Pushpa Collection: ವಿಶ್ವ ಮಟ್ಟದಲ್ಲಿ ಎರಡು ದಿನಕ್ಕೆ 116 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಪುಷ್ಪ’
‘ಪುಷ್ಪ’ ಭಾರತ ಮಾತ್ರವಲ್ಲದೆ, ವಿದೇಶದಲ್ಲೂ ಏಕಕಾಲಕ್ಕೆ ರಿಲೀಸ್ ಆಗಿದೆ. ಅಮೆರಿಕ ಸೇರಿ ಅನೇಕ ರಾಷ್ಟ್ರಗಳಲ್ಲಿ ಈ ಸಿನಿಮಾ ಹೆಚ್ಚು ಶೋ ಪ್ರದರ್ಶನ ಕಂಡಿದೆ. ಹೀಗಾಗಿ, ಮೊದಲ ದಿನ ಈ ಸಿನಿಮಾ 71 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿತ್ತು.
ಡಿಸೆಂಬರ್ 17ರಂದು ತೆರೆಗೆ ಬಂದ ‘ಪುಷ್ಪ’ ಸಿನಿಮಾ (Pushpa Movie) ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಆದಾಗ್ಯೂ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದೆ. ಈ ಚಿತ್ರದ ಎದುರು ಭಾರತದ ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್ ಆಗದ ಕಾರಣ ಅಲ್ಲು ಅರ್ಜುನ್ ಚಿತ್ರಕ್ಕೆ ಪ್ಲಸ್ ಆಗಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ (Pushpa Movie Box Office Collection) ವಿಚಾರದಲ್ಲಿ ‘ಪುಷ್ಪ’ ಗೆದ್ದಿದೆ . ಪೈರಸಿ ಕಾಟದ ನಡುವೆಯೂ ಪುಷ್ಪ ಒಳ್ಳೆಯ ಗಳಿಕೆ ಮಾಡುತ್ತಿದೆ. ಇದು ಅವರ ಅಭಿಮಾನಿಗಳಿಗೆ ಹಾಗೂ ‘ಪುಷ್ಪ’ ತಂಡಕ್ಕೆ ಖುಷಿ ನೀಡಿದೆ.
‘ಪುಷ್ಪ’ ಭಾರತ ಮಾತ್ರವಲ್ಲದೆ, ವಿದೇಶದಲ್ಲೂ ಏಕಕಾಲಕ್ಕೆ ರಿಲೀಸ್ ಆಗಿದೆ. ಅಮೆರಿಕ ಸೇರಿ ಅನೇಕ ರಾಷ್ಟ್ರಗಳಲ್ಲಿ ಈ ಸಿನಿಮಾ ಹೆಚ್ಚು ಶೋ ಪ್ರದರ್ಶನ ಕಂಡಿದೆ. ಹೀಗಾಗಿ, ಮೊದಲ ದಿನ ಈ ಸಿನಿಮಾ 71 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿತ್ತು. ಎರಡನೇ ದಿನವೂ ‘ಪುಷ್ಪ’ ಉತ್ತಮ ಗಳಿಕೆ ಮಾಡಿದೆ. ಎರಡು ದಿನಕ್ಕೆ ಈ ಸಿನಿಮಾ 116 ಕೋಟಿ ರೂಪಾಯಿ ಕಮಾಯಿ ಮಾಡಿದೆ ಎಂದು ವರದಿ ಆಗಿದೆ.
‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್ ಪಕ್ಕಾ ಹಳ್ಳಿ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಅಲ್ಲು ಅರ್ಜುನ್ ಲುಕ್ ಬಗ್ಗೆ, ಸಿನಿಮಾ ಮೇಕಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ, ಸಿನಿಮಾದ ಅವಧಿ ದೀರ್ಘ ಎನಿಸುತ್ತದೆ ಎಂದು ಚಿತ್ರದ ಬಗ್ಗೆ ನೆಗೆಟಿವ್ ಮಾತನಾಡಿದವರೇ ಹೆಚ್ಚು. ಆದಾಗ್ಯೂ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದೆ.
ಈ ಮೊದಲು ‘ಪುಷ್ಪ’ ಬಗ್ಗೆ ಮಾತನಾಡಿದ್ದ ‘ಉಪ್ಪೇನಾ’ ನಿರ್ದೇಶಕ ಬುಚಿ ಬಾಬು, ‘ನಾನು ಸಿನಿಮಾದ ಮೊದಲ ಭಾಗವನ್ನು ವೀಕ್ಷಣೆ ಮಾಡಿದ್ದೇನೆ. ಈ ಚಿತ್ರ 10 ಕೆಜಿಎಫ್ಗೆ ಸಮ. ಸಿನಿಮಾದಲ್ಲಿ ಬರುವ ಪಾತ್ರಗಳು ತುಂಬಾನೇ ಅದ್ಭುತವಾಗಿ ಮೂಡಿ ಬಂದಿವೆ. ನಾನು ಇದನ್ನು ಅತಿಶಯೋಕ್ತಿಯಾಗಿ ಹೇಳುತ್ತಿಲ್ಲ. ಸಿನಿಮಾ ನೋಡಿದ ಮೇಲೆ ನಿಮಗೇ ತಿಳಿಯಲಿದೆ’ ಎಂದಿದ್ದರು. ಈಗ ಚಿತ್ರ ರಿಲೀಸ್ ಆಗಿ ಏನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಕನ್ನಡಿಗರು ಹೇಳುತ್ತಿದ್ದಾರೆ.
ಇದನ್ನೂ ಓದಿ: ‘ನಿಮ್ಮ ಬುದ್ಧಿ ಶುದ್ಧವಿಲ್ಲ’ ಎನಿಸಿಕೊಂಡ್ರೂ ಕೇಕೆ ಹಾಕಿ ಕುಣಿದ ಗಂಡಸರನ್ನು ನೋಡಿ ಸಮಂತಾ ಹೇಳಿದ್ದೇನು?
‘ಪುಷ್ಪ’ ಸಿನಿಮಾದ ಐಟಂ ಸಾಂಗ್ ಹಾಡಿದ್ದು ‘ಮಂಗ್ಲಿ’ ಸಹೋದರಿ; ಹಿಟ್ ಆಯ್ತು ಹಾಡು
Published On - 2:40 pm, Sun, 19 December 21