AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಪಾತ್ರದಲ್ಲಿ ರಾಜಮೌಳಿ ತಂದೆ? ವಿಜಯೇಂದ್ರ ಪ್ರಸಾದ್​ಗೆ ಬಂತು ಆಫರ್

ಪ್ರಧಾನಿ ಮೋದಿ ಇತ್ತೀಚಿನ ದಿನಗಳಲ್ಲಿ ಉದ್ದನೆಯ ಗಡ್ಡ ಬಿಟ್ಟಿದ್ದಾರೆ. ಅವರ ಆ ಲುಕ್​ ಅನೇಕರಿಗೆ ಇಷ್ಟವಾಗಿದೆ. ಇದೇ ರೀತಿ ವಿಜಯೇಂದ್ರ ಪ್ರಸಾದ್​ ಕೂಡ ಉದ್ದನೆಯ ಗಡ್ಡದಲ್ಲಿ ಕಾಣಿಸಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಪಾತ್ರದಲ್ಲಿ ರಾಜಮೌಳಿ ತಂದೆ? ವಿಜಯೇಂದ್ರ ಪ್ರಸಾದ್​ಗೆ ಬಂತು ಆಫರ್
ಪ್ರಧಾನಿ ನರೇಂದ್ರ ಮೋದಿ ಪಾತ್ರದಲ್ಲಿ ರಾಜಮೌಳಿ ತಂದೆ? ವಿಜಯೇಂದ್ರ ಪ್ರಸಾದ್​ಗೆ ಬಂತು ಆಫರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 26, 2021 | 2:10 PM

Share

ಖ್ಯಾತ ನಿರ್ದೇಶಕ ಎಸ್​.ಎಸ್​. ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್​ ಅವರ ಪರಿಚಯವನ್ನು ಹೊಸದಾಗಿ ಹೇಳಬೇಕಿಲ್ಲ. ಅದ್ಭುತ ಕಥೆಗಳನ್ನು ರಚಿಸುವುದರಲ್ಲಿ ಅವರು ಎತ್ತಿದ ಕೈ. ‘ಬಾಹುಬಲಿ’, ‘ಬಾಹುಬಲಿ 2’, ‘ಬಜರಂಗಿ ಭಾಯಿಜಾನ್’, ‘ಆರ್​ಆರ್​ಆರ್​’ ಸೇರಿ ಸಾಕಷ್ಟು ಹಿಟ್​ ಸಿನಿಮಾಗಳಿಗೆ ಕಥೆ ಕೊಟ್ಟಿದ್ದು ಇವರೇ. ಕೆಲ ಸಿನಿಮಾಗಳನ್ನೂ ಅವರು ನಿರ್ದೇಶನ ಮಾಡಿದ್ದಾರೆ. ಆದರೆ, ಈ ವರೆಗೆ ಅವರು ನಟನೆಗೆ ಇಳಿದಿಲ್ಲ. ಸಾಕಷ್ಟು ಸಿನಿಮಾ ಆಫರ್​ಗಳನ್ನು ಅವರು ತಿರಸ್ಕರಿಸಿದ್ದಾರೆ ಎನ್ನಲಾಗಿದೆ. ಈಗ ಪ್ರಧಾನಿ ನರೇಂದ್ರ ಮೋದಿ ಪಾತ್ರದಲ್ಲಿ ಕಾಣಿಸಿಕೊಳ್ಳೋಕೆ ಅವರಿಗೆ ಆಫರ್​ ಬಂದಿದೆ ಎನ್ನುವ ಮಾತು ಟಾಲಿವುಡ್​ ಅಂಗಳದಲ್ಲಿ ಜೋರಾಗಿದೆ.

ಪ್ರಧಾನಿ ಮೋದಿ ಇತ್ತೀಚಿನ ದಿನಗಳಲ್ಲಿ ಉದ್ದನೆಯ ಗಡ್ಡ ಬಿಟ್ಟಿದ್ದಾರೆ. ಅವರ ಆ ಲುಕ್​ ಅನೇಕರಿಗೆ ಇಷ್ಟವಾಗಿದೆ. ಇದೇ ರೀತಿ ವಿಜಯೇಂದ್ರ ಪ್ರಸಾದ್​ ಕೂಡ ಉದ್ದನೆಯ ಗಡ್ಡದಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರ ಹಾವ ಭಾವ, ಲುಕ್​ ಎಲ್ಲವೂ ಬೇರೆ ರೀತಿ ಆಗಿದೆಯಾದರೂ ಇವರ ಗಡ್ಡದಲ್ಲಿ ಸಾಮ್ಯತೆ ಇದೆ. ಇದು ಟಾಲಿವುಡ್​ ಸಿನಿಮಾ ಮಂದಿಯ ಕಣ್ಣು ಕುಕ್ಕಿದೆ.

ಯುವ ನಿರ್ದೇಶಕರೊಬ್ಬರು ನರೇಂದ್ರ ಮೋದಿ ಜೀವನ ಆಧರಿಸಿ ಕಿರುಚಿತ್ರ ಮಾಡುತ್ತಿದ್ದಾರೆ. ಬಹಳ ಕಡಿಮೆ ಅವಧಿಯಲ್ಲಿ ಸಾಕಷ್ಟು ವಿಚಾರಗಳನ್ನು ತೋರಿಸುವ ಆಲೋಚನೆ ಅವರದ್ದು. ಈ ಕಿರುಚಿತ್ರದಲ್ಲಿ ನರೇಂದ್ರ ಮೋದಿ ಪಾತ್ರಕ್ಕೆ ಯಾರು ಸೂಕ್ತ ಎನ್ನುವ ಬಗ್ಗೆ ಆ ಯುವ ನಿರ್ದೇಶಕ ಸಾಕಷ್ಟು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅವರಿಗೆ ವಿಜಯೇಂದ್ರ ಪ್ರಸಾದ್​ ಲುಕ್​ ನೆನಪಿಗೆ ಬಂದಿದೆ ಎನ್ನಲಾಗುತ್ತಿದೆ.

ವಿಜಯೇಂದ್ರ ಪ್ರಸಾದ್​ ಅವರು ಈವರೆಗೆ ಒಂದೇ ಒಂದು ಸಿನಿಮಾದಲ್ಲಿ ನಟಿಸಿಲ್ಲ. ಈಗ ಅವರಿಗೆ ಬಂದಿರುವ ಈ ಆಫರ್​ ಕೇಳಿ ಹೇಗೆ ಪ್ರತಿಕ್ರಿಯಿಸಿದ್ದಾರೆ, ಈ ಆಫರ್​ಅನ್ನು ಅವರು ಒಪ್ಪಿಕೊಳ್ಳುತ್ತಾರಾ? ಅನ್ನೋದು ಸದ್ಯದ ಕುತೂಹಲ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬರಬೇಕಿದೆ. ಒಂದೊಮ್ಮೆ ಅವರು ಈ ಪಾತ್ರ ಒಪ್ಪಿಕೊಂಡರೆ ಇದೇ ಮೊದಲ ಬಾರಿಗೆ ಅವರು ನಟನೆಗೆ ಇಳಿದಂತಾಗುತ್ತದೆ.

ಇದನ್ನೂ ಓದಿ: ನಿರ್ದೇಶಕ ರಾಜಮೌಳಿಗೆ ‘ನಾವ್ ರೆಡಿ ಸಾರ್’ ಎಂದ RRR ಹೀರೋಗಳು

ರಾಜಮೌಳಿ ರಿಜೆಕ್ಟ್​ ಮಾಡಿದ್ದ ಸಲ್ಮಾನ್​ ಖಾನ್ ಸಿನಿಮಾ ಸೂಪರ್​ ಹಿಟ್​; ವಿಜಯೇಂದ್ರ ಪ್ರಸಾದ್​ ಪಶ್ಚಾತ್ತಾಪ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ