‘ಪುಷ್ಪ’ ಐಟಂ ಸಾಂಗ್ನಲ್ಲಿ ಹಾಟ್ ಆಗಿ ಮಿಂಚಿದ ಸಮಂತಾ; ಇಲ್ಲಿದೆ ವಿಶೇಷ ಹಾಡು
ಸಮಂತಾ ನೀಲಿ ಬಣ್ಣದ ಉಡುಗೆ ತೊಟ್ಟಿದ್ದಾರೆ. ಈ ಹಾಡಿನಲ್ಲಿ ಸಮಂತಾ ಅವರ ಕೆಲ ಫೋಟೋಗಳನ್ನು ಹಾಕಲಾಗಿದೆ. ಅವರ ಲುಕ್ ಮಾದಕವಾಗಿದೆ. ಈ ವಿಶೇಷ ಹಾಡು ಇಂದು ರಿಲೀಸ್ ಆಗಿದೆ.

ಸಮಂತಾ ಟಾಲಿವುಡ್ನಲ್ಲಿ ನೆಲೆ ಕಂಡುಕೊಂಡಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್ 2’ ತೆರೆಗೆ ಬಂದ ನಂತರದಲ್ಲಿ ಬಾಲಿವುಡ್ನಿಂದಲೂ ಸಾಕಷ್ಟು ಆಫರ್ಗಳು ಅವರನ್ನು ಅರಸಿ ಬರುತ್ತಿವೆ. ಈಗ ‘ಪುಷ್ಪ’ ಸಿನಿಮಾದ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಹಾಡು ಇಂದು (ಡಿಸೆಂಬರ್ 10) ರಿಲೀಸ್ ಆಗಿದೆ. ಸಮಂತಾ ಲುಕ್ ವೈರಲ್ ಆಗಿದೆ. ಅವರ ಹಾಟ್ ಅವತಾರ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.
ಸಮಂತಾ ಅವರು ವಿಚ್ಛೇದನ ಪಡೆದ ಬಳಿಕ ಮತ್ತೆ ಸಿನಿಮಾ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿರುವ ಅವರು ಸಿನಿಮಾಗಳ ಆಯ್ಕೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ‘ಪುಷ್ಪ’ ಸಿನಿಮಾದ ಐಟಂ ಸಾಂಗ್ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಅದಕ್ಕಾಗಿ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಸಂಭಾವನೆ ವಿಚಾರದ ಬಗ್ಗೆ ಚಿತ್ರತಂಡದಿಂದಾಗಲೀ ಸಮಂತಾ ಕಡೆಯಿಂದಾಗಿ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ ಅವರು ಪಡೆಯುತ್ತಾರೆ ಎನ್ನಲಾದ ಸಂಭಾವನೆ ಮೊತ್ತ ಕೇಳಿ ಎಲ್ಲರಿಗೂ ಅಚ್ಚರಿ ಆಗಿದೆ. ಈ ಐಟಂ ಸಾಂಗ್ನಲ್ಲಿ ನಟಿಸಲು ಸಮಂತಾ ಬರೋಬ್ಬರಿ 1.5 ಕೋಟಿ ರೂಪಾಯಿ ಪಡೆದಿದ್ದಾರೆ ಎಂಬ ಸುದ್ದಿ ಹರಡಿದೆ. ಹೀಗಿರುವಾಗಲೇ ಈ ಹಾಡಿನ ಪೋಸ್ಟರ್ ಒಂದನ್ನು ರಿಲೀಸ್ ಮಾಡಲಾಗಿದೆ.
Woahhh???..Extremely Addictive Songg??..@ThisIsDSP saar raccha ?? and @Samanthaprabhu2 ??? captivating look????https://t.co/GSsdMGN1Wf#Pushpa ?? pic.twitter.com/M3KLWBILa1
— vennela kishore (@vennelakishore) December 10, 2021
‘ಓ ಅಂತಾವ..’ ಸಾಂಗ್ ರಿಲೀಸ್ ಆಗಿದೆ. ಸಮಂತಾ ನೀಲಿ ಬಣ್ಣದ ಉಡುಗೆ ತೊಟ್ಟಿದ್ದಾರೆ. ಈ ಹಾಡಿನಲ್ಲಿ ಸಮಂತಾ ಅವರ ಕೆಲ ಫೋಟೋಗಳನ್ನು ಹಾಕಲಾಗಿದೆ. ಅವರ ಲುಕ್ ಮಾದಕವಾಗಿದೆ. ಈ ವಿಶೇಷ ಹಾಡು ಇಂದು ರಿಲೀಸ್ ಆಗಿದೆ. ಈ ಸಾಂಗ್ ನೋಡಿ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಫೋಟೋದಲ್ಲಿ ಅವರು ಇಷ್ಟು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಹೀಗಿರುವಾಗ ಅವರು ಹೆಜ್ಜೆ ಹಾಕಿರುವ ಸಂಪೂರ್ಣ ಹಾಡು ಇನ್ನು ಹೇಗೆ ಇರಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಿದೆ.
ಇದನ್ನೂ ಓದಿ: ಸಮಂತಾ ವಾಟ್ಸಾಪ್ ಸಂದೇಶದ ಸ್ಕ್ರೀನ್ಶಾಟ್ ಬಹಿರಂಗ; ಅರೆಬರೆ ಮುಚ್ಚಿಟ್ಟು ನಟಿ ಹೇಳಿದ್ದೇನು?




