AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಬರಲಿದೆ ರಾಜ್ ಬಿ ಶೆಟ್ಟಿ ನಟನೆಯ ಹಿಂದಿ ಸಿನಿಮಾ, ಎಲ್ಲಿ? ಯಾವಾಗ?

Raj B Shetty movie: ರಾಜ್ ಬಿ ಶೆಟ್ಟಿ ಬಹುಮುಖ ಪ್ರತಿಭೆಯ ನಟ. ಅವರ ನಟನಾ ಪ್ರತಿಭೆಗೆ ಪರಭಾಷೆಗಳಿಂದಲೂ ಅವರಿಗೆ ಅವಕಾಶಗಳು ಬರುತ್ತಲೇ ಇರುತ್ತವೆ. ಈಗಾಗಲೇ ಕೆಲ ಮಲಯಾಳಂ ಸಿನಿಮಾಗಳಲ್ಲಿ ರಾಜ್ ಬಿ ಶೆಟ್ಟಿ ನಟಿಸಿದ್ದಾರೆ. ಇತ್ತೀಚೆಗೆ ಅವರ ಹಿಂದಿ ಸಿನಿಮಾ ಒಂದರಲ್ಲೂ ನಟಿಸಿದ್ದರು. ಆದರೆ ಆ ಸಿನಿಮಾ ದೊಡ್ಡ ಯಶಸ್ಸು ಕಾಣಲಿಲ್ಲ ಆದರೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿತ್ತು. ಆ ಸಿನಿಮಾ ಈಗ ಒಟಿಟಿಗೆ ಬರುತ್ತಿದೆ.

ಒಟಿಟಿಗೆ ಬರಲಿದೆ ರಾಜ್ ಬಿ ಶೆಟ್ಟಿ ನಟನೆಯ ಹಿಂದಿ ಸಿನಿಮಾ, ಎಲ್ಲಿ? ಯಾವಾಗ?
Raj B Shetty
ಮಂಜುನಾಥ ಸಿ.
|

Updated on: Aug 21, 2026 | 11:21 AM

Share

ರಾಜ್ ಬಿ ಶೆಟ್ಟಿ (Raj B Shetty), ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ನಿರ್ದೇಶಕ ಹಾಗೂ ನಿರ್ಮಾಪಕರೂ ಹೌದು. ಹಲವು ಅತ್ಯುತ್ತಮ ಸಿನಿಮಾಗಳನ್ನು ಅವರು ನೀಡಿದ್ದಾರೆ. ರಾಜ್ ಬಿ ಶೆಟ್ಟಿ ಅವರ ನಟನಾ ಪ್ರತಿಭೆಗೆ ಪರ ಭಾಷೆಗಳಿಂದಲೂ ಅವಕಾಶಗಳು ಅರಸಿ ಬಂದಿದ್ದು, ಈಗಾಗಲೇ ಅವರು ಕೆಲ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೆ ರಾಜ್ ಬಿ ಶೆಟ್ಟಿ ಹಿಂದಿ ಸಿನಿಮಾ ಒಂದರಲ್ಲಿ ಸಹ ನಟಿಸಿದ್ದರು. ಸಿನಿಮಾ ಸಣ್ಣ ವಿವಾದವನ್ನೂ ಸೃಷ್ಟಿಸಿತ್ತು, ಅನುರಾಗ್ ಕಶ್ಯಪ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಚಿತ್ರಮಂದಿರದಲ್ಲಿ ದೊಡ್ಡ ಯಶಸ್ಸು ಗಳಿಸಿರಲಿಲ್ಲ ಆದರೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿತ್ತು. ಆ ಸಿನಿಮಾ ಇದೀಗ ಒಟಿಟಿಗೆ ಬರುತ್ತಿದೆ.

‘ಬಂದರ್’ ಹೆಸರಿನ ಹಿಂದಿ ಸಿನಿಮಾನಲ್ಲಿ ರಾಜ್ ಬಿ ಶೆಟ್ಟಿ ನಟಿಸಿದ್ದರು. ಸಿನಿಮಾನಲ್ಲಿ ಬಾಬಿ ಡಿಯೋಲ್ ನಾಯಕ. ಟಿವಿ ಸೆಲೆಬ್ರಿಟಿಯೊಬ್ಬನ ಮೇಲೆ ಆಕೆಯ ಗರ್ಲ್​​ಫ್ರೆಂಡ್ ಅತ್ಯಾಚಾರದ ಸುಳ್ಳು ಆರೋಪ ಹೊರಿಸಿ ಜೈಲು ಪಾಲು ಮಾಡುವ ಹಾಗೂ ಜೈಲಿನಲ್ಲಿ ಆ ಸೆಲೆಬ್ರಿಟಿ ಎದುರಿಸುವ ಸಮಸ್ಯೆ, ಅಲ್ಲಿಂದ ಬಿಡುಗಡೆ ಆಗುವುದು ಈ ನಡುವೆ ಆತ ಜೀವನ ಪಾಠಗಳನ್ನು ಕಲಿಯುವ ಕತೆಯನ್ನು ‘ಬಂದರ್’ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ರಾಜ್ ಬಿ ಶೆಟ್ಟಿ, ಜೈಲು ಖೈದಿಯ ಪಾತ್ರದಲ್ಲಿ ನಟಿಸಿದ್ದಾರೆ. ಇದೀಗ ಈ ಸಿನಿಮಾ ಒಟಿಟಿಗೆ ಬರುತ್ತಿದೆ. ಆಗಸ್ಟ್ 28ರಂದು ಜೀ5 ಒಟಿಟಿಯಲ್ಲಿ ಸಿನಿಮಾ ರಿಲೀಸ್ ಆಗಲಿದೆ.

‘ಬಂದರ್’ ಸಿನಿಮಾದ ‘ಪಿಂಜರಾ’ ಹಾಡು ಸಖತ್ ಹಿಟ್ ಆಗಿದೆ. ಹಾಡಿನಲ್ಲಿ ರಾಜ್ ಬಿ ಶೆಟ್ಟಿ ಮತ್ತು ಮತ್ತೊಬ್ಬ ಕನ್ನಡದ ಯುವ ನಿರ್ದೇಶಕ ನಟೇಶ್ ಇಬ್ಬರೂ ಸಖತ್ ಆಗಿ ಹಾಡಿ ಕುಣಿದಿದ್ದಾರೆ. ರಾಜ್ ಬಿ ಶೆಟ್ಟಿ ಅವರಿಗೆ ‘ಬಂದರ್’ ಮೊದಲ ಹಿಂದಿ ಸಿನಿಮಾ. ಅನುರಾಗ್ ಕಶ್ಯಪ್ ಈ ಸಿನಿಮಾ ನಿರ್ದೇಶನ ಮಾಡಿದ್ದು, ಸಿನಿಮಾದ ಬಗ್ಗೆ ಕೆಲವರು ಟೀಕೆ ಸಹ ಮಾಡಿದ್ದರು. ಇದು ‘ಮೀಟೂ’ ಚಳವಳಿಗೆ ವಿರುದ್ಧವಾದ ಧ್ವನಿ ಹೊಂದಿದೆ ಎಂದು ಸಹ ಹೇಳಿದರು.

ಇದನ್ನೂ ಓದಿ:‘ಕರಾವಳಿ’ ಸಿನಿಮಾ ಒಪ್ಪಿಕೊಂಡಿದ್ದೇಕೆ: ವಿವರಿಸಿದ ರಾಜ್ ಬಿ ಶೆಟ್ಟಿ

ಸಂದರ್ಶನವೊಂದರಲ್ಲಿ ಮಾತನಾಡಿದ ಅನುರಾಗ್ ಕಶ್ಯಪ್, ಚಿತ್ರಮಂದಿರದಲ್ಲಿ ಬಿಡುಗಡೆ ಆದ ಸಿನಿಮಾಕ್ಕೂ ನಾನು ಅಂದುಕೊಂಡಿದ್ದ ಸಿನಿಮಾಕ್ಕೂ ಬಹಳ ವ್ಯತ್ಯಾಸವಿದೆ. ಆ ಸಿನಿಮಾದ ಫೈನಲ್ ಕಟ್ ನಾನಂದುಕೊಂಡಂತೆ ಮೂಡಿಬರಲಿಲ್ಲ. ಅದು ಸಂಪೂರ್ಣವಾಗಿ ನನ್ನ ಸಿನಿಮಾ ಅಲ್ಲ ಎಂದರು. ಅನುರಾಗ್ ಅವರ ಈ ಹೇಳಿಕೆ ವಿವಾದ ಸೃಷ್ಟಿಸಿತ್ತು. ಕೆಲವು ಆಪ್ತರಿಗೆ ‘ಬಂದರ್’ ಸಿನಿಮಾ ನೋಡುವ ಅವಶ್ಯಕೆ ಇಲ್ಲ ಎಂದು ಖುದ್ದು ಅನುರಾಗ್ ಹೇಳಿದ್ದರಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್