AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhe Trailer: ರಾಧೆ ಟ್ರೇಲರ್ ಮೂಲಕ ಧೂಳೆಬ್ಬಿಸಿದ ಸಲ್ಮಾನ್ ಖಾನ್; ಹೇಗಿದ್ದಾನೆ ಮೋಸ್ಟ್ ವಾಂಟೆಡ್ ಭಾಯ್?

Radhe Hindi Movie Trailer: ರಾಧೆ ಚಿತ್ರದಲ್ಲಿ ಸಲ್ಮಾನ್​ ಖಾನ್​ಗೆ ಜೋಡಿಯಾಗಿ ದಿಶಾ ಪಠಾಣಿ ನಟಿಸಿದ್ದಾರೆ. ಒಟ್ಟಾರೆ ಸಿನಿಮಾ ಹೇಗಿರಲಿದೆ ಎಂಬುದರ ಸಣ್ಣ ಝಲಕ್​ ತೋರಿಸಲು ಈಗ ಟ್ರೇಲರ್​ ರಿಲೀಸ್​ ಆಗಿದೆ.

Radhe Trailer: ರಾಧೆ ಟ್ರೇಲರ್ ಮೂಲಕ ಧೂಳೆಬ್ಬಿಸಿದ ಸಲ್ಮಾನ್ ಖಾನ್; ಹೇಗಿದ್ದಾನೆ ಮೋಸ್ಟ್ ವಾಂಟೆಡ್ ಭಾಯ್?
ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: Apr 22, 2021 | 1:37 PM

Share

ಕೊರೊನಾ ವೈರಸ್​ ಹಾವಳಿಯಿಂದಾಗಿ ಚಿತ್ರರಂಗದ ವ್ಯವಹಾರವೆಲ್ಲ ಬುಡಮೇಲಾಗಿದೆ ಎಂಬುದು ನಿಜ. ಹಾಗಂತ ಚಿತ್ರರಂಗದವರು ಆಶಾವಾದವನ್ನು ಕಳೆದುಕೊಂಡಿಲ್ಲ. ಮುಂಬರುವ ದಿನಗಳಲ್ಲಿ ಖಂಡಿತವಾಗಿಯೂ ಬಿಗ್​ ಸ್ಟಾರ್​ ಸಿನಿಮಾಗಳು ರಿಲೀಸ್​ ಆಗಲಿವೆ. ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್​’ ಸಿನಿಮಾ ಕೂಡ ಕೊರೊನಾ ಕಾಟದ ನಡುವೆಯೂ ಬಿಡುಗಡೆಗೆ ಸಜ್ಜಾಗಿದೆ. ಅದರ ಮೊದಲ ಹಂತ ಎಂಬಂತೆ ಈಗ ಭರ್ಜರಿಯಾಗಿ ಟ್ರೇಲರ್​ ಬಿಡುಗಡೆ ಮಾಡಲಾಗಿದೆ.

ಪ್ರತಿ ವರ್ಷ ಈದ್​ ಹಬ್ಬಕ್ಕೆ ಸಲ್ಮಾನ್​ ಖಾನ್​ ನಟನೆಯ ಯಾವುದಾದರೊಂದು ಸಿನಿಮಾ ಬಿಡುಗಡೆ ಆಗುವುದು ವಾಡಿಕೆ. ಈ ವರ್ಷವೂ ಅದು ಮುಂದುವರಿಯಲಿದೆ. ಮೇ 13ರಂದು ಈ ಚಿತ್ರ ಓಟಿಟಿ ಮತ್ತು ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಸಲ್ಮಾನ್​ ಖಾನ್​ಗೆ ಜೋಡಿಯಾಗಿ ದಿಶಾ ಪಠಾಣಿ ನಟಿಸಿದ್ದಾರೆ. ಒಟ್ಟಾರೆ ಸಿನಿಮಾ ಹೇಗಿರಲಿದೆ ಎಂಬುದರ ಸಣ್ಣ ಝಲಕ್​ ತೋರಿಸಲು ಈಗ ಟ್ರೇಲರ್​ ರಿಲೀಸ್​ ಆಗಿದೆ.

ಗುರುವಾರ (ಏ.22) ಬೆಳಗ್ಗೆ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್​’ ಟ್ರೇಲರ್​ ಬಿಡುಗಡೆ ಆಗಿದ್ದು, ಕೆಲವೇ ನಿಮಿಷಗಳಲ್ಲಿ ಲಕ್ಷಾಂತರ ವೀವ್ಸ್​ ಪಡೆದುಕೊಂಡು ಮುನ್ನುಗ್ಗುತ್ತಿದೆ. ಈ ಸಿನಿಮಾ ಮೂಲಕ ಸಲ್ಮಾನ್​ ಖಾನ್​ ಎಂದಿನ ತಮ್ಮ ಮಾಸ್​ ಶೈಲಿಗೆ ಮರಳಿದ್ದಾರೆ. ಭರ್ಜರಿಯಾದ ಆ್ಯಕ್ಷನ್​ ಸನ್ನಿವೇಶಗಳು ಟ್ರೇಲರ್​ನಲ್ಲಿ ಇವೆ. ದಿಶಾ ಪಠಾಣಿ ಗ್ಲಾಮರ್​ ಸೊಬಗು ತೋರಿಸಿದ್ದಾರೆ. ಖಳನಟನಾಗಿ ರಣದೀಪ್​ ಹೂಡಾ ಅವರು ಸಲ್ಮಾನ್​ ಖಾನ್​​ ಟಕ್ಕರ್​ ಕೊಟ್ಟಿದ್ದಾರೆ.

(ರಾಧೆ ಸಿನಿಮಾ ಟ್ರೇಲರ್​)

ಈ ಎಲ್ಲ ಕಾರಣಗಳಿಂದಾಗಿ ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್​ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ. ಚಿತ್ರದಲ್ಲಿನ ಒಂದು ಪ್ರಮುಖ ಪಾತ್ರದಲ್ಲಿ ಹಿರಿಯ ನಟ ಜಾಕಿ ಶ್ರಾಫ್​ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಅವರು ಪೊಲೀಸ್​ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮುಂಬೈ ನಗರಕ್ಕೆ ಅಂಟಿದ ಡ್ರಗ್ಸ್​ ಕಳಂಕವನ್ನು ತೊಡೆದುಹಾಕಲು ಈ ಸಿನಿಮಾದ ಹೀರೋ ಪ್ರಯತ್ನ ಮಾಡುತ್ತಾನೆ. ಟ್ರೇಲರ್​ನಲ್ಲಿ ಇರುವ ಫೈಟಿಂಗ್​ ದೃಶ್ಯಗಳ ಜೊತೆಗೆ ಮಾಸ್​ ಡೈಲಾಗ್​ಗಳು ಕೂಡ ಸಲ್ಲು ಅಭಿಮಾನಿಗಳಿಗೆ ಇಷ್ಟ ಆಗುತ್ತಿವೆ.

ಈ ಚಿತ್ರಕ್ಕೆ ಪ್ರಭುದೇವ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಬಿಡುಗಡೆಗೆ ಅವಕಾಶ ಇರುವ ಕಡೆಗಳಲ್ಲಿ ‘ರಾಧೆ’ ಚಿತ್ರಮಂದಿರಗಳಲ್ಲೇ ತೆರೆ ಕಾಣಲಿದೆ. ಉಳಿದಂತೆ ಡಿ2ಎಚ್​, ಓಟಿಟಿ ಪ್ಲಾಟ್​ಫಾರ್ಮ್​ ಮುಂತಾದ ವೇದಿಕೆಗಳಲ್ಲಿ ಹಣ ಪಾವತಿಸಿ ಸಿನಿಮಾ ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತಿದೆ. ಈ ಮೂಲಕ ಹೊಸ ಸಾಧ್ಯತೆಗಳಿಗೆ ಚಿತ್ರರಂಗ ತೆರೆದುಕೊಳ್ಳುತ್ತಿದೆ. ಮೇ 13ರಂದು ರಾಧೆ ಸಿನಿಮಾವನ್ನು ಕಣ್ತುಂಬಿಕೊಳ್ಳಲು ಸಲ್ಮಾನ್​ ಖಾನ್​ ಅಭಿಮಾನಿಗಳು ಕಾಯುತ್ತಿದ್ದಾರೆ.

ಇದನ್ನೂ ಓದಿ: ಕೊರೊನಾ ಏರಿಕೆ ಮಧ್ಯೆಯೂ ರಿಲೀಸ್​ ಆಗ್ತಿದೆ ಸಲ್ಮಾನ್​ ಖಾನ್​ ರಾಧೆ; ಆದರೆ ಇಲ್ಲಿದೆ ಟ್ವಿಸ್ಟ್​

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ