RRR ಫೈಟಿಂಗ್​ ದೃಶ್ಯದಲ್ಲಿ ರಾಜಮೌಳಿ ಹೊಸ ಪ್ರಯೋಗ; ತಂದೆಯಿಂದಲೇ ಬಯಲಾದ ಸೀಕ್ರೆಟ್​ ಏನು?

ಆರ್​ಆರ್​ಆರ್​ ಚಿತ್ರದ ಸಾಹಸ ದೃಶ್ಯಗಳ ಬಗ್ಗೆ ಒಂದು ಸೀಕ್ರೆಟ್​ ಈಗ ಬಯಲಾಗಿದೆ. ಆ ಗುಟ್ಟು ರಟ್ಟು ಮಾಡಿರುವುದು ನಿರ್ದೇಶಕ ರಾಜಮೌಳಿ ಅವರ ತಂದೆ ಕೆ.ವಿ. ವಿಜಯೇಂದ್ರ ಪ್ರಸಾದ್​. ಅದನ್ನು ಕೇಳಿದ ಬಳಿಕ ಸಿನಿಪ್ರಿಯರ ನಿರೀಕ್ಷೆ ಡಬಲ್​ ಆಗುವುದು ಖಚಿತ.

RRR ಫೈಟಿಂಗ್​ ದೃಶ್ಯದಲ್ಲಿ ರಾಜಮೌಳಿ ಹೊಸ ಪ್ರಯೋಗ; ತಂದೆಯಿಂದಲೇ ಬಯಲಾದ ಸೀಕ್ರೆಟ್​ ಏನು?
ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ರಾಜಮೌಳಿ
Follow us
ಮದನ್​ ಕುಮಾರ್​
|

Updated on: May 27, 2021 | 9:23 AM

ರಾಜಮೌಳಿ ಸಿನಿಮಾ ಎಂದರೆ ಪ್ರೇಕ್ಷಕರಿಗೆ ಎಲ್ಲಿಲ್ಲದ ನಿರೀಕ್ಷೆ ಸೃಷ್ಟಿ ಆಗುತ್ತದೆ. ಭಾರತೀಯ ಚಿತ್ರಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಟ್ಟಿಕೊಡುವ ಅವರ ಬಗ್ಗೆ ಜನರಿಗೆ ಅಪಾರ ಭರವಸೆ ಇದೆ. ಬಾಹುಬಲಿ ಸರಣಿ ಸಿನಿಮಾಗಳ ಮೂಲಕ ಅವರು ತಮ್ಮ ಛಾಪು ಮೂಡಿಸಿದ್ದಾರೆ. ವಿಶ್ವಾದ್ಯಂತ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದಾರೆ. ಈಗ ರಾಜಮೌಳಿ ‘ಆರ್​ಆರ್​ಆರ್​’ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಅದರಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಒಂದು ಸೀಕ್ರೆಟ್​ ಈಗ ಬಯಲಾಗಿದೆ. ಆ ಗುಟ್ಟು ರಟ್ಟು ಮಾಡಿರುವುದು ರಾಜಮೌಳಿ ತಂದೆ ಕೆ.ವಿ. ವಿಜಯೇಂದ್ರ ಪ್ರಸಾದ್​.

ರಾಜಮೌಳಿ ಸಿನಿಮಾಗಳಲ್ಲಿ ಭರ್ಜರಿ ಆ್ಯಕ್ಷನ್​ ದೃಶ್ಯಗಳು ಇದ್ದೇ ಇರುತ್ತವೆ. ಅದು ಆರ್​ಆರ್​ಆರ್​ ವಿಚಾರದಲ್ಲೂ ಖಚಿತ. ಆದರೆ ಈ ಬಾರಿ ಸಾಹಸ ದೃಶ್ಯಗಳಲ್ಲಿ ರಾಜಮೌಳಿ ಒಂದು ಪ್ರಯೋಗ ಮಾಡುತ್ತಿದ್ದಾರೆ. ಆರ್​ಆರ್​ಆರ್​ ಸಿನಿಮಾದ ಫೈಟಿಂಗ್​ ಸೀನ್​ಗಳನ್ನು ನೋಡಿದರೆ ಪ್ರೇಕ್ಷಕರು ಭಾವುಕರಾಗುವುದು ಗ್ಯಾರಂಟಿ ಎನ್ನಲಾಗಿದೆ. ಅಂದರೆ, ಸಾಹಸ ದೃಶ್ಯಗಳನ್ನು ತುಂಬ ಎಮೋಷನಲ್​ ಆಗಿ ರಾಜಮೌಳಿ ಕಟ್ಟಿಕೊಡುತ್ತಿದ್ದಾರಂತೆ. ಈ ಚಿತ್ರಕ್ಕೆ ಕಥೆ ಬರೆದಿರುವ ರಾಜಮೌಳಿ ತಂದೆ ಕೆ.ವಿ. ವಿಜಯೇಂದ್ರ ಪ್ರಸಾದ್​ ಅವರು ಈ ಸೀಕ್ರೆಟ್​ ಬಿಟ್ಟುಕೊಟ್ಟಿದ್ದಾರೆ.

‘ನಮ್ಮ ಸಿನಿಮಾ ಬಗ್ಗೆ ನಾವೇ ಹೆಚ್ಚು ಹೇಳಿಕೊಳ್ಳುವುದು ಸರಿಯಲ್ಲ. ಆದರೆ ಇದು ಎಲ್ಲರ ನಿರೀಕ್ಷೆಗೆ ತಕ್ಕಂತೆ ಮೂಡಿಬರುತ್ತಿದೆ ಎಂದು ನಾನು ಭರವಸೆ ಕೊಡುತ್ತೇನೆ. ಇದೇ ಮೊದಲ ಬಾರಿಗೆ ಆರ್​ಆರ್​ಆರ್​ ಸಿನಿಮಾದ ಸಾಹಸ ದೃಶ್ಯಗಳನ್ನು ನೋಡುವಾಗ ನನಗೆ ಕಣ್ಣೀರು ಬಂತು. ಅಷ್ಟೊಂದು ನೋವಿನ ಕಥೆ ಇದರಲ್ಲಿ ಇದೆ. ಪ್ರೇಕ್ಷಕರಿಗೂ ಅದು ಕನೆಕ್ಟ್​ ಆಗಲಿದೆ’ ಎಂದು ವಿಜಯೇಂದ್ರ ಪ್ರಸಾದ್​ ಹೇಳಿದ್ದಾರೆ. ಈ ಮೂಲಕ ಆರ್​ಆರ್​ಆರ್​ ಬಗ್ಗೆ ನಿರೀಕ್ಷೆ ಹೆಚ್ಚುವಂತೆ ಅವರು ಮಾಡಿದ್ದಾರೆ.

ಅಂದಹಾಗೆ, ಈ ಚಿತ್ರ ಶೂಟಿಂಗ್​ ಮುಗಿಸುವ ಮುನ್ನವೇ ಬಹುಕೋಟಿ ವ್ಯವಹಾರ ಮಾಡಿದೆ. ಚಿತ್ರದ ಡಿಜಿಟಲ್ ಪ್ರಸಾರ ಹಕ್ಕುಗಳು 325 ಕೋಟಿ ರೂ.ಗಳಿಗೆ ಮಾರಾಟವಾಗಿದೆ ಎಂಬ ಸುದ್ದಿ ಹರಡಿದೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ ಮತ್ತು ಟೀಸರ್​ಗಳಿಂದ ಭಾರೀ ನಿರೀಕ್ಷೆ ಸೃಷ್ಟಿ ಆಗಿದೆ. ಇತ್ತೀಚೆಗೆ ಜ್ಯೂ. ಎನ್​ಟಿಆರ್​ ಜನ್ಮದಿನದ ಪ್ರಯುಕ್ತ ಕೊಮರಾಮ್​ ಭೀಮ್​ ಪಾತ್ರದ ಹೊಸ ಲುಕ್​ ಪೋಸ್ಟರ್​ ರಿಲೀಸ್​ ಮಾಡಲಾಗಿತ್ತು. ಬಾಲಿವುಡ್​ ಸ್ಟಾರ್​ ಕಲಾವಿದರಾದ ಅಜಯ್​ ದೇವಗನ್​ ಮತ್ತು ಆಲಿಯಾ ಭಟ್​ ಕೂಡ ಈ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

RRR Ott Rights: 325 ಕೋಟಿ ರೂ.ಗೆ ಸೇಲ್​ ಆಯ್ತು ಆರ್​ಆರ್​ಆರ್ ಚಿತ್ರ; ಯಾವ ಓಟಿಟಿಯಲ್ಲಿ ಪ್ರಸಾರ?

ಮತ್ತೆ ಮತ್ತೆ ಆಲಿಯಾ ಭಟ್​ ಬೇಕು ಎಂದು ಬಯಸಿದ ರಾಮ್​ ಚರಣ್​; ಏನಿದು ವಿಷ್ಯ?

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ