AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ ಸಿನಿಮಾದ ಹಾಡು ಕದ್ದ ಸಲ್ಮಾನ್​ ಖಾನ್​; ಟ್ರೆಲರ್​​ನಲ್ಲಿ ಸಿಕ್ತು ಸಣ್ಣ ಝಲಕ್

Radhe Trailer: ಸಲ್ಮಾನ್​ ಖಾನ್​ ಈ ಮೊದಲಿನಿಂದಲೂ ದಕ್ಷಿಣ ಭಾರತ ಸಿನಿಮಾಗಳ ಫ್ಯಾನ್​. ಹೀಗಾಗಿ, ಅನೇಕ ಚಿತ್ರಗಳನ್ನು ಅವರು ಬಾಲಿವುಡ್​ಗೆ ರಿಮೇಕ್​ ಮಾಡಿದ್ದಾರೆ.

ಅಲ್ಲು ಅರ್ಜುನ್​ ಸಿನಿಮಾದ ಹಾಡು ಕದ್ದ ಸಲ್ಮಾನ್​ ಖಾನ್​; ಟ್ರೆಲರ್​​ನಲ್ಲಿ ಸಿಕ್ತು ಸಣ್ಣ ಝಲಕ್
ರಾಧೆ ಸಿನಿಮಾ ಹಾಡಿನ ಸಣ್ಣ ಝಲಕ್
ರಾಜೇಶ್ ದುಗ್ಗುಮನೆ
|

Updated on:Apr 22, 2021 | 7:47 PM

Share

ಸಲ್ಮಾನ್​ ಖಾನ್​ ನಟನೆಯ ಸಿನಿಮಾ ತೆರೆಗೆ ಬರುತ್ತದೆ ಎಂದರೆ ನೋಡೋಕೆ ಅಭಿಮಾನಿಗಳು ಕಾತುರರಾಗಿರುತ್ತಾರೆ. ಸಲ್ಲು ಸಿನಿಮಾ ರಿಲೀಸ್​ ಆಗುತ್ತಿದೆ ಎಂದರೆ ಮೊದಲ ದಿನ ದೊಡ್ಡ ಮೊತ್ತದ ಕಲೆಕ್ಷನ್​ ಆಗೋದು ಗ್ಯಾರಂಟಿ. ಈ ಬಾರಿಯ ಈದ್ ಹಬ್ಬದ ಪ್ರಯುಕ್ತ ರಾಧೆ ಸಿನಿಮಾ ತೆರೆಗೆ ಬರುತ್ತಿದೆ. ಕೊರೊನಾ ಕಾರಣದಿಂದ ಸಿನಿಮಾದ ಕಲೆಕ್ಷನ್​ ತಗ್ಗುವ ನಿರೀಕ್ಷೆ ಇದೆ. ಇಂದು ಚಿತ್ರದ ಟ್ರೇಲರ್​ ರಿಲೀಸ್​ ಆಗಿದ್ದು ಧೂಳೆಬ್ಬಿಸುತ್ತಿದೆ. ಈ ಮಧ್ಯೆ, ಸಿನಿಮಾದಲ್ಲಿ ಬಳಕೆಯಾದ ಹಾಡೊಂದು ಎಲ್ಲರ ಗಮನ ಸೆಳೆಯುತ್ತಿದೆ. ಈ ಹಾಡು ದಕ್ಷಿಣ ಭಾರತದ ಸಿನಿಮಾದ್ದು ಅನ್ನೋದು ವಿಶೇಷ.

ಸಲ್ಮಾನ್​ ಖಾನ್​ ಈ ಮೊದಲಿನಿಂದಲೂ ದಕ್ಷಿಣ ಭಾರತ ಸಿನಿಮಾಗಳ ಫ್ಯಾನ್​. ಹೀಗಾಗಿ, ಅನೇಕ ಚಿತ್ರಗಳನ್ನು ಅವರು ಬಾಲಿವುಡ್​ಗೆ ರಿಮೇಕ್​ ಮಾಡಿದ್ದಾರೆ. ತೆಲುಗಿನಲ್ಲಿ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿದ್ದ ‘ರಿಂಗ ರಿಂಗಾ..’ ಹಾಡನ್ನು ‘ಡಿಂಕ ಚಿಕಾ..’ ಎಂದು ಬಾಲಿವುಡ್​ಗೆ ರಿಮೇಕ್​ ಮಾಡಿದ್ದರು. ರಾಧೆ ಚಿತ್ರದಲ್ಲೂ ಅದು ಮುಂದುವರಿದಿದೆ.

ತೆಲುಗಿನಲ್ಲಿ ಅಲ್ಲು ಅರ್ಜುನ್​ ನಟನೆಯ ಡಿಜೆ: ದುವ್ವಾಡ ಜಗನ್ನಾಥಮ್​ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಸಿನಿಮಾದ ‘ಸೀಟಿಮಾರ್..’​ ಹಾಡು ಎಲ್ಲರ ಬಾಯಲ್ಲಿ ಗುನುಗುವಂತಾಗಿತ್ತು. ಇನ್ನು, ಈ ಹಾಡಿನಲ್ಲಿ ಅಲ್ಲು ಅರ್ಜುನ್​ ಸ್ಟೆಪ್​ ನೋಡಿ ಅಭಿಮಾನಿಗಳು ಅಕ್ಷರಶಃ ಫಿದಾ ಆಗಿದ್ದರು. ಈ ಹಾಡನ್ನು ಈಗ ರಾಧೆ ಸಿನಿಮಾದಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ.

ಹೌದು, ‘ಸೀಟಿಮಾರ್..’ ಟ್ಯೂನ್​ಅನ್ನು ಸಲ್ಮಾನ್​ ಖಾನ್​ ಸಿನಿಮಾಗೆ ಭಟ್ಟಿ ಇಳಿಸಲಾಗಿದೆ. ಈ ಹಾಡಿಗೆ ಸಲ್ಮಾನ್​ ಖಾನ್​ ಹಾಗೂ ದಿಶಾ ಪಠಾಣಿ ಸ್ಟೆಪ್​ ಹಾಕಿದ್ದಾರೆ. ಟ್ರೇಲರ್​ನಲ್ಲಿ ಈ ಹಾಡಿನ ಸಣ್ಣ ಝಲಕ್​ ಸಿಗುತ್ತದೆ. ಶೀಘ್ರವೇ ಈ ಹಾಡು ರಿಲೀಸ್​ ಆಗುವ ನಿರೀಕ್ಷೆ ಇದೆ.

ರಾಧೆ ಸಿನಿಮಾದಲ್ಲಿ ಸಲ್ಮಾನ್ ಖಾನ್ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಭುದೇವ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಜಾಕಿ ಶ್ರಾಫ್, ರಣದೀಪ್ ಹೂಡಾ ಮತ್ತು ದಿಶಾ ಪಠಾಣಿ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈದ್​ ಪ್ರಯುಕ್ತ ಮೇ 13ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: Radhe Trailer: ರಾಧೆ ಟ್ರೇಲರ್ ಮೂಲಕ ಧೂಳೆಬ್ಬಿಸಿದ ಸಲ್ಮಾನ್ ಖಾನ್; ಹೇಗಿದ್ದಾನೆ ಮೋಸ್ಟ್ ವಾಂಟೆಡ್ ಭಾಯ್?

Radhe Trailer: ಮೊದಲ ಬಾರಿಗೆ ಹೀರೋಯಿನ್​ ತುಟಿಗೆ ಮುತ್ತಿಟ್ಟ ಸಲ್ಮಾನ್​ ಖಾನ್​; ಅಭಿಮಾನಿಗಳಿಗೆ ಶಾಕ್​

Published On - 7:43 pm, Thu, 22 April 21

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!