. ರಶ್ಮಿಕಾ ಹೆಸರಿಗೆ ಈಗ ದೊಡ್ಡ ತೂಕ ಇದೆ. ಅದನ್ನು ಬಳಸಿಕೊಂಡು ಮಾರ್ಕೆಟಿಂಗ್​ ಮಾಡಲು ಕೆಲವು ಕಂಪನಿಗಳು ಮುಂದೆಬಂದಿವೆ. ಇತ್ತೀಚೆಗೆ ‘ಮ್ಯಾಕ್​ ಡೊನಾಲ್ಡ್ಸ್​’ ಕಂಪನಿ ಒಂದು ವಿಶೇಷ ಪ್ರಯೋಗ ಮಾಡಿದೆ. ರಶ್ಮಿಕಾ ಮಂದಣ್ಣ ಹೆಸರಿನಲ್ಲಿಯೇ ಊಟವನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಅದಕ್ಕೆ ‘ದಿ ರಶ್ಮಿಕಾ ಮೀಲ್​’ ಎಂದು ಹೆಸರು ಇಡಲಾಗಿದೆ.

ಇದನ್ನೂ ಓದಿ:

ತಮಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಡೇಟಿಂಗ್​ ಮಾಡುವ ಬಗ್ಗೆ ರಶ್ಮಿಕಾ ಮಂದಣ್ಣ ಹೇಳೋದೇನು?

ಖ್ಯಾತ ನಿರ್ದೇಶಕನ ಕಚೇರಿ ಮುಂದೆ ಕಾಣಿಸಿಕೊಂಡ ರಶ್ಮಿಕಾ; ಬಾಲಿವುಡ್​ನಲ್ಲಿ 3ನೇ ಚಿತ್ರ ಯಾರ ಜೊತೆ?

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ