AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa: ‘ಪುಷ್ಪ’ ರಿಲೀಸ್​ ಡೇಟ್​ ಜೊತೆಗೆ ಮತ್ತೊಂದು ಮುಖ್ಯ ವಿಚಾರಕ್ಕೆ ಸ್ಪಷ್ಟನೆ ನೀಡಿದ ಅಲ್ಲು ಅರ್ಜುನ್​

Pushpa Release Date: ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗಲಿದೆ. ಕ್ರಿಸ್​ಮಸ್​ ಸಂದರ್ಭದಲ್ಲಿ ಇನ್ನೂ ಕೆಲವು ಸ್ಟಾರ್​ ಸಿನಿಮಾಗಳು ರಿಲೀಸ್​ ಆಗಲಿವೆ.

Pushpa: ‘ಪುಷ್ಪ’ ರಿಲೀಸ್​ ಡೇಟ್​ ಜೊತೆಗೆ ಮತ್ತೊಂದು ಮುಖ್ಯ ವಿಚಾರಕ್ಕೆ ಸ್ಪಷ್ಟನೆ ನೀಡಿದ ಅಲ್ಲು ಅರ್ಜುನ್​
‘ಪುಷ್ಪ’ ರಿಲೀಸ್​ ಡೇಟ್​ ಜೊತೆಗೆ ಮತ್ತೊಂದು ಮುಖ್ಯ ವಿಚಾರಕ್ಕೆ ಸ್ಪಷ್ಟನೆ ನೀಡಿದ ಅಲ್ಲು ಅರ್ಜುನ್​
TV9 Web
| Edited By: |

Updated on: Aug 03, 2021 | 3:49 PM

Share

ಲಾಕ್​ಡೌನ್​ ಕಾರಣದಿಂದಾಗಿ ಅನೇಕ ಸಿನಿಮಾಗಳ ರಿಲೀಸ್​ ಡೇಟ್​ ಬಗ್ಗೆ ಗೊಂದಲ ಉಂಟಾಗಿತ್ತು. ಹೈ-ಬಜೆಟ್​ನ ಹಲವು ಸ್ಟಾರ್​ ಸಿನಿಮಾಗಳು ಈಗ ಒಂದೊಂದಾಗಿ ಬಿಡುಗಡೆ ದಿನಾಂಕ ಘೋಷಣೆ ಮಾಡಿಕೊಳ್ಳುತ್ತಿವೆ. ಆ ಪೈಕಿ ಅಲ್ಲು ಅರ್ಜುನ್​ (Allu Arjun) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಜೋಡಿಯ ಬಹುನಿರೀಕ್ಷಿತ ‘ಪುಷ್ಪ’ (Pushpa) ಸಿನಿಮಾ ಕೂಡ ಕಣಕ್ಕೆ ಇಳಿದಿದೆ. ಈ ಚಿತ್ರ ಯಾವಾಗ ರಿಲೀಸ್​ ಆಗಲಿದೆ ಎಂಬುದನ್ನು ತಿಳಿದುಕೊಳ್ಳಲು ಅಭಿಮಾನಿಗಳು ಹಲವು ದಿನಗಳಿಂದ ತುದಿಗಾಲಿನಲ್ಲಿ ನಿಂತು ಕಾದಿದ್ದರು. ಈಗ ಆ ಪ್ರಶ್ನೆಗೆ ಸ್ವತಃ ಅಲ್ಲು ಅರ್ಜುನ್​ ಉತ್ತರ ನೀಡಿದ್ದಾರೆ. ಈ ವರ್ಷ ಕ್ರಿಸ್​ಮಸ್​ ಹಬ್ಬಕ್ಕೆ (Christmas 2021) ‘ಪುಷ್ಪ’ ಬಿಡುಗಡೆ ಆಗಲಿದೆ ಎಂದು ಅವರು ಟ್ವೀಟ್​ ಮಾಡಿದ್ದಾರೆ.

‘ಪುಷ್ಪ’ ಚಿತ್ರಕ್ಕೆ ಸಂಬಂಧಿಸಿದಂತೆ ಇನ್ನೊಂದು ಪ್ರಮುಖ ವಿಚಾರ ಅಭಿಮಾನಿಗಳ ಮನದಲ್ಲಿ ಕೊರೆಯುತ್ತಿತ್ತು. ಈ ಸಿನಿಮಾ ಎರಡು ಪಾರ್ಟ್​ಗಳಲ್ಲಿ ಮೂಡಿಬರಲಿದೆ ಎಂದು ಹಲವು ದಿನಗಳಿಂದ ಸುದ್ದಿ ಹರಿದಾಡುತ್ತಿತ್ತು. ಅಲ್ಲದೆ, ಎರಡೂ ಪಾರ್ಟ್​ಗೆ ಬೇರೆ ಬೇರೆ ಹೆಸರು ಇರಲಿದೆ ಎಂದು ಹೇಳಲಾಗುತ್ತಿತ್ತು. ಹಾಗಾದರೆ ಮೊದಲ ಪಾರ್ಟ್​ಗೆ ಪೂರ್ಣ ಶೀರ್ಷಿಕೆ ಏನು ಎಂಬುದು ಕೂಡ ಈಗ ಬಹಿರಂಗ ಆಗಿದೆ. ಅಲ್ಲು ಅರ್ಜುನ್​ ಹಂಚಿಕೊಂಡಿರುವ ಈ ಹೊಸ ಪೋಸ್ಟರ್​ನಲ್ಲಿ ‘Pushpa- The Rise’ ಎಂಬ ಟೈಟಲ್​ ಗಮನ ಸೆಳೆಯುತ್ತಿದೆ.

ಈ ಸಿನಿಮಾಗೆ ಖ್ಯಾತ ನಿರ್ದೇಶಕ ಸುಕುಮಾರ್​ ನಿರ್ದೇಶನ ಮಾಡಿದ್ದಾರೆ. ಪಾತ್ರವರ್ಗದ ಕಾರಣದಿಂದಲೂ ‘ಪುಷ್ಪ’ ಚಿತ್ರ ಹೈಪ್​ ಸೃಷ್ಟಿಮಾಡಿದೆ. ಡಾಲಿ ಧನಂಜಯ, ಪ್ರಕಾಶ್​ ರೈ, ಫಹಾದ್​ ಫಾಸಿಲ್​, ಜಗಪತಿ ಬಾಬು ಮುಂತಾದವರು ನಟಿಸುತ್ತಿದ್ದಾರೆ. ಸನ್ನಿ ಲಿಯೋನ್​ ಕೂಡ ಈ ಚಿತ್ರದಲ್ಲಿ ಒಂದು ಐಟಂ ಡ್ಯಾನ್ಸ್​ ಮಾಡಲಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ. ಆ ಹಾಡಿಗಾಗಿ ಅವರು ಬರೋಬ್ಬರಿ 50 ಲಕ್ಷ ರೂ. ಡಿಮ್ಯಾಂಡ್​ ಮಾಡಿದ್ದಾರೆ ಎನ್ನಲಾಗುತ್ತಿದೆ.

ತೆಲುಗು, ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಕ್ರಿಸ್​ಮಸ್​ ಸಂದರ್ಭದಲ್ಲಿ ಇನ್ನೂ ಕೆಲವು ಸ್ಟಾರ್​ ಸಿನಿಮಾಗಳು ರಿಲೀಸ್​ ಆಗಲಿವೆ. ಆಮಿರ್​ ಖಾನ್​ ನಟನೆಯ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರ ಕೂಡ ಡಿ.25ರಂದು ತೆರೆಗೆ ಬರಲಿದೆ. ಹಾಗಾಗಿ ಗಲ್ಲಾಪೆಟ್ಟಿಗೆಯಲ್ಲಿ ಅಲ್ಲು ಅರ್ಜುನ್​ ಹಾಗೂ ಆಮಿರ್​ ಖಾನ್​ ನಡುವೆ ದೊಡ್ಡ ಕ್ಲ್ಯಾಶ್​ ಆಗಲಿದೆ.

ಇದನ್ನೂ ಓದಿ:

ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಪುಷ್ಪ, ಕೆಜಿಎಫ್​ 2; ಯಶ್​-ಅಲ್ಲು ಅರ್ಜುನ್​ ನಡುವೆ​ ಭಾರಿ ಪೈಪೋಟಿ

‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ’; ಅಲ್ಲು ಅರ್ಜುನ್​ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?