ಬಾಲಿವುಡ್​ನ ಖ್ಯಾತ ಗಾಯಕ ದುಬೈನಲ್ಲಿ ಅರೆಸ್ಟ್?

ರಾಹತ್ ಮಾಜಿ ಮ್ಯಾನೇಜರ್ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಹಿನ್ನೆಲೆಯಲ್ಲಿ ರಾಹತ್ ಅವರನ್ನು ಬಂಧನ ಮಾಡಲಾಗಿದೆ ಎಂದು ವರದಿ ಆಗಿತ್ತು. ಆದರೆ, ಈಗ ಅವರ ಕಡೆಯಿಂದಲೇ ಸ್ಪಷ್ಟನೆ ಸಿಕ್ಕಿರೋದು ಅವರ ಅಭಿಮಾನಿಗಳಿಗೆ ಖುಷಿ ತಂದಿದೆ.   

ಬಾಲಿವುಡ್​ನ ಖ್ಯಾತ ಗಾಯಕ ದುಬೈನಲ್ಲಿ ಅರೆಸ್ಟ್?
ರಾಹತ್
Follow us
ರಾಜೇಶ್ ದುಗ್ಗುಮನೆ
|

Updated on: Jul 23, 2024 | 7:56 AM

ರಾಹತ್ ಫತೇ ಅಲಿ ಖಾನ್ ಅವರು ಬಾಲಿವುಡ್​​ನಲ್ಲಿ ಹಲವು ಸೂಪರ್ ಹಿಟ್ ಹಾಡುಗಳನ್ನು ಹಾಡಿದ್ದಾರೆ. ಅವರು ಇತ್ತೀಚೆಗೆ ದುಬೈಗೆ ತೆರಳಿದ್ದರು. ಅವರು ಅಲ್ಲಿ ಬಂಧನಕ್ಕೆ ಒಳಗಾದರು ಎನ್ನುವ ಸುದ್ದಿ ಹರಿದಾಡಿತ್ತು. ಕೆಲವು ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಆಗಿತ್ತು. ಈ ವಿಚಾರದ ರಾಹತ್ ಫತೇ ಅಲಿ ಖಾನ್ ಅವರು ಸ್ಪಷ್ಟನೆ ನೀಡಿ ವಿಡಿಯೋ ಮಾಡಿದ್ದಾರೆ. ಇದರಲ್ಲಿ ಕೆಲವು ವಿಚಾರಗಳಿಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಬಂಧನ ವಿಚಾರ ಸುಳ್ಳು ಎಂದು ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದಾರೆ.

‘ನಾನು ಹಾಡುಗಳ ರೆಕಾರ್ಡ್​ಗೋಸ್ಕರ ಇಲ್ಲಿಗೆ ಬಂದಿದ್ದೇನೆ. ದೇವರ ದೆಯೆಯಿಂದ ಎಲ್ಲವೂ ಚೆನ್ನಾಗಿ ಸಾಗುತ್ತಿದೆ’ ಎಂದು ವಿಡಿಯೋದಲ್ಲಿ ಅವರು ಹೇಳಿದ್ದಾರೆ. ಈ ಮೂಲಕ ಎಲ್ಲವೂ ಸರಿಯಾಗಿದೆ ಎಂಬ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಈ ವಿಡಿಯೋಗೆ ನೀಡಿದ ಕ್ಯಾಪ್ಶನ್​ನಲ್ಲಿ ‘ರಾಹತ್ ಫತೇ ಅಲಿ ಖಾನ್ ಅರೆಸ್ಟ್ ಆಗಿದ್ದಾರೆ ಅನ್ನೋದು ಸುಳ್ಳು ಮತ್ತು ಆಧಾರ ರಹಿತ’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಶಾರುಖ್​ ಅಥವಾ ಸಲ್ಮಾನ್​.. ಇಬ್ಬರಲ್ಲಿ ಝೈದ್​ ಖಾನ್​ಗೆ ಹೆಚ್ಚು ಇಷ್ಟ ಯಾರು? ಉತ್ತರಿಸಿದ ಜಮೀರ್​ ಪುತ್ರ

ರಾಹತ್ ಮಾಜಿ ಮ್ಯಾನೇಜರ್ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಹಿನ್ನೆಲೆಯಲ್ಲಿ ರಾಹತ್ ಅವರನ್ನು ಬಂಧನ ಮಾಡಲಾಗಿದೆ ಎಂದು ಹೇಳಲಾಗಿತ್ತು. ಆದರೆ, ಈಗ ಅವರ ಕಡೆಯಿಂದಲೇ ಸ್ಪಷ್ಟನೆ ಸಿಕ್ಕಿರೋದು ಅವರ ಅಭಿಮಾನಿಗಳಿಗೆ ಖುಷಿ ತಂದಿದೆ.

ರಾಹತ್ ಯಾರು?

ರಾಹತ್ ಅವರು ಪಾಕಿಸ್ತಾನಿ ಗಾಯಕ. ಅವರು ಗಜಲ್ಸ್, ಸೂಫಿ ಮ್ಯೂಸಿಕ್ ಮೂಲಕ ಫೇಮಸ್ ಆಗಿದ್ದಾರೆ. ಪಾಕಿಸ್ತಾನದ ಸಿನಿಮಾ, ಧಾರಾವಾಹಿ ಹಾಗೂ ಬಾಲಿವುಡ್​ ಸಿನಿಮಾಗಳಲ್ಲಿ ಅವರು ಹಾಡಿದ್ದಾರೆ. ‘ಜೂಮ್ ಬರಾಬರ್​ ಜೂಮ್’, ‘ನಮಸ್ತೆ ಲಂಡನ್​’, ‘ಐ ಹೇಟ್ ಲವ್ ಸ್ಟೋರಿ’, ‘ದಬಾಂಗ್’, ‘ಬಾಡಿಗಾರ್ಡ್’, ‘ಸುಲ್ತಾನ್’ ಸೇರಿ ಅನೇಕ ಸಿನಿಮಾಗಳ ಹಾಡನ್ನು ಅವರು ಹಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್