AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಡೇಟಿಂಗ್​ ಮಾಡುವ ಬಗ್ಗೆ ರಶ್ಮಿಕಾ ಮಂದಣ್ಣ ಹೇಳೋದೇನು?

Rashmika Mandanna: ರಶ್ಮಿಕಾ ಮಂದಣ್ಣ ಅವರಿಗೆ ಈಗ 25 ವರ್ಷ ವಯಸ್ಸು. ತಮಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಡೇಟಿಂಗ್​ ಮಾಡುವ ಬಗ್ಗೆ ಅವರ ಅಭಿಪ್ರಾಯ ಏನು ಎಂದು ಇತ್ತೀಚೆಗೆ ಪ್ರಶ್ನೆ ಎದುರಾಯಿತು.

ತಮಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಡೇಟಿಂಗ್​ ಮಾಡುವ ಬಗ್ಗೆ ರಶ್ಮಿಕಾ ಮಂದಣ್ಣ ಹೇಳೋದೇನು?
ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Nov 12, 2021 | 9:20 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಈಗ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗದಲ್ಲೂ ಸ್ಟಾರ್​ ನಟರ ಸಿನಿಮಾಗಳಿಗೆ ಅವರೇ ನಾಯಕಿ ಆಗಬೇಕು ಎಂದು ನಿರ್ಮಾಪಕರು ಬೇಡಿಕೆ ಇಡುತ್ತಿದ್ದಾರೆ. ತೆಲುಗು, ತಮಿಳು ಮಾತ್ರವಲ್ಲದೇ ಹಿಂದಿಯಲ್ಲೂ ಅವರ ಹವಾ ಹೆಚ್ಚಿದೆ. ಅಮಿತಾಭ್​ ಬಚ್ಚನ್​, ಸಿದ್ದಾರ್ಥ್​ ಮಲ್ಹೋತ್ರಾ (Siddharth Malhotra ) ಅವರಂತಹ ಸ್ಟಾರ್​ ಕಲಾವಿದರ ಜೊತೆ ತೆರೆಹಂಚಿಕೊಳ್ಳುವ ಚಾನ್ಸ್​ ರಶ್ಮಿಕಾ ಮಂದಣ್ಣಗೆ ಸಿಕ್ಕಿದೆ. ಇವೆಲ್ಲ ಸಿನಿಮಾ ವಿಷಯವಾದರೆ, ವೈಯಕ್ತಿಕ ವಿಚಾರಕ್ಕೂ ಅವರು ಆಗಾಗ ಸುದ್ದಿ ಆಗುತ್ತಾರೆ. ಸದ್ಯ ರಶ್ಮಿಕಾ ಯಾರನ್ನಾದರೂ ಲವ್​ ಮಾಡುತ್ತಿದ್ದಾರಾ? ಈ ಪ್ರಶ್ನೆ ಅಭಿಮಾನಿಗಳ ತಲೆಯಲ್ಲಿ ಕೊರೆಯುತ್ತಿದೆ. ಹಾಗಾಗಿ ಕೆಲವು ಸಂದರ್ಶನಗಳಲ್ಲೂ ಅವರಿಗೆ ರಿಲೇಷನ್​ಶಿಪ್ (Relationship)​ ಬಗ್ಗೆ ಪ್ರಶ್ನೆ ಎದುರಾಗುತ್ತದೆ. ಇತ್ತೀಚೆಗೆ ಡೇಟಿಂಗ್​ ಕುರಿತ ಪ್ರಶ್ನೆಗೆ ರಶ್ಮಿಕಾ ಉತ್ತರಿಸಿದ್ದಾರೆ. 

ಸದ್ಯ ರಶ್ಮಿಕಾ ಮಂದಣ್ಣ ಅವರಿಗೆ 25 ವರ್ಷ ವಯಸ್ಸು. ತಮಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಡೇಟಿಂಗ್​ ಮಾಡುವ ಬಗ್ಗೆ ಅವರ ಅಭಿಪ್ರಾಯ ಏನು ಎಂದು ಪ್ರಶ್ನಿಸಲಾಯಿತು. ಅದಕ್ಕೆ ತುಂಬ ಬುದ್ಧಿವಂತಿಕೆಯಿಂದ ಅವರು ಉತ್ತರ ನೀಡಿದ್ದಾರೆ. ‘ವಯಸ್ಸು ಮುಖ್ಯವಾಗುವುದಿಲ್ಲ. ವ್ಯಕ್ತಿ ಮುಖ್ಯವಾಗುತ್ತಾರೆ’ ಎಂದು ರಶ್ಮಿಕಾ ಹೇಳಿದ್ದಾರೆ. ಈ ಜಾಣತನದ ಉತ್ತರಕ್ಕೆ ಅವರ ಫ್ಯಾನ್ಸ್​ ಭೇಷ್​ ಎನ್ನುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ನಟಿಸಿರುವ ‘ಪುಷ್ಪ’ ಸಿನಿಮಾ ಈ ವರ್ಷ ಡಿಸೆಂಬರ್​ 17ರಂದು ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಆ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಜೊತೆ ತೆರೆಹಂಚಿಕೊಂಡಿರುವ ಅವರು ಶ್ರೀವಲ್ಲಿ ಎಂಬ ಪಾತ್ರ ಮಾಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ ಮತ್ತು ಹಾಡುಗಳಲ್ಲಿ ಶ್ರೀವಲ್ಲಿ ಪಾತ್ರದ ಬಗ್ಗೆ ವಿವರಿಸಲಾಗಿದೆ. ದೊಡ್ಡ ಪರದೆ ಮೇಲೆ ಶ್ರೀವಲ್ಲಿಯನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ.

ಕೆಲವೇ ದಿನಗಳ ಹಿಂದೆ ‘ಪುಷ್ಪ’ ಸಿನಿಮಾದ ‘ಸಾಮಿ ಸಾಮಿ..’ ಹಾಡು ರಿಲೀಸ್​ ಆಯಿತು. ತೆಲುಗಿನ ಜೊತೆಗೆ ಕನ್ನಡ, ಮಲಯಾಳಂ, ತಮಿಳಿನಲ್ಲೂ ಈ ಹಾಡು ಬಿಡುಗಡೆ ಆಗಿದೆ. ಕನ್ನಡ ವರ್ಷನ್​ಗೆ ಅನನ್ಯಾ ಭಟ್​ ಧ್ವನಿ ನೀಡಿದ್ದಾರೆ. ಈ ಗೀತೆಯನ್ನು ವರದರಾಜ್​ ಚಿಕ್ಕಬಳ್ಳಾಪುರ ಅವರು ಬರೆದಿದ್ದಾರೆ. ಸಾಹಿತ್ಯಕ್ಕೆ ಹೊಂದುವಂತೆ ಡಿಫರೆಂಟ್ ಸ್ಟೆಪ್​ಗಳನ್ನು ನೃತ್ಯ ನಿರ್ದೇಶಕ ಶೇಖರ್​ ವಿ.ಜೆ. ಹೇಳಿಕೊಟ್ಟಿದ್ದಾರೆ. ‘ಪುಷ್ಪ’ ಚಿತ್ರದಲ್ಲಿ ಅಲ್ಲು ಅರ್ಜುನ್​ ಗೆಟಪ್​ ಸಂಪೂರ್ಣ ಡಿಫರೆಂಟ್​ ಆಗಿದೆ. ರಶ್ಮಿಕಾ ಕೂಡ ಹಳ್ಳಿ ಹುಡುಗಿ ರೀತಿ ಕಾಣಿಸಿಕೊಂಡಿದ್ದಾರೆ. ಆದರೂ ಗ್ಲಾಮರ್​ ಏನೂ ಕಮ್ಮಿ ಇಲ್ಲ. ಈ ಸಿನಿಮಾದಿಂದ ಅವರ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್​ ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ:

ಯಶ್​, ಪ್ರಭಾಸ್​, ಸಮಂತಾರನ್ನೂ ಹಿಂದಿಕ್ಕಿ ರಶ್ಮಿಕಾ ನಂ.1, ದೇವರಕೊಂಡ ನಂ.2: ಇಲ್ಲಿದೆ ಫೋರ್ಬ್ಸ್​ ಪಟ್ಟಿ

Rashmika Mandanna: ಒಂದೇ ಒಂದು ಮಾತಿನಿಂದ ಟ್ರೋಲಿಗನ ಕಮೆಂಟ್​ ಡಿಲೀಟ್​ ಮಾಡಿಸಿದ ರಶ್ಮಿಕಾ; ಅದರಲ್ಲಿ ಅಂಥದ್ದೇನಿತ್ತು?

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್