ಸದ್ದಿಲ್ಲದೆ ಬಿಡುಗಡೆ ಆಯ್ತು ರಾಜ್ ಬಿ ಶೆಟ್ಟಿಯ ಮತ್ತೊಂದು ಮಲಯಾಳಂ ಸಿನಿಮಾ

Raj B Shetty: ಕನ್ನಡದ ಪ್ರತಿಭಾನ್ವಿತ ನಟರಲ್ಲಿ ಒಬ್ಬರಾದ ರಾಜ್ ಬಿ ಶೆಟ್ಟಿ ಈಗಾಗಲೇ ಒಂದು ಮಲಯಾಳಂ ಸಿನಿಮಾದಲ್ಲಿ ನಟಿಸಿ ಅದು ಬಿಡುಗಡೆ ಆಗಿದೆ. ಇದೀಗ ರಾಜ್ ಬಿ ಶೆಟ್ಟಿ ನಟಿಸಿರುವ ಎರಡನೇ ಮಲಯಾಳಂ ಸಿನಿಮಾ ಸುದ್ದಿಲ್ಲದೆ ಇಂದು ತೆರೆಗೆ ಬಂದಿದೆ.

ಸದ್ದಿಲ್ಲದೆ ಬಿಡುಗಡೆ ಆಯ್ತು ರಾಜ್ ಬಿ ಶೆಟ್ಟಿಯ ಮತ್ತೊಂದು ಮಲಯಾಳಂ ಸಿನಿಮಾ
ಕೊಂಡಲ್
Follow us
ಮಂಜುನಾಥ ಸಿ.
|

Updated on: Sep 13, 2024 | 11:33 AM

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಕನ್ನಡದ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕಮರ್ಶಿಯಲ್ ಜೊತೆಗೆ ಕಲಾತ್ಮಕ, ಬ್ರಿಜ್ ಮಾದರಿಯ ಸಿನಿಮಾಗಳಲ್ಲಿಯೂ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟಿ ನಟಿಸಿದ್ದ ‘ಟರ್ಬೊ’ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದರು. ಇದು ರಾಜ್ ಬಿ ಶೆಟ್ಟಿಯ ಮೊದಲ ಮಲಯಾಳಂ ಸಿನಿಮಾ ಆಗಿತ್ತು. ಈ ಸಿನಿಮಾದ ಬಳಿಕ ಇದೀಗ ರಾಜ್ ಬಿ ಶೆಟ್ಟಿ ನಟಿಸಿರುವ ಮತ್ತೊಂದು ಮಲಯಾಳಂ ಸಿನಿಮಾ ಇಂದು (ಸೆಪ್ಟೆಂಬರ್ 13) ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಧನಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ರಾಜ್ ಬಿ ಶೆಟ್ಟಿ ವಿಲನ್ ಪಾತ್ರದಲ್ಲಿ ನಟಿಸಿರುವ ‘ಕೊಂಡಲ್’ ಹೆಸರಿನ ಸಿನಿಮಾ ಇಂದು ಬಿಡುಗಡೆ ಆಗಿದೆ. ಸಿನಿಮಾದ ಟ್ರೈಲರ್ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ಸಿನಿಮಾ ಮೀನುಗಾರರ ಕತೆಯೊಂದನ್ನು ಹೊಂದಿದ್ದು, ಸಿನಿಮಾದ ಬಹುತೇಕ ಕತೆ ಒಂದು ಮೀನು ಹಿಡಿಯುವ ಬೋಟ್​ನಲ್ಲಿ ನಡೆಯುತ್ತಿರುವಂತೆ ಟ್ರೈಲರ್​ನಿಂದ ತೋರಿ ಬರುತ್ತಿದೆ. ಮೀನು ಹಿಡಿಯಲು ಹೋಗುವವರ ನಡುವಿನ ಸಂಘರ್ಷ, ಹೊಡೆದಾಟ, ತಂತ್ರ-ಕುತಂತ್ರ, ಅವರು ಎದುರಿಸುವ ಸವಾಲುಗಳು, ಅದನ್ನೆಲ್ಲ ಮೀರಿ ನಿಲ್ಲುವ ನಾಯಕ ಇನ್ನಿತರೆ ವಿಷಯಗಳು ಸಿನಿಮಾದ ಕತೆಯಲ್ಲಿರುವಂತಿದೆ.

ಇದನ್ನೂ ಓದಿ:ಹಿಂದಿಗೆ ರಾಜ್ ಬಿ ಶೆಟ್ಟಿ, ಬಾಲಿವುಡ್ ಸಿನಿಮಾ ಒಪ್ಪಿಕೊಳ್ಳಲು ಕಾರಣ ಯಾರು?

ಸಿನಿಮಾದ ಟ್ರೈಲರ್ ಭರ್ಜರಿಯಾಗಿದೆ. ಸಿನಿಮಾವನ್ನು ಸುಂದರವಾಗಿ ಚಿತ್ರೀಕರಿಸುವುದು ಟ್ರೈಲರ್​ನಲ್ಲಿ ತಿಳಿದು ಬರುತ್ತಿದೆ. ಟ್ರೈಲರ್​ನ ಕೊನೆಯಲ್ಲಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಕೊನೆಯಲ್ಲಿ ಕಾಣಿಸಿಕೊಂಡರೂ ಸಹ ಅವರದ್ದು ಬಹಳ ಪ್ರಮುಖವಾದ ಪಾತ್ರ ಎಂಬುದು ಅವರ ಎಂಟ್ರಿಯಿಂದಲೇ ತಿಳಿದು ಬರುತ್ತಿದೆ. ಸಿನಿಮಾದಲ್ಲಿ ಆಂಟೊನಿ ವರ್ಗೀಸ್ ಪೆಪೆ ನಾಯಕ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಅಜಿತ್ ಮಾಂಪಲ್ಲಿ, ಸಿನಿಮಾಕ್ಕೆ ಬಂಡವಾಳ ಹೂಡಿರುವುದು ಈ ಹಿಂದೆ, ‘ಬ್ಯಾಂಗಳೂರ್ ಡೇಸ್’, ‘ಮಿನ್ನಲ್ ಮುರಲಿ’, ‘ತಲ್ಲುಮಾಲ’, ‘ಆರ್​ಡಿಎಕ್ಸ್’ ಸಿನಿಮಾಗಳನ್ನು ನಿರ್ಮಿಸಿರುವ ನಿರ್ಮಾಣ ಸಂಸ್ಥೆ.

ರಾಜ್ ಬಿ ಶೆಟ್ಟಿ ನಟಿಸಿರುವ ಎರಡನೇ ಮಲಯಾಳಂ ಸಿನಿಮಾ ಇದಾಗಿದೆ. ಇತ್ತೀಚೆಗಷ್ಟೆ ರಾಜ್ ಬಿ ಶೆಟ್ಟಿ ಹಿಂದಿ ಸಿನಿಮಾ ಒಂದರಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಅವರ ನೆಚ್ಚಿನ ನಿರ್ದೇಶಕ ಅನುರಾಗ್ ಕಶ್ಯಪ್ ನಿರ್ದೇಶನ ಮಾಡುತ್ತಿರುವ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದಾರೆ. ಇನ್ನು ಕನ್ನಡದಲ್ಲಿ ಶಿವರಾಜ್ ಕುಮಾರ್, ಉಪೇಂದ್ರ ನಟಿಸುತ್ತಿರುವ ‘45’ ಸಿನಿಮಾದಲ್ಲಿ ಶೆಟ್ಟಿಯವರದ್ದು ಪ್ರಮುಖ ಪಾತ್ರ. ‘ರುಧಿರಂ’ ಸಿನಿಮಾದಲ್ಲಿಯೂ ಶೆಟ್ಟರು ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ