ಟಿಆರ್ಪಿಯಲ್ಲಿ ಮತ್ತೆ ಪುಟ್ಟಕ್ಕನೇ ನಂಬರ್ ಒನ್; ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ?
ಕಳೆದ ಕೆಲ ವಾರಗಳಿಂದ ಈ ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಳ್ಳುತ್ತಾ ಬಂದಿದೆ. ಈ ಮೊದಲು ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆ ಧಾರಾವಾಹಿಯನ್ನು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಿಂದಿಕ್ಕಿದೆ.

21ನೇ ವಾರದ ಧಾರಾವಾಹಿ ಟಿಆರ್ಪಿ ಹೊರಬಿದ್ದಿದೆ. ಈ ಪೈಕಿ ಟಾಪ್ ಐದರಲ್ಲಿ ಇರುವ ಎಲ್ಲಾ ಧಾರಾವಾಹಿಗಳು ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ಧಾರಾವಾಹಿಗಳೇ ಅನ್ನೋದು ವಿಶೇಷ. ಈ ಪೈಕಿ ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ. ಈ ಧಾರಾವಾಹಿ ಹಳೆಯ ಚಾರ್ಮ್ಗೆ ಮರಳಿದೆ. ಆ ಬಗ್ಗೆ ಇಲ್ಲಿದೆ ವಿವರ.
‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ 21ನೇ ವಾರದ ಟಿಆರ್ಪಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕಳೆದ ಕೆಲ ವಾರಗಳಿಂದ ಈ ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಳ್ಳುತ್ತಾ ಬಂದಿದೆ. ಈ ಮೊದಲು ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆ ಧಾರಾವಾಹಿಯನ್ನು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಿಂದಿಕ್ಕಿದೆ.
ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಕೂಡು ಕುಟುಂಬದ ಕಥೆಯನ್ನು ಈ ಧಾರಾವಾಹಿ ಹೊಂದಿದೆ. ಈ ಧಾರಾವಾಹಿಗೆ ಆರಂಭದಲ್ಲಿ ಎಷ್ಟು ಟಿಆರ್ಪಿ ಬರುತ್ತಿತ್ತೋ ಅಷ್ಟು ಟಿಆರ್ಪಿ ಈಗ ಸಿಗುತ್ತಿಲ್ಲ. ಈ ಕಾರಣಕ್ಕೆ ಧಾರಾವಾಹಿ ಮೊದಲ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ.
ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಇತ್ತೀಚೆಗೆ ಜೀ ಕನ್ನಡದಲ್ಲಿ ಪ್ರಸಾರ ಆರಂಭಿಸಿದೆ. ಈ ಧಾರಾವಾಹಿಗೆ ಉತ್ತಮ ಟಿಆರ್ಪಿ ಸಿಗುತ್ತಿದೆ. ಈ ಮೊದಲು ಪ್ರಸಾರ ಕಾಣುತ್ತಿದ್ದ ಬೇಡಿಕೆಯ ಧಾರಾವಾಹಿಗಳ ಟಿಆರ್ಪಿಯನ್ನು ಈ ಧಾರಾವಾಹಿ ಹಿಂದಿಕ್ಕಿದೆ.
ನಾಲ್ಕನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ರಾಜೇಶ್ ನಟರಂಗ, ಛಾಯಾ ಸಿಂಗ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ಒಳ್ಳೆಯ ಟಿಆರ್ಪಿ ಪಡೆದು ನಾಲ್ಕನೇ ಸ್ಥಾನದಲ್ಲಿ ಇದೆ. ಈ ಧಾರಾವಾಹಿಯ ಕಥೆ ಹಲವು ತಿರುವುಗಳನ್ನು ಪಡೆದು ಸಾಗುತ್ತಿದೆ.
ಇದನ್ನೂ ಓದಿ: ‘ಸೀತಾ ರಾಮ’ ಧಾರಾವಾಹಿ ನಟಿ ವೈಷ್ಣವಿ ಗೌಡಗೆ ಬಿತ್ತು ದಂಡ; ಮಾಡಿದ ತಪ್ಪೇನು?
ಐದನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಈಗ ರಾಮ ಹಾಗೂ ಸೀತೆಯ ಮದುವೆ ನಿಶ್ಚಯ ಆಗಿದೆ. ಮುಂದಿನ ದಿನಗಳಲ್ಲಿ ಈ ಧಾರಾವಾಹಿಯ ಟಿಆರ್ಪಿಯಲ್ಲಿ ಏರಿಕೆ ಆಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




