Prabhas: ಪ್ರವಾಹ ಸಂತ್ರಸ್ತರಿಗೆ 1 ಕೋಟಿ ರೂ. ನೀಡಿದ ಪ್ರಭಾಸ್​; ಇತರೆ ಹೀರೋಗಳು ಕೊಟ್ಟ ಹಣ ಎಷ್ಟು?

Andhra Pradesh Floods: ಚಿರಂಜೀವಿ, ಮಹೇಶ್​ ಬಾಬು, ಜ್ಯೂ. ಎನ್​ಟಿಆರ್​, ರಾಮ್​ ಚರಣ್​ ಮುಂತಾದ ನಟರಿಗಿಂತಲೂ ಪ್ರಭಾಸ್​ ಹೆಚ್ಚು ದೇಣಿಗೆ ನೀಡಿದ್ದಾರೆ. ಒಂದು ಕೋಟಿ ರೂ. ನೀಡುವ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಅವರು ಪಾತ್ರರಾಗಿದ್ದಾರೆ.

Prabhas: ಪ್ರವಾಹ ಸಂತ್ರಸ್ತರಿಗೆ 1 ಕೋಟಿ ರೂ. ನೀಡಿದ ಪ್ರಭಾಸ್​; ಇತರೆ ಹೀರೋಗಳು ಕೊಟ್ಟ ಹಣ ಎಷ್ಟು?
ಪ್ರಭಾಸ್​
Follow us
TV9 Web
| Updated By: ಮದನ್​ ಕುಮಾರ್​

Updated on: Dec 07, 2021 | 3:39 PM

ಹೈದರಾಬಾದ್​ನಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ (Andhra Pradesh Floods) ಪರಿಸ್ಥಿತಿ ಉಂಟಾಗಿತ್ತು. ಇದರಿಂದ ಅನೇಕ ಜನರ ಜೀವನ ದುಸ್ತರ ಆಗಿದೆ. ಅಪಾರ ಆಸ್ತಿ-ಪಾಸ್ತಿಗೆ ಹಾನಿಗೆ ಆಗಿದೆ. ಮನೆ ಕಳೆದುಕೊಂಡು ಬೀದಿಗೆ ಬಂದವರು ಹಲವರಿದ್ದಾರೆ. 24ಕ್ಕೂ ಅಧಿಕ ಮಂದಿ ನಿಧನರಾದ ಬಗ್ಗೆ ವರದಿ ಆಗಿದೆ. ಅನೇಕರು ನೀರಿನಲ್ಲಿ ಕೊಚ್ಚಿ ಹೋಗಿ ನಾಪತ್ತೆ ಆಗಿದ್ದಾರೆ. ಆಂಧ್ರ ಪ್ರದೇಶದ ಈ ಕಷ್ಟದ ಪರಿಸ್ಥಿತಿಗೆ ಟಾಲಿವುಡ್​ ಸ್ಟಾರ್​ ನಟರು ಮರುಕ ವ್ಯಕ್ತಪಡಿಸಿದ್ದಾರೆ. ಅಲ್ಲದೇ ತಮ್ಮ ಕೈಲಾಸ ಸಹಾಯ ಮಾಡುತ್ತಿದ್ದಾರೆ. ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಚಿರಂಜೀವಿ ಮುಂತಾದ ನಟರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ (CM Relief Fund) ದೇಣಿಗೆ ನೀಡಿದ್ದಾರೆ. ವಿಶೇಷ ಎಂದರೆ, ಈ ಎಲ್ಲ ಹೀರೋಗಳಿಗಿಂತಲೂ ನಟ ಪ್ರಭಾಸ್​ (Prabhas) ಅವರು ಹೆಚ್ಚು ಹಣ ನೀಡಿದ್ದಾರೆ. ಬರೋಬ್ಬರಿ 1 ಕೋಟಿ ರೂ. ಹಣವನ್ನು ಅವರು ಸಿಎಂ ಪರಿಹಾರ ನಿಧಿಗೆ ನೀಡಿದ್ದಾರೆ​! ಸದ್ಯ ಅವರು ‘ರಾಧೆ ಶ್ಯಾಮ್​’ (Radhe Shyam) ಸಿನಿಮಾ ಬಿಡುಗಡೆಯನ್ನು ಎದುರುನೋಡುತ್ತಿದ್ದಾರೆ.

‘ಮೆಗಾ ಸ್ಟಾರ್​’ ಚಿರಂಜೀವಿ, ಮಹೇಶ್​ ಬಾಬು, ಜ್ಯೂ. ಎನ್​ಟಿಆರ್​, ರಾಮ್​ ಚರಣ್​ ಅವರು ತಲಾ 25 ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಅವರೆಲ್ಲರಿಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿರುವ ಪ್ರಭಾಸ್​ ಅವರು 1 ಕೋಟಿ ರೂ. ನೀಡುವ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 2020ರಲ್ಲಿ ಕೊರೊನಾ ವೈರಸ್​ ಹಾವಳಿಯಿಂದ ಲಾಕ್​ಡೌನ್ ಉಂಟಾಗಿದ್ದಾಗಲೂ ಪ್ರಭಾಸ್​ ಕೊಡುಗೈ ದಾನಿ ಆಗಿದ್ದರು. 4.5 ಕೋಟಿ ರೂ. ನೀಡಿದ್ದ ಅವರನ್ನು ಎಲ್ಲರೂ ಕೊಂಡಾಡಿದ್ದರು.

‘ಬಾಹುಬಲಿ’ ಸಿನಿಮಾದಿಂದ ಸಿಕ್ಕ ದೊಡ್ಡ ಯಶಸ್ಸಿನ ಬಳಿಕ ಪ್ರಭಾಸ್​ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಬೆಳೆದರು. ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಅವರ ಕಾಲ್​ಶೀಟ್​ಗಾಗಿ ಮನೆ ಮುಂದೆ ಕಾಯುವಂತಾಯಿತು. ಅವರ ಸಂಭಾವನೆ ಕೂಡ ಹೆಚ್ಚಿದೆ. ಸಿನಿಮಾರಂಗದಿಂದ ಇಷ್ಟೆಲ್ಲ ದುಡಿಯುತ್ತಿರುವ ಪ್ರಭಾಸ್​ ಅವರು ಜನರ ಸಂಕಷ್ಟಕ್ಕೆ ಮಿಡಿಯುವಲ್ಲಿ ಹಿಂದೆ ಬೀಳುವುದಿಲ್ಲ. ಈಗ ಅವರ ಕೈಯಲ್ಲಿ ಹಲವು ಬಿಗ್​ ಬಜೆಟ್​ ಸಿನಿಮಾಗಳಿವೆ.

ಪ್ರಭಾಸ್​​ ನಟಿಸಿರುವ ‘ರಾಧೆ ಶ್ಯಾಮ್​’ ಸಿನಿಮಾ ಭಾರಿ ನಿರೀಕ್ಷೆ ಮೂಡಿಸಿದೆ. ಈ ಚಿತ್ರದಲ್ಲಿ ಅವರಿಗೆ ಪೂಜಾ ಹೆಗ್ಡೆ ಜೋಡಿ ಆಗಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಹಾಡುಗಳು ಮತ್ತು ಟೀಸರ್​ ಧೂಳೆಬ್ಬಿಸಿವೆ. 2022ರ ಜ.14ರಂದು ಈ ಸಿನಿಮಾ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಕನ್ನಡಕ್ಕೂ ಡಬ್ ಆಗಿದ್ದು ಏಕಕಾಲಕ್ಕೆ ಕನ್ನಡ ವರ್ಷನ್​ ಕೂಡ ತೆರೆಕಾಣಲಿದೆ. ಇದಲ್ಲದೇ, ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’, ಓಂ ರಾವುತ್​ ನಿರ್ದೇಶನದ ‘ಆದಿಪುರುಷ್​’ ಸಿನಿಮಾಗಳಲ್ಲೂ ಪ್ರಭಾಸ್​ ನಟಿಸುತ್ತಿದ್ದಾರೆ.

ಇದನ್ನೂ ಓದಿ:

‘ರಾಧೆ ಶ್ಯಾಮ್​’ ಚಿತ್ರದ ಕಥೆ ಲೀಕ್​; ಪ್ರಭಾಸ್​-ಪೂಜಾ ಹೆಗ್ಡೆ ಸಿನಿಮಾದ ಈ ಹಾಡಿನಲ್ಲಿ ಅಡಗಿದೆ ಸ್ಟೋರಿ

ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್