AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಂತಿಲ್ಲ ಮಹೇಶ್​ ಬಾಬು; ಇದು ರಾಜಮೌಳಿ ಆದೇಶ

ರಾಜಮೌಳಿ ಜೊತೆ ಸಿನಿಮಾ ಮಾಡುವ ಹೀರೋಗಳು ಹಗಲಿರುಳು ಕಷ್ಟಪಡಲು ಸಿದ್ಧವಾಗಿರಬೇಕು. ಕಠಿಣ ನಿಯಮಗಳನ್ನು ಪಾಲಿಸಬೇಕು. ಈಗ ಮಹೇಶ್​ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್​ನ ಸಿನಿಮಾಗೆ ಸಕಲ ತಯಾರಿ ನಡೆಯುತ್ತಿದೆ. ತಯಾರಿಯ ಹಂತದಲ್ಲೇ ಮಹೇಶ್​ ಬಾಬುಗೆ ರಾಜಮೌಳಿ ಅವರು ಒಂದಷ್ಟು ನಿಯಮಗಳನ್ನು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ಮುಂದೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಂತಿಲ್ಲ ಮಹೇಶ್​ ಬಾಬು; ಇದು ರಾಜಮೌಳಿ ಆದೇಶ
ರಾಜಮೌಳಿ, ಮಹೇಶ್​ ಬಾಬು
Follow us
ಮದನ್​ ಕುಮಾರ್​
|

Updated on:Feb 22, 2024 | 8:50 AM

ನಟ ಮಹೇಶ್​ ಬಾಬು (Mahesh Babu) ಅವರನ್ನು ಕಂಡರೆ ಅಭಿಮಾನಿಗಳಿಗೆ ತುಂಬ ಪ್ರೀತಿ. ಅವರನ್ನು ನೇರವಾಗಿ ನೋಡಬೇಕು ಎಂಬುದು ಲಕ್ಷಾಂತರ ಮಂದಿಯ ಬಯಕೆ. ಆದರೆ ಇನ್ಮುಂದೆ ಮಹೇಶ್​ ಬಾಬು ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅನುಮಾನ. ಯಾವುದೇ ಸಭೆ, ಸಮಾರಂಭಗಳಿಗೆ ಅವರು ಹಾಜರಿ ಹಾಕಬಾರದು ಎಂದು ಆದೇಶ ಹೊರಡಿಸಲಾಗಿದೆ. ಹಾಗಂತ ಇದು, ಸರ್ಕಾರದ ಆದೇಶ ಅಲ್ಲ. ಬದಲಿಗೆ, ನಿರ್ದೇಶಕ ಎಸ್​.ಎಸ್​. ರಾಜಮೌಳಿ ಅವರು ಹಾಕಿರುವ ನಿಯಮ. ಹೀಗೊಂದು ಸುದ್ದಿ ಟಾಲಿವುಡ್ (Tollywood)​ ಅಂಗಳಲ್ಲಿ ಹರಿದಾಡುತ್ತಿದೆ. ಮಹೇಶ್​ ಬಾಬು ಅವರು ಇನ್ಮುಂದೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳಬಾರದು ಎಂದು ರಾಜಮೌಳಿ (SS Rajamouli) ಅವರು ಹೇಳಿದ್ದಾರೆ ಎನ್ನಲಾಗಿದೆ. ಅದಕ್ಕೆ ಒಂದು ಕಾರಣ ಕೂಡ ಇದೆ.

ಈಗಾಗಲೇ ತಿಳಿದಿರುವಂತೆ ಮಹೇಶ್​ ಬಾಬು ಮತ್ತು ರಾಜಮೌಳಿ ಅವರು ಜೊತೆಯಾಗಿ ಸಿನಿಮಾ ಮಾಡಲಿದ್ದಾರೆ. ಅದರ ಪ್ರೀ-ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಸಿನಿಮಾದ ಪಾತ್ರಕ್ಕಾಗಿ ಮಹೇಶ್​ ಬಾಬು ಅವರು ಗೆಟಪ್​ ಬದಲಿಸಿಕೊಳ್ಳಲಿದ್ದಾರೆ. ಅಲ್ಲದೇ ಅವರು ಬಾಡಿ ಬಿಲ್ಡ್​ ಮಾಡಲಿದ್ದಾರೆ. ಅವರ ಹೊಸ ಗೆಟಪ್​ ಹೇಗಿದೆ ಎಂಬುದು ಜನರಿಗೆ ಗೊತ್ತಾಗಬಾರದು. ಆ ಕಾರಣದಿಂದ ಮಹೇಶ್​ ಬಾಬು ಸಾರ್ವಜನಿಕವಾಗಿ ಕಾಣಿಸಿಕೊಳ್ಳಬಾರದು ಎಂದು ರಾಜಮೌಳಿ ಸೂಚಿಸಿದ್ದಾರೆ ಎಂದು ಸುದ್ದಿ ಆಗಿದೆ.

ಬೇರೆ ನಿರ್ದೇಶಕರಿಗೆ ಹೋಲಿಸಿದರೆ ರಾಜಮೌಳಿ ಅವರು ಕೆಲಸ ಮಾಡುವ ವಿಧಾನವೇ ಬೇರೆ. ತುಂಬ ಶ್ರಮವಹಿಸಿ, ಸಾಕಷ್ಟು ಸಮಯ ತೆಗೆದುಕೊಂಡು ಅವರು ಸಿನಿಮಾ ಮಾಡುತ್ತಾರೆ. ಅದಕ್ಕೆ ತಕ್ಕಂತೆ ಹೀರೋಗಳು ಸ್ಪಂದಿಸಬೇಕು. ಮುಖ್ಯವಾಗಿ ಅವರ ಸಿನಿಮಾಗಳಲ್ಲಿ ಹೀರೋ ಗೆಟಪ್​ ಬದಲಾಗುತ್ತದೆ. ಅದಕ್ಕೆ ಮಹೇಶ್​ ಬಾಬು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ವಿದೇಶದ ಟ್ರೇನರ್​ಗಳಿಂದ ಅವರು ತರಬೇತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ರಾಮನಾಗಿ ಮಹೇಶ್​ ಬಾಬು, ಹನುಮಂತನಾಗಿ ಚಿರಂಜೀವಿ? ಇದು ‘ಜೈ ಹನುಮಾನ್​’ ಪ್ಲ್ಯಾನ್​

ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಕಾಣಲಿಲ್ಲ. ಹಾಗಾಗಿ ಮುಂದಿನ ಸಿನಿಮಾದಲ್ಲಿ ಅವರು ಭರ್ಜರಿ ಯಶಸ್ಸು ಪಡೆಯಬೇಕಾದ ಅನಿವಾರ್ಯತೆ ಇದೆ. ರಾಜಮೌಳಿ ಜೊತೆ ಅವರು ಕೈ ಜೋಡಿಸಿರುವುದರಿಂದ ಸಕ್ಸಸ್​ ಗ್ಯಾರಂಟಿ. ಆದರೆ ಆ ಗೆಲುವು ಸುಲಭವಾಗಿ ಧಕ್ಕುವುದಿಲ್ಲ. ಅದಕ್ಕಾಗಿ ಹಗಲಿರುಳು ಕಷ್ಟಪಡಬೇಕು. ಅದೆಲ್ಲದಕ್ಕೂ ಸಿದ್ಧರಾಗಿಯೇ ಮಹೇಶ್​ ಬಾಬು ಅವರು ರಾಜಮೌಳಿ ಜೊತೆ ಕೈ ಜೋಡಿಸಿದ್ದಾರೆ.

ಇದನ್ನೂ ಓದಿ: ರಾಜಮೌಳಿ ನಿರ್ದೇಶನದ ಚಿತ್ರಕ್ಕೆ ಮಹೇಶ್​ ಬಾಬು ನಿರ್ಮಾಣ; ಹಾಗಾದ್ರೆ ನಟನೆ?

ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಮಹೇಶ್​ ಬಾಬು ವೃತ್ತಿ ಜೀವನದ ಅತಿ ದೊಡ್ಡ ಸಿನಿಮಾವಾಗಿ ಈ ಚಿತ್ರ ಮೂಡಿಬರಲಿದೆ. ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ಈ ಬಾರಿ ರಾಜಮೌಳಿ ಅವರು ತಮ್ಮ ತಾಂತ್ರಿಕ ಬಳಗದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ. ಆ ಕಾರಣದಿಂದಲೂ ಸಿನಿಪ್ರಿಯರಿಗೆ ಕುತೂಹಲ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:36 am, Thu, 22 February 24

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​