AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂತಹ ಸಿನಿಮಾ ಮಾಡಲು ಧೈರ್ಯ ಬೇಕು’; ‘ಧುರಂಧರ್ 2’ ಹಾಡಿ ಹೊಗಳಿದ ರಾಜಮೌಳಿ

ಖ್ಯಾತ ನಿರ್ದೇಶಕ ರಾಜಮೌಳಿ 'ಧುರಂಧರ್ 2' ಸಿನಿಮಾ ವೀಕ್ಷಿಸಿ ಭಾರಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 4 ಗಂಟೆಗಳ ಈ ಚಿತ್ರವನ್ನು ಮಾಡಲು ಧೈರ್ಯ ಬೇಕು ಎಂದಿದ್ದಾರೆ. ಚಿತ್ರಕಥೆ, ನಿರ್ದೇಶನ, ಸಂಗೀತ, ಭಾವನಾತ್ಮಕ ಅಂಶಗಳು ಅದ್ಭುತ ಎಂದಿರುವ ರಾಜಮೌಳಿ, ರಣವೀರ್ ಸಿಂಗ್ ಅವರ ಅಭಿನಯವನ್ನು ಮಾಸ್ಟರ್‌ಕ್ಲಾಸ್ ಎಂದು ಹೊಗಳಿದ್ದಾರೆ.

‘ಇಂತಹ ಸಿನಿಮಾ ಮಾಡಲು ಧೈರ್ಯ ಬೇಕು’; ‘ಧುರಂಧರ್ 2’ ಹಾಡಿ ಹೊಗಳಿದ ರಾಜಮೌಳಿ
Rajamouli
ರಾಜೇಶ್ ದುಗ್ಗುಮನೆ
|

Updated on: Mar 21, 2026 | 1:28 PM

Share

ಖ್ಯಾತ ನಿರ್ದೇಶಕ ಎಸ್​​ಎಸ್​ ರಾಜಮೌಳಿ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ದೊಡ್ಡ ನಿರ್ದೇಶಕರಾದರೂ ಯಾವುದೇ ಸಿನಿಮಾ ರಿಲೀಸ್ ಆದರೂ ಆ ಚಿತ್ರವನ್ನು ನೋಡಿ ವಿಮರ್ಶೆ ತಿಳಿಸುತ್ತಾರೆ. ಈಗ ‘ಧುರಂಧರ್ 2’ ಸಿನಿಮಾವನ್ನು ಅವರು ವೀಕ್ಷಿಸಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಲವು ವಿಷಯಗಳು ಇಷ್ಟ ಆಗಿವೆ. ಈ ಬಗ್ಗೆ ಅವರು ಟ್ವಿಟರ್ ಅಲ್ಲಿ ತಮ್ಮ ವಿಮರ್ಶೆಯನ್ನು ಹಂಚಿಕೊಂಡಿದ್ದಾರೆ. ರಣವೀರ್ ಸಿಂಗ್ ನಟನೆ ಅವರಿಗೆ ಇಷ್ಟ ಆಗಿದೆ.

ತೆಲುಗಿನಲ್ಲಿ ಮಹೇಶ್ ಬಾಬು, ಅಲ್ಲು ಅರ್ಜುನ್ ಸೇರಿದಂತೆ ಅನೇಕರು ರಾಜಮೌಳಿ ಸಿನಿಮಾನ ವೀಕ್ಷಣೆ ಮಾಡಿದ್ದಾರೆ. ಎಲ್ಲರೂ ‘ಧುರಂಧರ್ 2’ ಸಿನಿಮಾ ವೀಕ್ಷಣೆ ಮಾಡಿ ವಿಮರ್ಶೆ ತಿಳಿಸಿದ್ದಾರೆ. ಈಗ ರಾಜಮೌಳಿ ಸರದಿ. ಅವರಿಗೂ ಸಿನಿಮಾ ಇಷ್ಟ ಆಗಿದೆ. ಮೊದಲ ಭಾಗಕ್ಕಿಂತ ಎರಡನೇ ಭಾಗ ಚೆನ್ನಾಗಿದೆ ಎಂದು ಅವರು ಹೇಳಿದ್ದಾರೆ.

‘ಧುರಂಧರ್ 2 ಸಿನಿಮಾದ ಬರಹ, ಪಾತ್ರವರ​್ಗ, ತಾಂತ್ರಿಕವಾಗಿ ಸಿನಿಮಾ ತಂದಿದ್ದು, ಸಂಗೀತ, ಡಿಸೈನ್, ನಿರ್ದೇಶನ ಎಲ್ಲವೂ ಅದ್ಭುತ. ಭಾವನಾತ್ಮಕ ಅಂಶಗಳು ಉತ್ತಮವಾಗಿವೆ. ಬರವಣಿಗೆಯು ಟ್ವಿಸ್ಟ್​​ಗಳನ್ನು ಅದ್ಭುತವಾಗಿ ಮೂಡಿಸಿದೆ. 4 ಗಂಟೆಗಳ ಸಿನಿಮಾ ಮಾಡಿ ಅದನ್ನು ಬಿಡುಗಡೆ ಮಾಡಲು ಧೈರ್ಯ ಬೇಕು. ಕೊನೆಯ ಫ್ರೇಮ್‌ನವರೆಗೂ ಜನರನ್ನು ಸಿನಿಮಾ ಹಿಡಿದಿಡುತ್ತದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಪತಿಯ ಸಿನಿಮಾ ದೊಡ್ಡ ಸಕಸ್ಸ್ ಕಂಡರೂ ತುಟಿಪಿಟಿಕ್ ಎನ್ನದ ದೀಪಿಕಾ ಪಡುಕೋಣೆ ‘ರಣವೀರ್ ಸಿಂಗ್ ಅವರೇ ಎಂತಹ ಅದ್ಭುತ ಪರ್ಫಾರ್ಮೆನ್ಸ್. ಶೆಡ್‌ನಲ್ಲಿ ನಡೆಯುವ ಸನ್ನಿವೇಶ ನಟನೆಯಲ್ಲಿ ಒಂದು ಮಾಸ್ಟರ್‌ಕ್ಲಾಸ್. ನೀವು ಹಮ್ಜಾ ಮತ್ತು ಜಸ್ಕಿರತ್ ಆಗಿ ನಮ್ಮಿಬ್ಬರನ್ನೂ ಮಂತ್ರಮುಗ್ಧಗೊಳಿಸಿದ್ದೀರಿ. ಮಾಧವನ್ ಕೂಡ ಅದ್ಭಯತ. ಅದ್ಭುತ ಯಶಸ್ಸಿಗೆ ಇಡೀ ತಂಡಕ್ಕೆ ಅಭಿನಂದನೆಗಳು’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ