ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ

Updated on: Jan 25, 2026 | 3:22 PM

ರಾಜ್ ಬಿ. ಶೆಟ್ಟಿ ಅವರು ನಟಿಸಿದ ‘ಲ್ಯಾಂಡ್​ಲಾರ್ಡ್’ ಚಿತ್ರ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ಅವರು ವಿಲನ್ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಶೂಟಿಂಗ್ ವೇಳೆ ಬಾಲಕಿ ಜೊತೆ ಮಾತನಾಡಿದ ಒಂದು ವಿಡಿಯೋವನ್ನು ರಾಜ್ ಬಿ. ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಜ್ ಬಿ. ಶೆಟ್ಟಿ ಅವರು ಅಭಿನಯಿಸಿದ ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಅವರು ವಿಲನ್ ಪಾತ್ರ ಮಾಡಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಬಾಲಕಿ ಜೊತೆ ಮಾತನಾಡಿದ ಒಂದು ವಿಡಿಯೋವನ್ನು ರಾಜ್ ಬಿ. ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ 10 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. ‘ಅಣ್ಣ.. ನೀನು ಯಾವಾಗಲಾದರೂ ಬೋಡ ಮಾಡಿಸಿಕೊಂಡಿದ್ದೀಯಾ’ ಎಂದು ಬಾಲಕಿ ಕೇಳಿದ್ದಾಳೆ. ‘ನಾನು ಇರುವುದೇ ಬೋಡ ಕಣೆ. ಕೂದಲು ಅಂಟಿಸಿಕೊಂಡಿದ್ದೇನೆ’ ಎಂದು ರಾಜ್ ಬಿ. ಶೆಟ್ಟಿ (Raj B Shetty) ಅವರು ನಕ್ಕಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ‘ಲ್ಯಾಂಡ್​ಲಾರ್ಡ್’ ಸಿನಿಮಾದಲ್ಲಿನ ಅವರ ಅಭಿನಯಕ್ಕೆ ಸಖತ್ ಪ್ರಶಂಸೆ ಸಿಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.