Radhe Movie: ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ಲೀಕ್​ ಆಯ್ತು ರಾಧೆ ಸಿನಿಮಾ; ಸಲ್ಲು ಅಭಿಮಾನಿಗಳಿಗೆ ಬೇಸರ

ತಮಿಳ್​ ರಾಕರ್ಸ್​ ಸೇರಿ ಸಾಕಷ್ಟು ವೆಬ್​ಸೈಟ್​ಗಳಲ್ಲಿ ರಾಧೆ ಸಿನಿಮಾ ಲೀಕ್ ಆಗಿದೆ. ಇದರ ಬಗ್ಗೆ ಸಲ್ಲು ಅಭಿಮಾನಿಗಳು ಕಿಡಿಕಾರಿದ್ದಾರೆ. ಸಿನಿಮಾ ಲೀಕ್​ ಮಾಡಿದವರ ವಿರುದ್ಧ ಸೈಬರ್​ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Radhe Movie: ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ಲೀಕ್​ ಆಯ್ತು ರಾಧೆ ಸಿನಿಮಾ; ಸಲ್ಲು ಅಭಿಮಾನಿಗಳಿಗೆ ಬೇಸರ
ಸಲ್ಮಾನ್​ ಖಾನ್​
Follow us
ರಾಜೇಶ್ ದುಗ್ಗುಮನೆ
|

Updated on: May 13, 2021 | 7:11 PM

ಸಲ್ಮಾನ್​ ಖಾನ್​ ನಟನೆಯ ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್​ ಸಿನಿಮಾ ಈದ್​ ಹಬ್ಬದ ಪ್ರಯುಕ್ತ ಇಂದು (ಮೇ 13) ರಿಲೀಸ್​ ಆಗಿದೆ. ಸಲ್ಲು ಸಿನಿಮಾ ಎಂದಮೇಲೆ ದೊಡ್ಡ ನಿರೀಕ್ಷೆ ಇರೋದು ಸಾಮಾನ್ಯ. ಅಂತೆಯೇ ರಾಧೆ ಚಿತ್ರ ಕೂಡ ದೊಡ್ಡ ಹೈಪ್​ ತೆಗೆದುಕೊಂಡಿತ್ತು. ಆದರೆ, ಟ್ವಿಟರ್​ನಲ್ಲಿ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಿರುವಾಗಲೇ ರಾಧೆ ಸಿನಿಮಾ ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ಆನ್​ಲೈನ್​ನಲ್ಲಿ ಲೀಕ್​ ಆಗಿದೆ. ಅದೂ ಎಚ್​​ಡಿ ಪ್ರಿಂಟ್​ ಅನ್ನೋದು ಬೇಸರದ ವಿಚಾರ.

ಕೊರೊನಾ ವೈರಸ್​ ಎರಡನೆ ಅಲೆ ಮಿತಿಮೀರಿ ಹರಡುತ್ತಿರುವುದರಿಂದ ಸಾಕಷ್ಟು ಕಡೆಗಳಲ್ಲಿ ಲಾಕ್​ಡೌನ್​ ಆದೇಶ ಹೊರಡಿಸಲಾಗಿದೆ. ಹೀಗಾಗಿ ದೇಶದ ಬಹುತೇಕ ಚಿತ್ರಮಂದಿರಗಳನ್ನು ಮುಚ್ಚುವ ಆದೇಶ ಹೊರಡಿಸಲಾಗಿದೆ. ಇದರ ಮಧ್ಯೆಯೂ ಸಲ್ಮಾನ್​ ಖಾನ್​ ನಟನೆಯ ಬಹುನಿರೀಕ್ಷಿತ ರಾಧೆ ಸಿನಿಮಾ ಒಟಿಟಿ ಹಾಗೂ ಲಾಕ್​ಡೌನ್​ ಇಲ್ಲದೇ ಇರುವ ದೇಶ, ನಗರಗಳ ಚಿತ್ರಮಂದಿರದಲ್ಲಿ ಈ ಸಿನಿಮಾ ಪ್ರದರ್ಶನ ಕಂಡಿದೆ. ಆದರೆ ಮೊದಲ ದಿನವೇ ಚಿತ್ರ ಲೀಕ್​ ಆಗಿದೆ.

ತಮಿಳ್​ ರಾಕರ್ಸ್​ ಸೇರಿ ಸಾಕಷ್ಟು ವೆಬ್​ಸೈಟ್​ಗಳಲ್ಲಿ ರಾಧೆ ಸಿನಿಮಾ ಲೀಕ್ ಆಗಿದೆ. ಇದರ ಬಗ್ಗೆ ಸಲ್ಲು ಅಭಿಮಾನಿಗಳು ಕಿಡಿಕಾರಿದ್ದಾರೆ. ಸಿನಿಮಾ ಲೀಕ್​ ಮಾಡಿದವರ ವಿರುದ್ಧ ಸೈಬರ್​ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್​ ಸಿನಿಮಾಲ್ಲಿ ಒಂದು ಪ್ರಮುಖ ಪಾತ್ರದಲ್ಲಿ ಹಿರಿಯ ನಟ ಜಾಕಿ ಶ್ರಾಫ್​ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಅವರು ಪೊಲೀಸ್​ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಪ್ರಭುದೇವ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಬಿಡುಗಡೆಗೆ ಅವಕಾಶ ಇರುವ ಕಡೆಗಳಲ್ಲಿ ‘ರಾಧೆ’ ಚಿತ್ರಮಂದಿರಗಳಲ್ಲೇ ತೆರೆ ಕಾಣಲಿದೆ. ಉಳಿದಂತೆ ಡಿ2ಎಚ್​, ಓಟಿಟಿ ಪ್ಲಾಟ್​ಫಾರ್ಮ್​ ಮುಂತಾದ ವೇದಿಕೆಗಳಲ್ಲಿ ಹಣ ಪಾವತಿಸಿ ಸಿನಿಮಾ ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತಿದೆ. ಈ ಮೂಲಕ ಹೊಸ ಸಾಧ್ಯತೆಗಳಿಗೆ ಚಿತ್ರರಂಗ ತೆರೆದುಕೊಳ್ಳುತ್ತಿದೆ.

ಇದನ್ನೂ ಓದಿ: Salman Khan: ರಾಧೆ ಚಿತ್ರಕ್ಕೆ 21 ಕಡೆ ಕತ್ತರಿ; ಸಲ್ಮಾನ್​ ಖಾನ್​ ಸಿನಿಮಾದಲ್ಲಿ ಅಂಥದ್ದೇನಿದೆ?

Radhe Movie Review: ‘ರಾಧೆ’ ನೋಡಿ ಏನು ಹೇಳಿದ್ರು ಸಲ್ಮಾನ್​ ಖಾನ್​ ಫ್ಯಾನ್ಸ್​? ಇಲ್ಲಿದೆ ಟ್ವಿಟರ್​ ವಿಮರ್ಶೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್