AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಹಣ ಉಳಿಸಲು ಇಂಥ ಕೆಲಸ ಮಾಡಿದ್ರಾ​ ನಾಗ ಚೈತನ್ಯ-ರಾಶಿ ಖನ್ನಾ? ಇದು ಟಾಲಿವುಡ್​ ಗಾಸಿಪ್​

ರಷ್ಯಾದ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೆಲವು ಆಫರ್​ ನೀಡಲಾಗಿದೆ. ಅದರ ಲಾಭ ಪಡೆಯಲು ‘ಥ್ಯಾಂಕ್​ ಯೂ’ ಚಿತ್ರತಂಡ ಕೊರೆಯುವ ಚಳಿಯಲ್ಲಿ ಶೂಟಿಂಗ್​ ಮಾಡಿದೆ ಎಂಬ ಗಾಸಿಪ್​ ಹಬ್ಬಿದೆ.

ವಿದೇಶದಲ್ಲಿ ಹಣ ಉಳಿಸಲು ಇಂಥ ಕೆಲಸ ಮಾಡಿದ್ರಾ​ ನಾಗ ಚೈತನ್ಯ-ರಾಶಿ ಖನ್ನಾ? ಇದು ಟಾಲಿವುಡ್​ ಗಾಸಿಪ್​
ರಾಶಿ ಖನ್ನಾ, ನಾಗ ಚೈತನ್ಯ
TV9 Web
| Updated By: ಮದನ್​ ಕುಮಾರ್​|

Updated on:Feb 06, 2022 | 9:15 AM

Share

ಸಮಂತಾ ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಬಳಿಕ ನಟ ನಾಗ ಚೈತನ್ಯ (Naga Chaitanya) ಅವರು ತಮ್ಮ ವೃತ್ತಿಬದುಕಿನ ಮೇಲೆ ಹೆಚ್ಚು ಗಮನ ಹರಿಸಿದ್ದಾರೆ. ಅವರು ಅಭಿನಯಿಸಿದ ‘ಬಂಗಾರ‍್ರಾಜು’ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಯಶಸ್ವಿ ಆಯಿತು. ಅದರ ಖುಷಿಯಲ್ಲೇ ಅವರು ಬೇರೆ ಸಿನಿಮಾಗಳ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ರಾಶಿ ಖನ್ನಾ (Raashi Khanna) ಜೊತೆ ನಾಗ ಚೈತನ್ಯ ಅಭಿನಯಿಸಿರುವ ‘ಥ್ಯಾಂಕ್​ ಯೂ’ (Thank You Movie) ಸಿನಿಮಾದ ಶೂಟಿಂಗ್​ ರಷ್ಯಾದಲ್ಲಿ ನಡೆದಿದೆ. ಈ ಸಿನಿಮಾ ಬಗ್ಗೆ ಟಾಲಿವುಡ್​ ಅಂಗಳದಲ್ಲಿ ಒಂದು ಗಾಸಿಪ್​ ಹರಿದಾಡುತ್ತಿದೆ. ದುಡ್ಡು ಉಳಿಸುವ ಸಲುವಾಗಿ ನಾಗ ಚೈತನ್ಯ ಮತ್ತು ರಾಶಿ ಖನ್ನಾ ಅವರು ಬಹಳ ರಿಸ್ಕ್​ ತೆಗೆದುಕೊಂಡಿದ್ದಾರೆ ಎಂಬ ಮಾತು ಕೇಳಿಬಂದಿದೆ. ರಷ್ಯಾದಲ್ಲಿ ಹಿಮದ ವಾತಾವರಣ ಇದೆ. ಮೈನಸ್​ 12-18 ಡಿಗ್ರಿ ಚಳಿಯಲ್ಲಿ ಕಲಾವಿದರು ಅಭಿನಯಿಸಿದ್ದಾರೆ. ನಿರ್ಮಾಪಕರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಈ ರೀತಿ ರಿಸ್ಕ್​ ತೆಗೆದುಕೊಳ್ಳಲಾಗಿದೆ ಎಂಬ ಗಾಸಿಪ್​ ಹಬ್ಬಿದೆ. ಆದರೆ ಈ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಪ್ರತಿಕ್ರಿಯೆ ನೀಡಿಲ್ಲ.

ಮೂಲಗಳ ಪ್ರಕಾರ, ರಷ್ಯಾದಲ್ಲಿ ಭಾಗಶಃ ದೃಶ್ಯಗಳ ಶೂಟಿಂಗ್​ ಮಾಡಿದರೆ ಚಿತ್ರೀಕರಣಕ್ಕೆ ಖರ್ಚಾದ ಮೊತ್ತದಲ್ಲಿ ಶೇ.90ರಷ್ಟು ಹಣವನ್ನು ಭರಿಸಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ರಷ್ಯಾದ ಪ್ರವಾಸೋದ್ಯಮವನ್ನು ಉತ್ತೇಜಿಸಲು ಈ ಆಫರ್​ ನೀಡಲಾಗಿದೆ. ಸಿನಿಮಾ ಸಿದ್ಧವಾದ ಬಳಿಕ ಅದನ್ನು ಅಲ್ಲಿನ ಅಧಿಕಾರಿಗಳಿಗೆ ತೋರಿಸಬೇಕು. ಬಳಿಕ ಅವರು ರೀಫಂಡ್​ ಮಾಡುತ್ತಾರೆ. ಸಿನಿಮಾದಲ್ಲಿ ರಷ್ಯಾದ ಪ್ರೇಕ್ಷಣೀಯ ಸ್ಥಳಗಳನ್ನು ನೋಡಿದ ಜನರು ಅಲ್ಲಿಗೆ ಪ್ರವಾಸಕ್ಕೆ ಬರುತ್ತಾರೆ ಎಂಬುದು ಈ ಯೋಜನೆಯ ಉದ್ದೇಶ. ಅದರ ಲಾಭ ಪಡೆಯಲು ‘ಥ್ಯಾಂಕ್​ ಯೂ’ ಚಿತ್ರತಂಡ ಕೊರೆಯುವ ಚಳಿಯಲ್ಲಿ ಶೂಟಿಂಗ್​ ಮಾಡಿದೆ ಎಂದು ಹೇಳಲಾಗುತ್ತಿದೆ. ಇದರ ಸತ್ಯಾಸತ್ಯತೆ ಬಗ್ಗೆ ಚಿತ್ರತಂಡವೇ ಸ್ಪಷ್ಟನೆ ನೀಡಬೇಕಿದೆ.

‘ಬಂಗಾರ‍್ರಾಜು’ ಚಿತ್ರಕ್ಕೆ ಗೆಲುವು:

ನಾಗಾರ್ಜುನ ಹಾಗೂ ನಾಗ ಚೈತನ್ಯ ನಟಿಸಿರುವ ‘ಬಂಗಾರ‍್ರಾಜು’ ಚಿತ್ರ ಜನವರಿ 14ರಂದು ತೆರೆಕಂಡಿತ್ತು. ಈ ವರ್ಷದ ಸೂಪರ್​ ಹಿಟ್​ ಸಿನಿಮಾಗಳಲ್ಲಿ ಈ ಚಿತ್ರ ಕೂಡ ಸ್ಥಾನ ಪಡೆದುಕೊಂಡಿದೆ. ಈ ಚಿತ್ರ ರಿಲೀಸ್​ಗೂ ಮುನ್ನವೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿತ್ತು. ಆದರೆ ನಾಯಕ ನಟ ನಾಗಾರ್ಜುನ ಅವರು ಈ ಚಿತ್ರವನ್ನು ಕೊರೊನಾ ನಡುವೆಯೂ ಸಂಕ್ರಾಂತಿಯ ಸಂಭ್ರಮದಲ್ಲಿ ರಿಲೀಸ್ ಮಾಡುವುದಾಗಿ ತಿಳಿಸಿದ್ದರು. ಬಿಗ್ ಬಜೆಟ್ ಹಾಗೂ ಸ್ಟಾರ್ ನಟರ ಚಿತ್ರಗಳೆಲ್ಲವೂ ರಿಲೀಸ್​​ನಿಂದ ಹಿಂದೆ ಸರಿಯುತ್ತಿದ್ದ ವೇಳೆ ಅವರ ನಿರ್ಧಾರ ಹಲವರಿಗೆ ಅಚ್ಚರಿ ಮೂಡಿಸಿತ್ತು. ಆದರೆ ಬಾಕ್ಸ್​​ ಆಫೀಸ್​ನಲ್ಲೂ ಭರಪೂರ ಬೆಳೆ ತೆಗೆಯುವ ಮೂಲಕ ಎಲ್ಲಾ ಅಡ್ಡಿ ಆತಂಕಗಳನ್ನು ಮೀರಿ ಚಿತ್ರ ಯಶಸ್ವಿ ಆಯಿತು. ತೆರೆಕಂಡ ಮೂರು ವಾರಗಳ ಒಳಗೆ ‘ಬಂಗಾರ‍್ರಾಜು’ ಬರೋಬ್ಬರಿ 76 ಕೋಟಿ ರೂಪಾಯಿಮ ಬಾಚಿಕೊಂಡಿದೆ.

ಇದನ್ನೂ ಓದಿ:

ವಿಚ್ಛೇದನದ ನಂತರವೂ ಸಮಂತಾ ಮೇಲೆ ಕಡಿಮೆಯಾಗಿಲ್ಲ ಗೌರವ; ಸ್ಯಾಮ್ ಬಗ್ಗೆ ನಾಗ ಚೈತನ್ಯ ಹಂಚಿಕೊಂಡ್ರು ಅಚ್ಚರಿಯ ಮಾಹಿತಿ

ಮತ್ತೆ ನಾಗ ಚೈತನ್ಯ ಜೊತೆ ಸಂಸಾರ ಮಾಡ್ತಾರಾ ಸಮಂತಾ? ವಿಚ್ಛೇದನದ ಪೋಸ್ಟ್​ ಏಕಾಏಕಿ ಡಿಲೀಟ್​

Published On - 9:07 am, Sun, 6 February 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!