AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ

ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ

ಭಾವನಾ ಹೆಗಡೆ
| Edited By: |

Updated on:Oct 03, 2026 | 5:08 PM

Share

ನಟಿ ರಚಿತಾ ರಾಮ್ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭದಲ್ಲಿ ಅವರು ಕೊರಗಜ್ಜನ ಶಕ್ತಿ ಮತ್ತು ಆಶೀರ್ವಾದದ ಬಗ್ಗೆ ಮಾತನಾಡಿ, "ನನ್ನ ಉಸಿರೇ ಅಜ್ಜ" ಎಂದರು. ಅಲ್ಲದೆ, ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿ, ಶೀಘ್ರದಲ್ಲೇ ಮಹಿಳಾ ಪ್ರಧಾನ ಚಿತ್ರವೊಂದರ ಘೋಷಣೆ ಮಾಡುವ ಸುಳಿವು ನೀಡಿದರು.

ಬೆಂಗಳೂರು, ಅಕ್ಟೋಬರ್ 03: ಸ್ಯಾಂಡಲ್​ವುಡ್ ನಟಿ ರಚಿತಾ ರಾಮ್ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭದಲ್ಲಿ ಅವರು ಕೊರಗಜ್ಜನ ಕುರಿತು ತಮ್ಮ ಅಪಾರ ಭಕ್ತಿಯನ್ನು ವ್ಯಕ್ತಪಡಿಸಿದರು. “ನನ್ನ ಉಸಿರೇ ಅಜ್ಜ, ನನ್ನ ಜೀವನಾನೇ ಅಜ್ಜ. ನನ್ನನ್ನ, ನನ್ನ ಅಭಿಮಾನಿಗಳನ್ನ ಕಳಿಸಿರೋದು ನನ್ನ ಅಜ್ಜ” ಎಂದು ರಚಿತಾ ರಾಮ್ ಹೇಳಿದರು. ಕೊರಗಜ್ಜನ ಶಕ್ತಿಯ ಬಗ್ಗೆ ಮಾಧ್ಯಮಗಳಿಗೆ ತಿಳಿಸಿದ ಅವರು, ಎಲ್ಲರಿಗೂ ಒಳ್ಳೆಯದಾಗಲಿ, ಉತ್ತಮ ಆರೋಗ್ಯ ಸಿಗಲಿ ಎಂದು ಪ್ರಾರ್ಥಿಸಿದರು.

ಅಲ್ಲದೆ, “ಎಲ್ಲರೂ ಒಳ್ಳೆಯದನ್ನೇ ಮಾಡಿ, ಯಾರಿಗೂ ಕೆಟ್ಟದ್ದು ಮಾಡಬೇಡಿ. ಇರೋದು ಒಂದೇ ಜೀವನ, ಎಂಜಾಯ್ ಮಾಡಿ” ಎಂದು ಅಭಿಮಾನಿಗಳಿಗೆ ಕಿವಿಮಾತು ಹೇಳಿದರು. ಹೊಸ ಸಿನಿಮಾ ಯೋಜನೆಗಳ ಬಗ್ಗೆ ಕೇಳಿದಾಗ, ಅವರು ಈಗಾಗಲೇ ಮಹಿಳಾ ಪ್ರಧಾನ ಚಿತ್ರವೊಂದಕ್ಕೆ ಸಹಿ ಹಾಕಿರುವುದಾಗಿ ದೃಢಪಡಿಸಿದರು. “ಅದಾಗಿದ್ ತಕ್ಷಣ ವೆರಿ ಸೂನ್ ಐ ಆ್ಯಮ್ ಗೋನ ಅನೌನ್ಸ್” ಎಂದು ಹೇಳುವ ಮೂಲಕ ಹೊಸ ಚಿತ್ರದ ಘೋಷಣೆ ಶೀಘ್ರದಲ್ಲೇ ಆಗಲಿದೆ ಎಂದು ತಿಳಿಸಿದರು. ಅಭಿಮಾನಿಗಳು ಫೋಟೊ ತೆಗೆಸಿಕೊಳ್ಳಲು ಸಾಲಿನಲ್ಲಿ ಬರುವಾಗ ತಮ್ಮ ಫೋನಿನ ಫ್ರಂಟ್ ಕ್ಯಾಮರಾ ಆನ್ ಮಾಡಿಕೊಂಡು ಬರುವಂತೆ ಸೂಚಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 03, 2026 05:00 PM

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More