Rajamanaar: ರಾಜಮನಾರ್​ ಪಾತ್ರ ಪರಿಚಯಿಸಿದ ಸಲಾರ್​; ಖಡಕ್​ ಲುಕ್​ನಲ್ಲಿ ಜಗಪತಿ ಬಾಬು

ರಾಜಮನಾರ್​: ಬಿಗ್​ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿರುವ ‘ಸಲಾರ್​’ ಮೇಲೆ ಪ್ರಭಾಸ್​ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. 2022ರ ಏಪ್ರಿಲ್​ 14ರಂದು ಈ ಸಿನಿಮಾ ಬಿಡುಗಡೆ ಮಾಡಲಾಗುವುದು ಎಂದು ಈ ಮೊದಲು ಅಧಿಕೃತವಾಗಿ ಘೋಷಿಸಲಾಗಿತ್ತು

Rajamanaar: ರಾಜಮನಾರ್​ ಪಾತ್ರ ಪರಿಚಯಿಸಿದ ಸಲಾರ್​; ಖಡಕ್​ ಲುಕ್​ನಲ್ಲಿ ಜಗಪತಿ ಬಾಬು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 23, 2021 | 11:06 AM

ಪ್ರಭಾಸ್​ ನಟನೆಯ ಹಾಗೂ ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ದೊಡ್ಡಮಟ್ಟದ ನಿರೀಕ್ಷೆ ಇದೆ. ಈ ಸಿನಿಮಾ ಅಪ್​ಡೇಟ್​ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈಗ ಚಿತ್ರತಂಡ ರಾಜಮನಾರ್​ ಪಾತ್ರವನ್ನು ಪರಿಚಯಿಸಿದೆ. ಇದರಲ್ಲಿ ಟಾಲಿವುಡ್​ನ ಖ್ಯಾತ ನಟ ಜಗಪತಿ ಬಾಬು ನಟಿಸುತ್ತಿದ್ದಾರೆ. 

ಜಗಪತಿ ಬಾಬು ವಿಲನ್​ ಪಾತ್ರಗಳ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದಾರೆ. ಈಗ ಅವರು ಸಲಾರ್​ಗೆ ವಿಲನ್​ ಆಗುತ್ತಾರೆ ಎನ್ನುವ ವಿಚಾರ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಅವರ ಖಡಕ್​ ಲುಕ್​ ನೋಡಿ ಫ್ಯಾನ್ಸ್  ಸಾಕಷ್ಟು ಖುಷಿಪಟ್ಟಿದ್ದಾರೆ.

ಬಿಗ್​ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿರುವ ‘ಸಲಾರ್​’ ಮೇಲೆ ಪ್ರಭಾಸ್​ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. 2022ರ ಏಪ್ರಿಲ್​ 14ರಂದು ಈ ಸಿನಿಮಾ ಬಿಡುಗಡೆ ಮಾಡಲಾಗುವುದು ಎಂದು ಈ ಮೊದಲು ಅಧಿಕೃತವಾಗಿ ಘೋಷಿಸಲಾಗಿತ್ತು. ಆದರೆ ಅದೇ ದಿನಾಂಕದಲ್ಲೇ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ತೆರೆಕಾಣಲಿದೆ ಎಂದು ನಿರ್ಮಾಪಕರು ಮಾಹಿತಿ ಬಹಿರಂಗ ಮಾಡಿದ್ದಾರೆ. ಹಾಗಾಗಿ ‘ಸಲಾರ್​’ ರಿಲೀಸ್​ ಡೇಟ್​ ಬದಲಾಗುವುದು ಅನಿವಾರ್ಯ ಆಗಿದೆ.

ಬಾಹುಬಲಿ ಸರಣಿ ಸಿನಿಮಾಕ್ಕಾಗಿ ಹೆಚ್ಚು ಸಮಯ ತೆಗೆದುಕೊಂಡಿದ್ದ ಪ್ರಭಾಸ್​ ಅವರು ಈಗ ವೇಗವಾಗಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಸಾಹೋ ನಂತರ ಅವರು ಬ್ಯಾಕ್​ ಟು ಬ್ಯಾಕ್​ ಹೊಸ ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ‘ರಾಧೆ ಶ್ಯಾಮ್​’, ‘ಸಲಾರ್​’, ‘ಆದಿಪುರುಷ್​’ ಮುಂತಾದ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಇತ್ತ ಪ್ರಶಾಂತ್​ ನೀಲ್​ ಕೂಡ ಬ್ಯುಸಿ. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಕೆಲಸಗಳು ಲಾಕ್​ಡೌನ್​ ಕಾರಣದಿಂದ ತಡವಾಗಿವೆ

ಇದನ್ನೂ ಓದಿ: KGF 2 Release Date: 2022 ಏಪ್ರಿಲ್​ 14ಕ್ಕೆ ‘ಕೆಜಿಎಫ್: ಚಾಪ್ಟರ್​ 2’ ರಿಲೀಸ್​; ಬ್ರೇಕಿಂಗ್​ ನ್ಯೂಸ್​ ನೀಡಿದ ಯಶ್​-ಪ್ರಶಾಂತ್​ ನೀಲ್​​

​ಯಶ್​ ಎಂಟ್ರಿಗೆ ಜಾಗ ಬಿಟ್ಟುಕೊಟ್ಟ ಪ್ರಭಾಸ್​; ‘ಕೆಜಿಎಫ್​ 2’ ಚಿತ್ರಕ್ಕಾಗಿ ‘ಸಲಾರ್​’ ರಿಲೀಸ್​ ದಿನಾಂಕ ಬದಲು?

Published On - 10:37 am, Mon, 23 August 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ