AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇನ್ಮುಂದೆ ಅತಿಥಿ ಪಾತ್ರ ಮಾಡುತ್ತೇನೋ ಗೊತ್ತಿಲ್ಲ’; ‘ಕರಾವಳಿ’ ವಿವಾದದ ಬೆನ್ನಲ್ಲೇ ರಾಜ್ ಬಿ. ಶೆಟ್ಟಿ ಬೇಸರ

'ಕರಾವಳಿ' ಚಿತ್ರದ ಟ್ರೇಲರ್ ಲಾಂಚ್ ವೇಳೆ ಸೃಷ್ಟಿಯಾದ ಅನಗತ್ಯ ವಿವಾದಗಳ ಬೆನ್ನಲ್ಲೇ ನಟ ರಾಜ್ ಬಿ. ಶೆಟ್ಟಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ತಾವೊಬ್ಬ ಅಸುರಕ್ಷಿತ ವ್ಯಕ್ತಿಯಲ್ಲದಿದ್ದರೂ, ಇತ್ತೀಚಿನ ದುರದೃಷ್ಟಕರ ಘಟನೆಗಳು ಭವಿಷ್ಯದಲ್ಲಿ ಸಿನಿಮಾಗಳಲ್ಲಿ ಅತಿಥಿ ಪಾತ್ರಗಳನ್ನು ಒಪ್ಪಿಕೊಳ್ಳುವ ಮುನ್ನ ಮರುಚಿಂತನೆ ನಡೆಸುವಂತೆ ಮಾಡಿವೆ ಎಂದು ಅವರು ಮುಕ್ತವಾಗಿ ಹೇಳಿಕೊಂಡಿದ್ದಾರೆ.

‘ಇನ್ಮುಂದೆ ಅತಿಥಿ ಪಾತ್ರ ಮಾಡುತ್ತೇನೋ ಗೊತ್ತಿಲ್ಲ’; ‘ಕರಾವಳಿ’ ವಿವಾದದ ಬೆನ್ನಲ್ಲೇ ರಾಜ್ ಬಿ. ಶೆಟ್ಟಿ ಬೇಸರ
ಕರಾವಳಿ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on:Jul 23, 2026 | 2:59 PM

Share

ಮುಖ್ಯಾಂಶಗಳು

  • ಕರಾವಳಿ ಟ್ರೇಲರ್ ಲಾಂಚ್ ವಿವಾದಕ್ಕೆ ರಾಜ್ ಪ್ರತಿಕ್ರಿಯೆ
  • 'ರಕ್ಕಸಪುರದೋಳ್' ಚಿತ್ರದ ಉದಾಹರಣೆ ನೀಡಿದ ರಾಜ್  
  • ಕ್ಯಾಮಿಯೋ ಪಾತ್ರಗಳಿಂದ ದೂರ ಉಳಿಯುವ ಮುನ್ಸೂಚನೆ?

ರಾಜ್ ಬಿ. ಶೆಟ್ಟಿ (Raj B Shetty) ಹೀರೋ ಆಗಿ ಮಿಂಚುವುದರ ಜೊತೆಗೆ ಕೆಲವು ಸಿನಿಮಾಗಳಲ್ಲಿ ಅತಿಥಿ ಪಾತ್ರ ಕೂಡ ಮಾಡಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಹಿಂದಿಯ ‘ಬಂದರ್’ ಸಿನಿಮಾದಲ್ಲಿ ರಾಜ್ ಅವರು ಅತಿಥಿ ಪಾತ್ರ ಮಾಡಿದ್ದರು. ಈಗ ‘ಕರಾವಳಿ’ ಸಿನಿಮಾದಲ್ಲೂ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಇದರ ಸುತ್ತ ವಿವಾದ ಎದ್ದಿದ್ದು, ಇದು ಅವರಿಗೆ ಬೇಸರ ತರಿಸಿದೆ. ಸದ್ಯದ ಪರಿಸ್ಥಿತಿಗಳು ಅವರು ತಮ್ಮ ನಿರ್ಧಾರವನ್ನು ಬದಲಿಸುವಂತೆ ಮಾಡಿವೆ.

‘ನಾನು ಅತಿಥಿ ಪಾತ್ರ ಮಾಡುತ್ತೇನೆ ಎಂಬುದು ಮುಖ್ಯವಲ್ಲ. ನಾನು ಯಾವಾಗಲೂ ಒಬ್ಬ ತಂತ್ರಜ್ಞನಾಗಿ ಯೋಚಿಸುತ್ತೇನೆ. ಎಲ್ಲರೂ ಕಥಾನಾಯಕರಾಗಲು ಸಾಧ್ಯವಿಲ್ಲ, ಯಾರಾದರೂ ಇತರ ಪಾತ್ರಗಳನ್ನೂ ಮಾಡಬೇಕಾಗುತ್ತದೆ. ಕರಾವಳಿ ಸಿನಿಮಾ ಒಬ್ಬ ವ್ಯಕ್ತಿ ಅಥವಾ ಒಂದು ಪಾತ್ರದ ಬಗ್ಗೆ ಅಲ್ಲ, ಇದು ಆ ಮಣ್ಣಿನ ಕಥೆ’ ಎಂದು ಅವರು ಹೇಳಿದ್ದಾರೆ.

ರಾಜ್ ಬಿ ಶೆಟ್ಟಿ ಅವರಿಗೆ ದೊಡ್ಡ ಮಾರುಕಟ್ಟೆ ಸೃಷ್ಟಿ ಆಗಿದೆ. ಹೀಗಾಗಿ, ‘ಕರಾವಳಿ’ ಸಿನಿಮಾದಲ್ಲಿ ಅವರ ಪಾತ್ರ ಹೈಲೈಟ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂತು. ಈ ದುರದೃಷ್ಟಕರ ಘಟನೆಗಳು ಅವರ ಮನಸ್ಸಿಗೆ ತೀವ್ರ ಬೇಸರ ತಂದಿವೆ.

ಇದನ್ನೂ ಓದಿ: ‘ಕರಾವಳಿ’ ವಿವಾದ, ಕ್ಷಮೆ ಕೇಳಿದ ರಾಜ್ ಬಿ ಶೆಟ್ಟಿ

‘ಈ ಸಿನಿಮಾದಲ್ಲಿ ನನ್ನ ಅತಿಥಿ ಪಾತ್ರದ ಸುತ್ತ ಎದ್ದಿರುವ ದುರದೃಷ್ಟಕರ ವಿವಾದಗಳು ಹಾಗೂ ಇತ್ತೀಚಿನ ಇತರ ಘಟನೆಗಳನ್ನು ನೋಡಿದರೆ, ಭವಿಷ್ಯದಲ್ಲಿ ನಾನು ಮತ್ತೆ ಅತಿಥಿ ಪಾತ್ರಗಳನ್ನು ಮಾಡುತ್ತೇನೆಯೋ ಇಲ್ಲವೋ ಗೊತ್ತಿಲ್ಲ. ನಾನು ‘ರಕ್ಕಸಪುರದೋಳ್’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿದ್ದಾಗಲೂ, ಚೊಚ್ಚಲ ನಟ ಅನಿರುದ್ಧ್ ಭಟ್ ಮಾಡಿದ್ದ ವಿಲನ್ ಪಾತ್ರವೇ ಚಿತ್ರದ ಹೈಲೈಟ್ ಆಗಿತ್ತು. ಅದಕ್ಕೆ ನಾನು ಎಂದಿಗೂ ತಲೆಕೆಡಿಸಿಕೊಂಡಿಲ್ಲ. ಅಭದ್ರತೆ ನನಗೆ ಕಾಡಲ್ಲ. ನಾನೊಬ್ಬ ಸಾಮಾನ್ಯ ಮನುಷ್ಯ ಎಂಬುದು ನನಗೆ ಗೊತ್ತು. ಆದರೆ ಇತ್ತೀಚಿನ ದಿನಗಳಲ್ಲಿ ನಡೆದ ಘಟನೆಗಳು ನಾನು ಅತಿಥಿ ಪಾತ್ರಗಳನ್ನು ಒಪ್ಪಿಕೊಳ್ಳುವ ಮುನ್ನ ಮರುಚಿಂತನೆ ನಡೆಸುವಂತೆ ಮಾಡಿವೆ’ ಎಂದು ನೇರವಾಗಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:40 pm, Thu, 23 July 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬಿಜೆಪಿ ಉಸ್ತುವಾರಿಗಳ ಬದಲಾವಣೆ: ಹರೀಶ್ ದ್ವಿವೇದಿಗೆ ಕರ್ನಾಟಕ ಜವಾಬ್ದಾರಿ
ಬಿಜೆಪಿ ಉಸ್ತುವಾರಿಗಳ ಬದಲಾವಣೆ: ಹರೀಶ್ ದ್ವಿವೇದಿಗೆ ಕರ್ನಾಟಕ ಜವಾಬ್ದಾರಿ
ಬೀದರ್‌ನಲ್ಲಿ ವಿದ್ಯುತ್ ನೀಡಲು ಕಣ್ಣಾಮುಚ್ಚಾಲೆ
ಬೀದರ್‌ನಲ್ಲಿ ವಿದ್ಯುತ್ ನೀಡಲು ಕಣ್ಣಾಮುಚ್ಚಾಲೆ
ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ: ಕಣ್ಣೀರಿಡುತ್ತಲೇ ಹೊರಹೋದ ಶಾಸಕಿ ರೂಪಕಲಾ!
ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ: ಕಣ್ಣೀರಿಡುತ್ತಲೇ ಹೊರಹೋದ ಶಾಸಕಿ ರೂಪಕಲಾ!
ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್
ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ